Ayodhya Airport: ಕೆಲವೇ ಕ್ಷಣಗಳಲ್ಲಿ ಅಯೋಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನೆ- ಸಿದ್ಧತೆ ಹೇಗಿದೆ ಗೊತ್ತಾ?
ಉತ್ತರ ಪ್ರದೇಶ, ಡಿಸೆಂಬರ್, 29: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇನ್ನು ಕೆಲವೇ ಕ್ಷಣಗಳಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಹಾಗಾದರೆ ಪ್ರಧಾನಿ ಸ್ವಾಗತಕ್ಕೆ ಸಿದ್ಧತೆ ಹೇಗಿದೆ ಎಂದು ತಿಳಿಯಿರಿ.
ಶನಿವಾರ (ಡಿಸೆಂಬರ್ 30) ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಅಯೋಧ್ಯೆ ಸಜ್ಜಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ನಡುವೆಯೇ ನಗರವು ಹೂವಿನಿಂದ ಅಲಂಕೃತಗೊಂಡಿದೆ, ಗೋಡೆಗಳ ಮೇಲೆ ವರ್ಣಚಿತ್ರಗಳು ಗಮನ ಸೆಳೆಯುತ್ತಿವೆ. ನಗರದಲ್ಲಿ ಕಳೆದ ಎರಡು ದಿನಗಳಿಂದಲೂ ದಟ್ಟ ಮಂಜು ಕವಿದ ವಾತಾವರಣವಿದ್ದರೂ ಪ್ರಧಾನಿ ಭೇಟಿಗಾಗಿ ಭರ್ಜರಿ ಸಿದ್ಧತೆಗಳು ಭರದಿಂದ ಸಾಗಿವೆ ಎಂದು ಅಯೋಧ್ಯೆಯ ವಿಭಾಗಾಧಿಕಾರಿ ಗೌರವ್ ದಯಾಳ್ ತಿಳಿಸಿದರು.

ಅಯೋಧ್ಯೆಯಲ್ಲಿ ಮರುಅಭಿವೃದ್ಧಿ ಆಗಿರುವ ರೈಲು ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣದ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಡಿಸೆಂಬರ್ 30) ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ. ವಿಮಾನ ನಿಲ್ದಾಣದ ಬಳಿ ಅವರು ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ಮೋದಿ ಅವರು ಬೆಳಗ್ಗೆ 10:45ರ ವೇಳೆಗೆ ವಿಮಾನ ನಿಲ್ದಾಣ ತಲುಪುವ ನಿರೀಕ್ಷೆಯಿದೆ. ನಂತರ ಅವರು ರೈಲು ನಿಲ್ದಾಣ ಉದ್ಘಾಟಿಸಲಿದ್ದಾರೆ. ಮತ್ತೆ ಹೊಸದಾಗಿ ನಿರ್ಮಾಣ ಆಗಿರುವ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎಂದು ದಯಾಳ್ ಅವರು ಮಾಹಿತಿ ನೀಡಿದರು. ಇನ್ನು ಎರಡು ಹೊಸ ಅಮೃತ್ ಭಾರತ್ ಮತ್ತು 6 ಹೊಸ ವಂದೇ ಭಾರತ್ ರೈಲುಗಳಿಗೆ ಇದೇ ವೇಳೆ ಚಾಲನೆ ನೀಡಲಿದ್ದಾರೆ. ರ‍್ಯಾಲಿಯಲ್ಲಿ 1.5 ಲಕ್ಷ ಜನ ಸೇರುವ ಸಾಧ್ಯತೆಯಿದೆ. ಒಂದು ಗಂಟೆಯ ಅವಧಿಯಲ್ಲಿ ರ‍್ಯಾಲಿ ಬಳಿಕ ಅವರು ಅಯೋಧ್ಯೆಯಿಂದ ತೆರಳಲಿದ್ದಾರೆ ಎಂದು ತಿಳಿಸಿರು.
ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಪ್ರಧಾನಿ ಸಾಗುವ ರಾಮ ಪಥ ಮತ್ತು ಇತರ ರಸ್ತೆಗಳಿಗೆ ತಾತ್ಕಾಲಿಕ ಬ್ಯಾರಿಕೇಡ್ ಹಾಕುವ ಕಾರ್ಯ ಗುರುವಾರದಿಂದ ನಡೆಯುತ್ತಿದೆ. ಅಯೋಧ್ಯೆಯಲ್ಲಿ 11,100 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ನಾಗರಿಕ ಸೌಲಭ್ಯಗಳ ನವೀಕರಣ ಮತ್ತು ಅಂತಾರಾಷ್ಟ್ರೀಯ ಗುಣಮಟ್ಟದ ಮೂಲಸೌಕರ್ಯಗಳ ಯೋಜನೆಗಳಿಗೆ ಹಾಗೂ ಉತ್ತರ ಪ್ರದೇಶದ ಇತರ ಭಾಗಗಳಿಗೆ 4,600 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೂ ಸಹ ಚಾಲನೆ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
Visuals of the Maharishi Valmiki International Airport Ayodhya Dham, in Ayodhya, Uttar Pradesh.
— ANI (@ANI) December 29, 2023
Prime Minister Narendra Modi will inaugurate the newly built Ayodhya Airport tomorrow, 30th December. pic.twitter.com/L9kmY8f9Ue
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶುಕ್ರವಾರ (ಡಿಸೆಂಬರ್ 29) ಅಯೋಧ್ಯೆಗೆ ಭೇಟಿ ನೀಡಿ ಅಯೋಧ್ಯಾ ಧಾಮ್ ರೈಲು ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದರು. ಅಯೋಧ್ಯೆಯಲ್ಲಿ ಮೋದಿ ಅವರನ್ನು ದೇಶದ ವಿವಿಧೆಡೆಯ 1,400 ಕಲಾವಿದರು ಜಾನಪದ ಕಲೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸ್ವಾಗತಿಸಲಿದ್ದಾರೆ. ಇದಕ್ಕಾಗಿ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದವರೆಗೆ 40 ವೇದಿಕೆಗಳನ್ನು ನಿರ್ಮಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications