ಮೇಲುಕೋಟೆಯ ಗಮನ ಸೆಳೆಯುವ ದೇಗುಲಗಳು
ವಿಶಿಷ್ಟ ವಾಸ್ತುಶಿಲ್ಪದ ವಿಶಾಲವಾದ ಐತಿಹಾಸಿಕ ಪುರಾಣ ಪ್ರಸಿದ್ಧ ಶ್ರೀ ಚೆಲುವರಾಯಸ್ವಾಮಿ ದೇಗುಲ ಹಾಗೂ ಬೆಟ್ಟದ ಮೇಲೆ ನೆಲೆ ನಿಂತಿರುವ ಯೋಗನರಸಿಂಹ ದೇವಾಲಯದ ನಡುವೆ ಬದರಿ ನಾರಾಯಣ ದೇವಾಲಯ, ಪಟ್ಟಾಭಿರಾಮ ದೇವಾಲಯ, ಶಾಂಡಿಲ್ಯದ ಸನ್ನಿಧಿ, ಕುಲಶೇಖರ್ ಆಳ್ವಾರ್ ಸನ್ನಿಧಿ, ಜೀಯರ್ ಸನ್ನಿಧಿ, ವೇದಾಂತದೇಶಿಕರ ಸನ್ನಿಧಿ, ಕೇಶವ ದೇವರ ಸನ್ನಿಧಿ, ನಂಜೀಯರ್ ಸನ್ನಿಧಿ, ಮಾರಮ್ಮನ ಸನ್ನಿಧಿ, ಪೇಟೆ ಆಂಜನೇಯ ಸನ್ನಿಧಿ, ನಮ್ಮಾಳ್ವಾರ್ ಗುಡಿ, ತಿರುಮಂಗೈ ಆಳ್ವಾರ್ ಗುಡಿ, ಪೇಟೆ ಕೃಷ್ಣದೇವರ ಗುಡಿ, ಸೀತಾರಣ್ಯ ಕ್ಷೇತ್ರ, ಕರಣಿಕ ನಾರಾಯಣನ ಗುಡಿ, ವೆಂಕಟೇಶ್ವರ ಗುಡಿ, ಪರಕಾಲ ಮಠ, ಅಹೋಬಲ ನರಸಿಂಹ ಸ್ವಾಮಿ ಸನ್ನಿಧಿ, ಆದಿಶೇಷ ಸನ್ನಿಧಿ, ಪಂಚ ಭಾಗವತ ಕ್ಷೇತ್ರ ಸನ್ನಿಧಿ, ಪೇಯಾಳ್ವಾರ್ ಸನ್ನಿಧಿ, ವರಾಹ ದೇವಾಲಯ, ಬಿಂದು ಮಾಧವ ದೇವಾಲಯ, ಹನುಮಾನ್ ದೇವಾಲಯ, ಹಯಗ್ರೀವ ಸನ್ನಿಧಿ, ಲಕ್ಷ್ಮಿ ನಾರಾಯಣ ಸನ್ನಿಧಿ, ದತ್ತ ನಾರಾಯಣ ಗುಡಿ, ವರಸಿದ್ದಿ ವಿನಾಯಕ (ಏಕಶಿಲೆ ಗಣಪ), ಕೇಶವ (ನಯನಕ್ಷೇತ್ರ), ಶನೇಶ್ವರ ಗುಡಿ, ಕವಿಗಲ್ ಆಂಜನೇಯ ಗುಡಿ, ಕರಮೆಟ್ಟಿಲು ಆಂಜನೇಯ ಗುಡಿ, ಮೂಡ ಬಾಗಿಲು ಆಂಜನೇಯ ಗುಡಿ, ರಾಯರಗೋಪುರ ಆಂಜನೇಯ ಗುಡಿ, ಚೋಳರ ಬಂಡೆ, ಶ್ರೀನಿವಾಸ ದೇವಾಲಯ, ಸುಗ್ರೀವನ ಗುಡಿ, ಕಾಳಮ್ಮನ ಗುಡಿ, ಗರುಡ ದೇವರ ಗುಡಿ, ಆಂಜನೇಯ ಗುಡಿ(ಅಕ್ಕ ತಂಗಿಯರ ಹೊಂಡ), ಹೊರತಮ್ಮನ ದೇವಾಲಯ, ಶಿವನ ಗುಡಿ(ಉಳ್ಳಿಬಾವಿ) ಮೊದಲಾದ ದೇವಾಲಯಗಳಿವೆ. [ಗ್ಯಾಲರಿ ನೋಡಿರಿ]
ಇನ್ನು ಇಲ್ಲಿರುವ ವಿಶಾಲ ಭವ್ಯ ಕಲ್ಯಾಣಿ, ತೆಪ್ಪಕೊಳ, ಅಕ್ಕತಂಗಿಕೊಳ(ಚಲುವರಸಿಯರ ಕೊಳ), ನಿಂಗಣ್ಣನ ಕಟ್ಟೆ, ನಕ್ಷತ್ರಕೊಳ, ವೃತ್ತಕೊಳ, ಬಸವರಾಜನಕೊಳ, ವೇದಪುಷ್ಕರಣಿ, ಚಿಕ್ಕಯ್ಯನಕೊಳ, ದರ್ಭತೀರ್ಥ, ಯಾದವತೀರ್ಥ, ಪಲಾಶ ತೀರ್ಥ, ಮೈತ್ರೇಯ ತೀರ್ಥ, ಪದ್ಮತೀರ್ಥ, ನಾರಾಯಣ ತೀರ್ಥ, ತೊಟ್ಟಿಲಮಡು, ಹಾಲುಕೊಲ, ಭಟ್ಟರಕೊಳ, ನರಸಿಂಹಮಡು(ಬೆಟ್ಟದಕೊಳ), ಅಜ್ಜನಕಟ್ಟೆ, ಅಕ್ಕತಂಗಿಕೊಳ(ಗಿರಿ ಪ್ರದಕ್ಷಿಣೆ), ಒಕ್ಕರಣೆ(ಪಂಚಬಾವಿ), ಒಂಭತ್ತು ಕಲ್ಲು ಬಾವಿ, ಹೊಸಬಾವಿ, ಛತ್ರಿಕೊಳ, ಸಂತೆಮಡು, ಗಣಪತಿ ಕಟ್ಟೆ, ಪುಟ್ಟನರಸೀಕೊಳ, ಸಿಹಿನೀರುಕೊಳ, ಕೆಳಗಿನ ಚಿಕ್ಕಯ್ಯನಕೊಳ ಮೊದಲಾದ ನೀರಿನಕೊಳಗಳು ಹಾಗೂ ದಳವಾಯಿ ಕೆರೆ, ಹೊಸಕೆರೆ, ಯಾದವ, ಹೆಬ್ಬಳ್ಳ ಕೆರೆಗಳು ಇವೆಯಲ್ಲದೆ, ಯತಿರಾಜ ಮಠ, ವಾನಮಾಮಲೈ ಮಠ, ಪರಕಾಲ ಮಠ, ಅಹೋಬಲ ಮಠ, ಆಂಡವನ್ ಆಶ್ರಮಂ, ಕಂಚಿವಾದ ಕೇಸರಿ ಆಳಹಿಯ ಮಣವಾದ ಮಠ, ತ್ರಿದಂಡಿ ಚಿನ್ನಜೀಯಾರ್ ಮಠ, ತಿರುಪತಿ ಪೆರಿಯ ಜೀಯಾರ್ ಮಠ, ಬೈರಾಗಿ ಮಠಗಳಿವೆ. ಅಲ್ಲದೆ ಮೇಲುಕೋಟೆಯಲ್ಲಿ ಪ್ರೇಕ್ಷಣೀಯ ತಾಣಗಳಾಗಿ ಪ್ರವಾಸಿಗರನ್ನು ರಾಯಗೋಪುರ(ಪಟ್ಟಣದ ಬಾಗಿಲು), ನಯನಕ್ಷೇತ್ರ(ಗುಹಾಂತರ ದೇವಾಲಯ), ತಾರ್ಕ್ಷ್ಯ ಕ್ಷೇತ್ರ, ಏಕಶಿಲಾ ಗಣಪತಿ, ಅಕ್ಕತಂಗಿಯರ ಕೊಳ, ಭುವನೇಶ್ವರಿ ಮಂಟಪ, ದಳವಾಯಿಕೆರೆ, ಹೊಗರಮ್ಮನ ಗುಡಿ ಗಮನಸೆಳೆಯತ್ತದೆ.
ಪುರಾತನ ಕ್ಷೇತ್ರವಾದ ಮೇಲುಕೋಟೆ ನಿರ್ಲಕ್ಷ್ಯಕ್ಕೊಳಗಾಗುತ್ತಿದೆ ಎಂಬುವುದು ಅಲ್ಲಿಗೆ ತೆರಳುವ ಭಕ್ತರ ಗಮನಕ್ಕೆ ಬಾರದಿರುವುದಿಲ್ಲ. ಯೋಗನರಸಿಂಹಸ್ವಾಮಿ ದೇವಾಲಯಕ್ಕೆ ತೆರಳುವ ಮೆಟ್ಟಿಲು ಶಿಥಿಲಗೊಂಡಿವೆ. ಇದರೊಂದಿಗೆ ದೇಗುಲದ ಗೋಪುರಗಳಲ್ಲಿ ಬಿರುಕು ಕಂಡು ಬಂದಿದ್ದು ಅಲ್ಲಲ್ಲಿ ಕುಸಿದಿವೆ. ಇದನ್ನು ದುರಸ್ತಿಗೊಳಿಸಲು ಸುಮಾರು 70 ಲಕ್ಷ ರೂಪಾಯಿ ಬೇಕಾಗುತ್ತದೆ ಎನ್ನಲಾಗಿದೆ. ಜೊತೆಗೆ ಶುಚಿತ್ವದತ್ತ ಗಮನಹರಿಸಬೇಕಾದ ಅಗತ್ಯವೂ ಇದೆ.













Click it and Unblock the Notifications