Bengaluru Airport: ಸಂಪೂರ್ಣ ಕನ್ನಡಮಯವಾದ ಕೆಐಎ ವಿಮಾನ ನಿಲ್ದಾಣದ ಲಾಂಛನ
ಬೆಂಗಳೂರು, ಡಿಸೆಂಬರ್, 19: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಛನದಲ್ಲಿ ಮೊದಲು ಇಂಗ್ಲೀಷ್ ಪದಗಳನ್ನು ಬಳಕೆ ಮಾಡಲಾಗಿತ್ತು. ನಂತರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಈ ವಿಮಾನ ನಿಲ್ದಾಣದ ಅಧಿಕಾರಿಗಳು ನಿಲ್ದಾಣದ ಲಾಂಛನದಲ್ಲಿ ಕನ್ನಡವನ್ನು ಬಳಕೆ ಮಾಡಿದ್ದಾರೆ. ಇದು ನಿಜಕ್ಕೂ ಶ್ಲಾಘನೀಯವಾದ ವಿಚಾರವಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದ ಲಾಂಛನದಲ್ಲಿ ಅಕ್ಷರಗಳು ಸಂಪೂರ್ಣ ಇಂಗ್ಲೀಷ್ ಭಾಷೆಯಲ್ಲಿದ್ದವು. ಈ ಬಗ್ಗೆ ತಮ್ಮ ಗಮನಕ್ಕೆ ಬರುತ್ತಿದ್ದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚನೆ ನೀಡಿದ್ದರು. ಈ ಹಿನ್ನೆಲೆ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು, ನಿಲ್ದಾಣದ ಲಾಂಛನ ಆಂಗ್ಲ ಭಾಷೆಯಲ್ಲಿದ್ದು, ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ದೂರಿದ್ದರು.

ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಂಸ್ಥೆಗಳು ಇಲ್ಲಿನ ಭಾಷೆ-ಸಂಸ್ಕೃತಿಯನ್ನು ಗೌರವಿಸುವುದು ಪ್ರಾಥಮಿಕ ಜವಾಬ್ದಾರಿಯಾಗಿದೆ. ಕೂಡಲೇ ಲಾಂಛನದಲ್ಲಿ ಕನ್ನಡ ಭಾಷೆಯನ್ನು ಅಳವಡಿಕೆ ಮಾಡಿಕೊಳ್ಳಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದರು. ಕಾರ್ಯದರ್ಶಿ ಪತ್ರಕ್ಕೆ ತಲುಪುತ್ತಿದ್ದಂತೆ ಎಚ್ಚೆತ್ತ ವಿಮಾನ ನಿಲ್ದಾಣದ ಅಧಿಕಾರಿಗಳು ತಮ್ಮ ಲಾಂಛನದಲ್ಲಿ ಕನ್ನಡ ಭಾಷೆಯನ್ನು ಬಳಕೆ ಮಾಡಿದ್ದಾರೆ.
ಈ ಬಗ್ಗೆ ಪ್ರಾಧಿಕಾರಕ್ಕೆ ಪತ್ರವನ್ನು ಬರೆದಿರುವ ವಿಮಾನ ನಿಲ್ದಾಣದ ಅಧಿಕಾರಿ ದಿನೇಶ್ ಕುಮಾರ್, ಕನ್ನಡ ಭಾಷೆ ಬೆಳವಣಿಗೆ, ಇಲ್ಲಿನ ಸಂಸ್ಕೃತಿ ಉಳಿವಿಗೆ ನಾವು ಇಲಾಖೆ ಜೊತೆ ಕೆಲಸ ಮಾಡಲಿದ್ದೇವೆ. ಮುಂದಿನ ನಮ್ಮ ಯಾವುದೇ ಕಾರ್ಯಕ್ರಮ ಹಾಗೂ ಪತ್ರ ವ್ಯವಹಾರದಲ್ಲಿ ಹೆಚ್ಚಾಗಿ ಕನ್ನಡ ಭಾಷೆ ಬಳಕೆ ಮಾಡಲಾಗುವುದು. ಅಲ್ಲದೆ, ನಿಲ್ದಾಣದಲ್ಲಿ ಪ್ರತಿಯೊಂದು ಸೂಚನಾ ಫಲಕಗಳನ್ನು ಕನ್ನಡದಲ್ಲಿ ಬಳಸಲಾಗುವುದು, ಸಾಮಾಜಿಕ ಜಾಲತಾಣದಲ್ಲಿಯೂ ಕನ್ನಡವನ್ನು ಬಳಕೆ ಮಾಡುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಆಗಿದೆ. ಇಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಗಳಿಗೆ ನೆಲ, ಜಲ, ವಿದ್ಯುತ್ ಸೌಲಭ್ಯಗಳನ್ನು ರಾಜ್ಯ ಸರ್ಕಾರ ನೀಡುತ್ತಿದ್ದು, ಸ್ಥಳೀಯ ಭಾಷೆಯ ಬೆಳವಣಿಗೆ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು. ವಿಮಾನ ನಿಲ್ದಾಣದಲ್ಲಿ ಕನ್ನಡ ಬಳಕೆ ಮಾಡಿದ ನಿಲ್ದಾಣದ ಅಧಿಕಾರಿಗಳ ನಡೆ ಎಲ್ಲರಿಗೂ ಮಾದರಿಯಾಗಬೇಕು ಎಂದು ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹೆಸರಿಡಲು ಒತ್ತಾಯ
ಈಗಾಗಲೇ ಮಲೆನಾಡಿನ ಹೆಬ್ಬಾಗಿಲು ಅಂತಲೇ ಕರೆಸಿಕೊಳ್ಳುವ ಶಿವಮೊಗ್ಗ ಜಿಲ್ಲೆಯ ಸೋಗಾನೆ ಬಳಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣಕ್ಕೆ ಕುವೆಂಪು ಅವರ ಹೆಸರು ಇಡಲು ನಿರ್ಧಾರ ಮಾಡಲಾಗಿದ್ದು, ಘೋಷಣೆಯೊಂದೆ ಬಾಕಿಯಿದೆ. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಮಾಜಿ ರಕ್ಷಣ ಸಚಿವ ಜಾರ್ಜ್ ಫೆರ್ನಾಂಡಿಸ್ ಅವರ ಹೆಸರು ಇಡಬೇಕು ಎಂದು ಜಯ ಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸ್ಥಾಪಕ ತೋನ್ಸೆ ಜಯಕೃಷ್ಣ ಶೆಟ್ಟಿ ಆಗ್ರಹಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಇತ್ತೀಚೆಗಷ್ಟೇ ಬೆಳಗಾವಿ ವಿಧಾನಸಭೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ, ವಿಜಯಪುರ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣನವರ ಹೆಸರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ನಾಮಕರಣ ಮಾಡಲು ತೀರ್ಮಾನ ಮಾಡಲಾಗಿತ್ತು. ಹಾಗೆಯೇ ಈ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಬೇಕು ಅಂತಲೂ ರಾಜ್ಯದ ಸರ್ಕಾರ ಇದೇ ವೇಳೆ ಹೇಳಿತ್ತು.
ಹಾಗೆಯೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಅವರು ತಮ್ಮದೇ ಕೊಡುಗೆಯನ್ನು ನೀಡಿದ್ದಾರೆ. ಮಂಗಳೂರು ಮತ್ತು ಮುಂಬೈ ನಡುವೆ ರೈಲು ಸಂಚಾರಕ್ಕೆ ವ್ಯವಸ್ಥೆ, ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಮಾಡುವ ಮೂಲಕ ಮೇಲ್ದರ್ಜೆಗೆ ಏರಿಸಲು ಸಹಕಾರ, ಕಾರವಾರದ ಸೀ ಬರ್ಡ್ ಯೋಜನೆ ರೂಪಿಸಿ ಗಮನ ಸೆಳೆದಿದ್ದಾರೆ. ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡುವುದು ಸೂಕ್ತ ಎಂದು ಅವರು ತಿಳಿಸಿದರು.
ಈ ಸಂಬಂಧ ಕೇಂದ್ರ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಇವರೆಲ್ಲರೂ ಒಪ್ಪಿದ್ದಾರೆ. ಆದರೆ ಸ್ಥಳೀಯ ರಾಜಕಾರಣಿಗಳು ಇದಕ್ಕೆ ಒಪ್ಪುತ್ತಿಲ್ಲ ಎಂದು ಹೇಳಿದರು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು












Click it and Unblock the Notifications