ಬೆಂಗಳೂರು-ಗಂಗಾವತಿ ಕಲ್ಯಾಣ ರಥ ಸ್ಲೀಪರ್ ಬಸ್; ದರ, ವೇಳಾಪಟ್ಟಿ
ಬೆಂಗಳೂರು, ಸೆಪ್ಟೆಂಬರ್ 03; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರು ಮತ್ತು ಕೊಪ್ಪಳ ಜಿಲ್ಲೆಯ ಗಂಗಾವತಿ ನಡುವೆ 'ಕಲ್ಯಾಣ ರಥ' ಎಂಬ ಐಷರಾಮಿ ವೋಲ್ವೋ ಮಲ್ಟಿ ಆಕ್ಸೆಲ್ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ. ಪ್ರಯಾಣಿಕರು ಬಸ್ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಆಗಸ್ಟ್ 28ರಂದು ಸಿಂಧನೂರಿನಲ್ಲಿ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 'ಕಲ್ಯಾಣ ರಥ' ಎಂಬ ಐಷರಾಮಿ ಬಸ್ ಸೇವೆಗೆ ಚಾಲನೆ ನೀಡಿದರು. ಸಂಪೂರ್ಣ ಹವಾನಿಯಂತ್ರಿತ ಬಸ್ ಸೇವೆ ಇದಾಗಿದೆ.

ಪ್ರಸ್ತುತ ಈ ಬಸ್ ಸಿಂಧನೂರು-ಬೆಂಗಳೂರು, ಗಂಗಾವತಿ-ಬೆಂಗಳೂರು ಮತ್ತು ಹೊಸಪೇಟೆ-ಬೆಂಗಳೂರು ನಡುವೆ ಸಂಚಾರ ನಡೆಸುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮೊದಲ ಬಾರಿಗೆ 'ಕಲ್ಯಾಣ ರಥ' ಎಂಬ ಐಷರಾಮಿ ಬಸ್ ಸೇವೆ ಆರಂಭಿಸಿದೆ.
ಬೆಂಗಳೂರು-ಗಂಗಾವತಿ ಬಸ್; 'ಕಲ್ಯಾಣ ರಥ' ಎಂಬ ಐಷರಾಮಿ ಬಸ್ ಗಂಗಾವತಿಯಿಂದ ರಾತ್ರಿ 11 ಗಂಟೆಗೆ ಹೊರಡಲಿದೆ. ಮರುದಿನ ಬೆಳಗ್ಗೆ 5.30ಕ್ಕೆ ಬೆಂಗಳೂರು ತಲುಪಲಿದೆ. ಬೆಂಗಳೂರು ನಗರದಿಂದ ರಾತ್ರಿ 11 ಗಂಟೆಗೆ ಹೊರಟು, ಬೆಳಗ್ಗೆ 5.30ಕ್ಕೆ ಗಂಗಾವತಿ ತಲುಪಲಿದೆ.
ಈ ಬಸ್ ಹೊಸಪೇಟೆ, ಹಿರಿಯೂರು ಮಾರ್ಗವಾಗಿ ಸಂಚಾರ ನಡೆಸಲಿದೆ. ಈ ಬಸ್ ಸಂಪೂರ್ಣ ಹವಾನಿಯಂತ್ರಿತ ಐಷರಾಮಿ ವೋಲ್ವೋ ಮಲ್ಟಿ ಆಕ್ಸೆಲ್ ಸ್ಲೀಪರ್ ಬಸ್ ಸೇವೆಯಾಗಿದೆ. ಈ ಬಸ್‌ನ ಟಿಕೆಟ್ ದರ 1230 ರೂ.ಗಳು ಎಂದು ನಿಗದಿ ಮಾಡಲಾಗಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 'ಕಲ್ಯಾಣ ರಥ' ಬ್ರ್ಯಾಂಡ್‌ನ ವೋಲ್ವೋ ಮಲ್ಟಿ ಆಕ್ಸೆಲ್ ಸ್ಲೀಪರ್ ಬಸ್ ಹೊಸದಾಗಿ ಸೇರ್ಪಡೆಯಾಗಿದೆ. ಆಗಸ್ಟ್ 28ರಂದು ಬಸ್ ಲೋಕಾರ್ಪಣೆ ಬಳಿಕ ಸಿಂಧನೂರು-ಬೆಂಗಳರು ಮಾರ್ಗದಲ್ಲಿ ಸೇವೆ ಆರಂಭಿಸಲಾಯಿತು. ಬಳಿಕ ಉಳಿದ 2 ಮಾರ್ಗದಲ್ಲಿ ಬಸ್ ಸಂಚಾರ ನಡೆಸುತ್ತಿದೆ.
ಸಿಂಧನೂರು-ಬೆಂಗಳೂರು ಮಾರ್ಗದಲ್ಲಿ ಈ ಬಸ್ ಪ್ರತಿದಿನ ಸಿಂಧನೂರಿನಿಂದ ರಾತ್ರಿ 10 ಗಂಟೆಗೆ ಹೊರಟು ಕಾರಟಗಿ-ಗಂಗಾವತಿ- ಬೂದುಗುಂಪ ಕ್ರಾಸ್-ಹೊಸಪೇಟೆ-ಕೂಡ್ಲಿಗಿ-ಹಿರಿಯೂರು-ತುಮಕೂರು ಮಾರ್ಗವಾಗಿ ಮರುದಿನ ಬೆಂಗಳೂರಿಗೆ 5.30ಕ್ಕೆ ತಲುಪಲಿದೆ. ಬೆಂಗಳೂರಿನಿಂದ ರಾತ್ರಿ 10.15ಕ್ಕೆ ಹೊರಟು ಮರುದಿನ ಬೆಳಗ್ಗೆ 5.45 ಗಂಟೆಗೆ ಸಿಂಧನೂರು ತಲುಪಲಿದೆ.
'ಕಲ್ಯಾಣ ರಥ' ಬಸ್ ಪ್ರಯಾಣಿಕರಿಗೆ ಸಂಪೂರ್ಣ ಆರಾಮದಾಯಕ ಬಸ್ ಪ್ರಯಾಣದ ಅನುಭವ ನೀಡುತ್ತದೆ. ವೊಲ್ವೋ ಮಲ್ಟಿ ಆಕ್ಸೆಲ್ ಸ್ಲೀಪರ್ ಬಸ್ 40 ಆಸನಗಳನ್ನು ಒಳಗೊಂಡಿದೆ. ಬಸ್ 350 ಬಿಎಸ್-6 ಇಂಜಿನ್ ಅನ್ನು ಹೊಂದಿದೆ.
ಬಸ್ಸಿಗೆ ವಿಶಿಷ್ಟ ಸಸ್ಪೆಕ್ಷನ್‌ಗಳನ್ನು ಅಳವಡಿಸಲಾಗಿದೆ. ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆ ಇದ್ದು, ಸ್ವಯಂ ಚಾಲಿತ ಬಾಗಿಲು ತೆರೆಯುವ ವ್ಯವಸ್ಥೆ, ಬೆಂಕಿ ನಂದಿಸುವ ಉಪಕರಣಗಳ ವ್ಯವಸ್ಥೆ, ವಾಹನದ ಟ್ರ್ಯಾಕಿಂಗ್ ಗುರುತು ವ್ಯವಸ್ಥೆಯನ್ನು ಇದು ಒಳಗೊಂಡಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಬೆಡ್ ಲೈಟ್, ಲ್ಯಾಪ್ ಟಾಪ್ ಬ್ಯಾಗ್ ಇಡುವ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಬಸ್‌ನ ಮುಂಗಡ ಬುಕ್ಕಿಂಗ್‌ಗಾಗಿ ಕೆಎಸ್ಆರ್‌ಟಿಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.












Click it and Unblock the Notifications