Maha Kumbh Mela: ಮೈಸೂರಿನಿಂದ ಮಹಾ ಕುಂಭಮೇಳಕ್ಕೆ ತೆರಳುವವರಿಗೆ ಬಿಗ್ ಗುಡ್ ನ್ಯೂಸ್
Indian Railways: ಭಾರತೀಯ ರೈಲ್ವೆ ಸಾರಿಗೆ ವಿಭಾಗಗಳಲ್ಲಿ ಅತ್ಯಂತ ದೊಡ್ಡದಾಗಿದೆ. ಇದು ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಆಗಾಗ ವಿಶೇಷ ರೈಲುಗಳನ್ನು ಬಿಡುತ್ತಲೇ ಇರುತ್ತದೆ. ಹಾಗೆಯೇ ಇದೀಗ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದು, ಈ ಹಿನ್ನೆಲೆ ಈ ಭಾಗದ ವಿಶೇಷ ರೈಲಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಕೆ ಮಾಡಲಾಗಿದೆ. ಮಾಹಿತಿ ಇಲ್ಲಿದೆ ಗಮನಿಸಿ.
ಪ್ರಯಾಗ್‌ರಾಜ್ ಮಹಾಕುಂಭ ಮೇಳಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ಸಹಾಯ ಆಗಲೆಂದು ಮೈಸೂರು-ವಾರಾಣಸಿ ಎಕ್ಸ್‌ಪ್ರೆಸ್ ರೈಲಿ (22867)ಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಕೆ ಮಾಡಲಾಗುತ್ತಿದೆ. ಈ ಕುರಿರು ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರೈಲ್ವೆ ಸಚಿವಾಲಯಕ್ಕೆ ಮನವಿ ಮಾಡಿದ್ದರು. ಇದೀಗ ಆ ಮನವಿಗೆ ಸ್ಪಂದನೆ ಸಿಕ್ಕಿದೆ. ಈ ಮೂಲಕ ಮಹಾಕುಂಭ ಮೇಳಕ್ಕೆ ತೆರಳುವ ಪ್ರಯಾಣಿಕರಿಗೆ ಅನುಕೂಲ ಆದಂತಾಗಲಿದೆ.

ಮೈಸೂರು-ವಾರಾಣಸಿ ಎಕ್ಸ್‌ಪ್ರೆಸ್ ರೈಲು ಪ್ರಯಾಗರಾಜ್ ಮೂಲಕ ಹಾದು ಹೋಗುವ ಹಿನ್ನೆಲೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಿದರೆ ಜನರಿಗೆ ಅನುಕೂಲ ಆಗುತ್ತದೆ. 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಮೈಸೂರು-ಕೊಡಗು ಕ್ಷೇತ್ರದಿಂದ ತೆರಳುವ ಯಾತ್ರಿಗಳಿಗೆ ನೆರವಾಗಲಿ ಎಂದು ಹೆಚ್ಚುವರಿ ಬೋಗಿಗಳನ್ನ ಅಳವಡಿಕೆ ಮಾಡುವಂತೆ ರೈಲ್ವೆ ಇಲಾಖೆಗೆ ಸಂಸದ ಯದುವೀರ್ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿರುವ ರೈಲ್ವೆ ಇಲಾಖೆಯು ಹೆಚ್ಚುವರಿ ಬೋಗಿಗಳನ್ನು ಅಳವಡಿಸಲು ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.












Click it and Unblock the Notifications