ಕೆಕೆಆರ್‌ಟಿಸಿ ಕಲಬುರಗಿ-ಬೆಳಗಾವಿ ಅಮೋಘವರ್ಷ ಬಸ್, ವೇಳಾಪಟ್ಟಿ
ಕಲಬುರಗಿ, ಜೂನ್ 09: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) 'ಅಮೋಘವರ್ಷ' ಹೆಸರಿನ ಐಷಾರಾಮಿ ಹವಾನಿಯಂತ್ರಣ ರಹಿತ ಬಸ್ ಸೇವೆಗೆ ಚಾಲನೆ ನೀಡಿದೆ. ಈ ಬಸ್ ಕಲಬುರಗಿ, ಪಣಜಿ ನಡುವೆ ವಯಾ ಬೆಳಗಾವಿ ಸಂಚಾರ ನಡೆಸಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಕೆಆರ್‌ಟಿಸಿಯ 'ಅಮೋಘವರ್ಷ' ಹೆಸರಿನ ಐಷಾರಾಮಿ ಹವಾನಿಯಂತ್ರಣ ಸಹಿತ ಮತ್ತು ಹವಾನಿಯಂತ್ರಣ ರಹಿತ ಬಸ್‌ಗಳಿಗೆ 2023ರ ಸೆಪ್ಟೆಂಬರ್‌ನಲ್ಲಿ ಚಾಲನೆ ನೀಡಿದ್ದರು. ವಿವಿಧ ಮಾರ್ಗದಲ್ಲಿ ಈ ಮಾದರಿಯ ಬಸ್‌ಗಳು ಸಂಚಾರ ನಡೆಸುತ್ತಿವೆ.

ಕನ್ನಡದ ಮೊಟ್ಟ ಮೊದಲ ಉಪಲಬ್ಧ ಗ್ರಂಥ 'ಕವಿರಾಜ ಮಾರ್ಗ' ಕೃತಿ ರಚಿಸಿದ ಕವಿ ಅಮೋಘವರ್ಷ ಹೆಸರಿನ ಈ ಬಸ್ ಕೆಕೆಆರ್‌ಟಿಸಿಯ ಐಷಾರಾಮಿ ಬಸ್‌ಗಳಲ್ಲಿ ಒಂದಾಗಿದೆ. ಸಂಸ್ಥೆಯು 'ಅಮೋಘವರ್ಷ' ಬ್ರಾಂಡ್‌ನ 36 (ನಾನ್ ಎಸಿ) ಸ್ಲೀಪರ್ ಹಾಗೂ 4 (ಎಸಿ) ಸ್ಲೀಪರ್ ಬಸ್ ಸೇವೆಗಳನ್ನು ಹೊಂದಿದೆ.
ಬಸ್ ವೇಳಾಪಟ್ಟಿ: 'ಅಮೋಘವರ್ಷ' ನಾನ್ ಎಸಿ ಸ್ಲೀಪರ್ ಬಸ್ ಪ್ರತಿದಿನ ಬೆಳಗಾವಿಯಿಂದ ರಾತ್ರಿ 10.35ಕ್ಕೆ ಹೊರಡಲಿದೆ. ಮರುದಿನ ಬೆಳಗ್ಗೆ 6 ಗಂಟೆಗೆ ಕಲಬುರಗಿ ತಲುಪಲಿದೆ. ನಡುವೆ ಈ ಬಸ್ ಯರಗಟ್ಟಿ, ಜೇವರ್ಗಿ ಮಾರ್ಗವಾಗಿ ಸಂಚಾರ ನಡೆಸುತ್ತದೆ. ಕಲಬುರಗಿಯಿಂದ ಸಂಜೆ 6 ಗಂಟೆಗೆ ಹೊರಡುವ ಬಸ್, ಬೆಳಗಾವಿಗೆ ಮರುದಿನ ಮುಂಜಾನೆ 2.35ಕ್ಕೆ ಆಗಮಿಸುತ್ತದೆ.
ಕಲಬುರಗಿ-ಪಣಜಿ ವಯಾ ಬೆಳಗಾವಿ ಬಸ್ ಪಣಜಿ ಬಸ್ ನಿಲ್ದಾಣದಿಂದ 18:00, ಪೊಂಡಾ ಬಸ್ ನಿಲ್ದಾಣದಿಂದ 19:00, ಖಾನಾಪುರದಿಂದ 21:20, ಬೆಳಗಾವಿ 22.35, ಯರಗಟ್ಟಿ 23:05, ಲೋಕಾಪುರದಿಂದ 23:55, ಬಾಗಲಕೋಟೆಯಿಂದ 00:55, ಮುದ್ದೇಬಿಹಾಳದಿಂದ 02:30, ದೇವರಹಿಪ್ಪರಗಿಯಿಂದ 03:10, ಸಿಂಧಗಿ 04:15 ಮತ್ತು ಕಲಬುರಗಿ 06:00ಕ್ಕೆ ಹೊರಡಲಿದೆ.
ಕೆಕೆಆರ್‌ಟಿಸಿಯ 'ಅಮೋಘವರ್ಷ' ಬ್ರಾಂಡ್‌ನ ಬಸ್‌ಗಳು 30 ಆಸನಗಳ ಸಾಮರ್ಥ್ಯ ಹೊಂದಿವೆ. ಈ ಬಸ್ ಸ್ವಯಂ ಚಾಲಿತ ಅಗ್ನಿ ನಂದಕ ಉಪಕರಣ, ಪ್ರತಿ ಸೀಟಿಗೆ ಕಿರು ಲಗೇಜ್, ಮೊಬೈಲ್/ ಲ್ಯಾಪ್ ಟಾಪ್ ಚಾರ್ಜಿಂಗ್ ಪಾಯಿಂಟ್, ರೀಡಿಂಗ್ ಲ್ಯಾಂಪ್ ವ್ಯವಸ್ಥೆಯನ್ನು ಹೊಂದಿವೆ.
ಅತ್ಯಾಧುನಿಕವಾದ ವಿನ್ಯಾಸಗಳನ್ನು ಈ ಬಸ್ ಒಳಗೊಂಡಿವೆ. ಏರ್ ಸಸ್ಪೆಕ್ಷನ್ ಸಿಸ್ಟಮ್, ಪಬ್ಲಿಕ್ ಇನ್‍ಫಾರ್ಮೇಷನ್ ಸಿಸ್ಟಂ, ರಿವರ್ಸ್ ಪಾರ್ಕಿಂಗ್ ಅಲಾರ್ಮ್ ಸೌಲಭ್ಯಗಳನ್ನು ಬಸ್ ಒಳಗೊಂಡಿದೆ.
2023ರ ಆಗಸ್ಟ್‌ನಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 'ಕಲ್ಯಾಣ ರಥ' ಹೆಸರಿನ ಐಷರಾಮಿ ವೋಲ್ವೋ ಮಲ್ಟಿ ಆಕ್ಸೆಲ್ ಸ್ಲೀಪರ್ ಬಸ್ ಸೇವೆ ಆರಂಭಿಸಿತ್ತು. ಅಮೋಘವರ್ಷ ಸಹ ಸಂಸ್ಥೆಯ ಐಷಾರಾಮಿ ಬಸ್‌ಗಳಲ್ಲಿ ಒಂದು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್‌ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications