South Western Railway: ಬೆಂಗಳೂರು-ಭುವನೇಶ್ವರ ವಿಶೇಷ ರೈಲು ಟ್ರಿಪ್‌ಗಳ ವಿಸ್ತರಣೆ: ಇಲ್ಲಿದೆ ಮಾಹಿತಿ
South Western Railway: ಭಾರತೀಯ ರೈಲ್ವೆಯು ಪ್ರಯಾಣಿಕರಿಗೆ ಅನುಕೂಲಕ್ಕೆ ತಕ್ಕಂತೆ ಆಗಾಗ ವಿಶೇಷ ರೈಲುಗಳನ್ನು ಒದಗಿಸುತ್ತಲೇ ಇರುತ್ತದೆ. ಹಾಗೆಯೇ ಇದೀಗ ಭುವನೇಶ್ವರ-ಬೆಂಗಳೂರಿನ ಯಶವಂತಪುರ ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ರೈಲು ಸೇವೆಯನ್ನು 9 ಟ್ರಿಪ್‌ಗಳಿಗೆ ವಿಸ್ತರಣೆ ಮಾಡಿದೆ. ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
* ರೈಲು ಸಂಖ್ಯೆ 02811 ಭುವನೇಶ್ವರ -ಯಶವಂತಪುರ ಸಾಪ್ತಾಹಿಕ ವಿಶೇಷ ರೈಲು ಮಾರ್ಚ್ 1, 8, 15, 22, 29, ಏಪ್ರಿಲ್ 5, 12, 19 ಮತ್ತು 26 ರಂದು ಸಂಜೆ 7.15 ಕ್ಕೆ ಭುವನೇಶ್ವರದಿಂದ ಹೊರಟು 3ನೇ ದಿನ ಬೆಳಗ್ಗೆ 12.15ಕ್ಕೆ ಯಶವಂತಪುರ ತಲುಪಲಿದೆ.

* ರೈಲು ಸಂಖ್ಯೆ 02812 ಯಶವಂತಪುರ-ಭುವನೇಶ್ವರ ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲು ಮಾರ್ಚ್ 3, 10, 17, 24, 31, ಏಪ್ರಿಲ್ 7, 14, 21 ಮತ್ತು 28ರಂದು ಬೆಳಗ್ಗೆ 4:30ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 6 ಗಂಟೆಗೆ ಭುವನೇಶ್ವರ ತಲುಪಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಕೆಲವು ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ರೈಲು ಸಂಖ್ಯೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್‌ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ನೀಡಲಾಗಿತ್ತು. ಈ ಸೌಲಭ್ಯವನ್ನು 24.02.2025ರಿಂದ 23.08.2025ರ ವರೆಗೆ ಜಾರಿಯಾಗುವಂತೆ ಮುಂದುವರಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ರೈಲು ಸಂಖ್ಯೆ 16206/16205 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್‌ಪ್ರೆಸ್ ರೈಲು ಈ ಹಿಂದೆ ಅರಸಾಳು ಮತ್ತು ಕುಂಸಿ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು. ಈ ಸೌಲಭ್ಯವನ್ನು 24.02.2025ರಿಂದ 23.08.2025 ಜಾರಿ ಆಗುವಂತೆ ಮುಂದುವರೆಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹಲವು ಬದಲಾವಣೆ: ಭಾರತೀಯ ರೈಲ್ವೆ ರೈಲು ಟಿಕೆಟ್ ಬುಕಿಂಗ್ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ತತ್ಕಾಲ್ ಟಿಕೆಟ್‌ಗಳನ್ನು ಕಾಯ್ದಿರಿಸುವ ನಿಯಮಗಳಲ್ಲಿ ಇತ್ತೀಚೆಗೆ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿದೆ.
ಆದ್ದರಿಂದ ಇನ್ಮುಂದೆ ಭಾರತೀಯ ರೈಲ್ವೆಯ ಐಆರ್‌ಸಿಟಿಸಿ ವೆಬ್‌ಸೈಟ್ ಅಥವಾ ಅಪ್ಲಿಕೇಶನ್ ಮೂಲಕ ರೈಲು ಟಿಕೆಟ್‌ಗಳನ್ನು ಬುಕ್ ಮಾಡಲು ಬಯಸುವ ಜನರು ಈ ಹೊಸ ನಿಯಮಗಳನ್ನು ಅನುಸರಿಸಿ ತಮ್ಮ ಟಿಕೆಟ್‌ಗಳನ್ನು ಬುಕ್ ಮಾಡಬೇಕು ಎಂದು ಅಧಿಕೃತವಾಗಿ ಘೋಷಿಸಲಾಗಿದೆ.
ಭಾರತೀಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ವಿಶೇಷ ವೈಶಿಷ್ಟ್ಯಗಳು ಮತ್ತು ಹೊಸ ನಿಯಮಗಳನ್ನು ಪರಿಚಯಿಸುತ್ತಿದೆ. ಆ ನಿಟ್ಟಿನಲ್ಲಿ ರೈಲು ಟಿಕೆಟ್ ಬುಕಿಂಗ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ವಿಶೇಷವಾಗಿ ತತ್ಕಾಲ್ ಟಿಕೆಟ್ ಬುಕಿಂಗ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.
ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡುವ ಪ್ರಯಾಣಿಕರು ಈಗ ಬೆಳಗ್ಗೆ 10 ಗಂಟೆಗೆ ಬುಕ್ ಮಾಡಬಹುದು. ಈ ಹಿಂದೆ ತತ್ಕಾಲ್ ಟಿಕೆಟ್ ಬುಕಿಂಗ್ ಬೆಳಗ್ಗೆ 11 ಗಂಟೆಗೆ ಪ್ರಾರಂಭ ಆಗುತ್ತಿತ್ತು. ಆದರೆ ಇದೀಗ ಅದನ್ನು ಬೆಳಗ್ಗೆ 10 ಗಂಟೆಗೆ ಬದಲಾಯಿಸಲಾಗಿದೆ.












Click it and Unblock the Notifications