Expressway: ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್‌ವೇನಿಂದ ಆಸ್ತಿ ದರ ಏರಿಕೆ ಸೇರಿ ಏನೆಲ್ಲಾ ಪ್ರಯೋಜನಗಳಿವೆ?
Bengaluru-Mangaluru Expressway: ದೇಶದ ಬಹುನಿರೀಕ್ಷತ ಹೆದ್ದಾರಿಗಳಲ್ಲಿ ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ ವೇ ಕೂಡ ಒಂದಾಗಿದೆ. ಈಗಾಗಲೇ ಕೆಲವು ಸಂಚಾರಕ್ಕೆ ಮುಕ್ತಾವಾಗಿದ್ದು, ಇನ್ನೂ ಕೆಲವು ನಿರ್ಮಾಣ ಹಂತದಲ್ಲಿವೆ. ಹಾಗಾದರೆ ಬೆಂಗಳೂರು-ಮಂಗಳೂರು ಹೆದ್ದಾರಿ ಕಾಮಗಾರಿ ಯಾವಾಗ ಆರಂಭವಾಗಲಿದೆ. ಹಾಗೂ ಇದು ಪೂರ್ಣಗೊಂಡರೆ ಏನೆಲ್ಲಾ ಪ್ರಯೋಜನೆಗಳಿವೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಂಗಳೂರು-ಮಂಗಳೂರು ನಡುವೆ ಹೊಸ ಎಕ್ಸ್‌ಪ್ರೆಸ್ ವೇ ಯೋಜನೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಘೋಷಣೆ ಮಾಡಿದೆ. ಇದು 6 ಪಥಗಳೊಂದಿಗೆ 335 ಕಿಲೋ ಮೀಟರ್ ವ್ಯಾಪ್ತಿಯನ್ನು ಹೊಂದಿರಲಿದೆ. ಈ ಯೋಜನೆಯ ಕಾಮಗಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ-ಲೋಕೋಪಯೋಗಿ ಇಲಾಖೆಯಿಂದ ನಡೆಯಲಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಬೆಂಗಳೂರು ಮತ್ತು ಮಂಗಳೂರನ್ನು ಹಾಸನ ಮೂಲಕ ಸಂಪರ್ಕಿಸುವ ಹೊಸ ಎಕ್ಸ್‌ಪ್ರೆಸ್‌ವೇಯನ್ನು ನಿರ್ಮಾಣ ಮಾಡಲು ಮುಂದಾಗಿದೆ. ಈ ಎಕ್ಸ್‌ಪ್ರೆಸ್‌ವೇ ಪೂರ್ಣಗೊಂಡರೆ, ಎರಡೂ ನಗರಗಳ ನಡುವಿನ ಪ್ರಯಾಣದ ಸಮಯ 7ರಿಂದ 8 ಗಂಟೆಗಳಷ್ಟು ಕಡಿಮೆಯಾಗಲಿದೆ. ಇದರಿಂದ ಸಮಯ ಉಳಿತಾಯ ಆದಂತಾಗಲಿದ್ದು, ವಾಹನ ಸವಾರರಿಗೆ ತುಂಬಾ ಸಹಕಾರಿಯಾಗಲಿದೆ.
ಬೆಂಗಳೂರು-ಮಂಗಳೂರು ನಡುವಿನ ಸಂಪರ್ಕವನ್ನು ಸುಧಾರಿಸುವ ಹಿನ್ನೆಲೆ ಈ ಹೆದ್ದಾರಿ ನಿರ್ಮಾಣ ಕಾಮಗಾರಿ 2028ರ ವೇಳೆಗೆ ಪ್ರಾರಂಭ ಆಗಲಿವೆ. ಇದರ ಡಿಪಿಆರ್ ಪರ್ಣಗೊಳಿಸಲು 540 ದಿನಗಳ ಕಾಲವಕಾಶ ನೀಡಲಾಗಿದೆ. ಈ ಪ್ರಕ್ರಿಯೆ ಮುಗಿದ ಬಳಿಕ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕಾಮಗಾರಿ ಆರಂಭ ಆಗಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಸುಮಾರು 335 ಕಿಲೋ ಮೀಟರ್ ಉದ್ದದ ಪ್ರಸ್ತಾವಿತ ಎಕ್ಸ್‌ಪ್ರೆಸ್‌ವೇ ಬೆಂಗಳೂರು-ಮಂಗಳೂರು ನಡುವಿನ ಪ್ರಯಾಣದ ಸಮಯವನ್ನು 7-8 ಗಂಟೆಗಳಷ್ಟು ಕಡಿಮೆ ಮಾಡಲಿದೆ. ಇದು ನಿರ್ಮಾಣವಾದರೆ, ರಾಜ್ಯದ ಸಾರಿಗೆಯಲ್ಲಿ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಯಾಗಲಿದೆ. ಇದೀಗ ಎರಡು ನಗರಗಳ ನಡುವಿನ ಪ್ರಯಾಣದ ಸಮಯ ಹೆಚ್ಚಿದೆ. ಅದರಲ್ಲೂ ಮಳೆಗಾಲದಲ್ಲಿ ಈ ಮಾರ್ಗವು ಭೂಕುಸಿತ ಮತ್ತು ಇತರ ಅಡಚಣೆಗಳಿಗೆ ಒಳಗಾಗುತ್ತಿದೆ. ಎಕ್ಸ್‌ಪ್ರೆಸ್ ನಿರ್ಮಾಣವಾದ್ರೆ ಈ ಎಲ್ಲಾ ಸಮಸ್ಯೆಗಳು ಬಗೆಹರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.
ಜುಲೈನಲ್ಲಿ ಡಿಪಿಆರ್‌ಗಾಗಿ ಸಲಹೆಗಾರರನ್ನು ಆಯ್ಕೆ ಮಾಡಲು ರಾಷ್ಟ್ರೀಯ ಹೆದ್ದಾರಿ ಸಚಿವಾಲಯ ಬಿಡ್‌ಗಳನ್ನು ಕರೆದಿತ್ತು. ನವೆಂಬರ್ ವೇಳೆಗೆ, 9 ಸಂಸ್ಥೆಗಳು ತಮ್ಮ ತಾಂತ್ರಿಕ ಬಿಡ್‌ಗಳನ್ನು ಸಲ್ಲಿಕೆ ಮಾಡಿದ್ದವು. ಸರ್ಕಾರವು ಮುಂದಿನ ವರ್ಷ ಒಪ್ಪಂದವನ್ನು ನೀಡಲು ನಿರ್ಧರಿಸಿದ್ದು, ಆಯ್ಕೆ ಮಾಡಿದ ಸಂಸ್ಥೆಗೆ ಡಿಪಿಆರ್ ಪೂರ್ಣಗೊಳಿಸಲು 540 ದಿನಗಳನ್ನು ನೀಡಲಾಗಿದೆ.
ಎಕ್ಸ್‌ಪ್ರೆಸ್‌ವೇ ನಿರ್ಮಾಣವು 2028 ರ ವೇಳೆಗೆ ಪ್ರಾರಂಭ ಆಗಲಿದೆ. ಈ ಯೋಜನೆಯು ಕರ್ನಾಟಕದ ಲೋಕೋಪಯೋಗಿ ಇಲಾಖೆ ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡುವಿನ ಸಹಯೋಗದ ಪ್ರಯತ್ನ ಆಗಿದೆ. ಜೋಡಣೆ ಮತ್ತು ಭೂ ಸ್ವಾಧೀನದ ಮೇಲೆ ಹೆಚ್ಚು ಗಮನಹರಿಸುತ್ತದೆ. ಎಕ್ಸ್‌ಪ್ರೆಸ್‌ವೇ ಅನ್ನು 4-6 ಆರು ಪಥಗಳಲ್ಲಿ ನಿರ್ಮಾಣ ಮಾಡುವ ಸಾಧ್ಯತೆಯಿದೆ.
ಈ ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ ವೇ ತುಮಕೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಹಾದುಹೋಗಲಿದೆ. ಎಕ್ಸ್‌ಪ್ರೆಸ್‌ವೇ ಹಾಸನದ ಮೂಲಕ ಹಾದುಹೋಗಲಿರುವ ಹಿನ್ನೆಲೆ ಈ ಭಾಗದಲ್ಲಿ ಸಾರಿಗೆ ಮೂಲಸೌಕರ್ಯವನ್ನು ಮತ್ತಷ್ಟು ಹೆಚ್ಚಿಸಿದಂತಾಗಲಿದೆ. ದಟ್ಟಣೆ ಕಡಿಮೆ ಮಾಡಲಿದೆ, ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ ಮತ್ತು ಕರ್ನಾಟಕದ ಪ್ರಮುಖ ನಗರಗಳ ನಡುವೆ ಸಂಪರ್ಕ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಜೊತೆಗೆ ಪ್ರವಾಸೋದ್ಯ, ಉದ್ಯಮ, ಆರ್ಥಿಕ ಕ್ಷೇತ್ರದಲ್ಲಿ ಅಭಿವೃದ್ಧಿಗೆ ತುಂಬಾ ಸಹಕಾರಿಯಾಗಲಿದೆ. ಈ ಹೆದ್ದಾರಿ ಎಲ್ಲೆಲ್ಲಿ ಹಾದುಹೋಗುತ್ತದೆಯೋ ಆ ಭಾಗದ ಭೂಮಿ, ನಿವೇಶನ, ಬಾಡಿಗೆ ದರಗಳು ಗಗನಕ್ಕೇರುವುದರಲ್ಲಿ ಯಾವುದೇ ಅನುಮಾನವಿಲ್ಲ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications