Bullet train project work: ಕಾಮಗಾರಿ ಪ್ರಗತಿಯ ಅದ್ಭುತ ವಿಡಿಯೋ ಹಂಚಿಕೊಂಡು ಮಹತ್ವದ ಮಾಹಿತಿ ನೀಡಿದ ಅಶ್ವಿನಿ ವೈಷ್ಣವ್
ಬೆಂಗಳೂರು, ಮಾರ್ಚ್, 30: ಭಾರತೀಯ ರೈಲ್ವೆಯಲ್ಲಿ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಅದರಲ್ಲೂ ಈ ಹಿಂದೆ ಹೊಸ ಮಾರ್ಗಗಳಲ್ಲಿ ವಂದೇ ಭಾರತ್ ಟ್ರೈನ್ ಸಂಚರಿಸುವ ಅದ್ಭುತ ದೃಶ್ಯದ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಹಾಗೆಯೇ ಇದೀಗ ಬಹುನಿರೀಕ್ಷಿತ ಈ ಮಾರ್ಗದ ಬುಲೆಟ್ ಟ್ರೈನ್ ಯೋಜನೆಯ ಕಾಮಗಾರಿ ಪ್ರಗತಿ ವಿಡಿಯೋವೊಂದನ್ನು ಅಶ್ವಿನಿ ವೈಷ್ಣವ್ ಅವರು ತಮ್ಮ ಟ್ಟಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Bharat’s first ballastless track for #BulletTrain !
— Ashwini Vaishnaw (मोदी का परिवार) (@AshwiniVaishnaw) March 28, 2024
✅320 kmph speed threshold
✅153 km of viaduct completed
✅295.5 km of pier work completed
More to come in Modi 3.0 pic.twitter.com/YV6vP4tbXS
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬುಲೆಟ್ ರೈಲು ಯೋಜನೆಯ ಕಾಮಗಾರಿ ಪ್ರಗತಿಯನ್ನು ವಿಡಿಯೋವನ್ನು ಸಾಮಾಜಿಕ ಜಾಲತಾಣ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ಜೊತೆಗೆ ಮಾಹಿತಿಯನ್ನು ಕೂಡ ಹಂಚಿಕೊಂಡಿದ್ದಾರೆ. ಮುಂಬೈ ಮತ್ತು ಅಹಮದಾಬಾದ್ ನಡುವಿನ ಯೋಜನೆ ಇದಾಗಿದ್ದು, ಮೊದಲ ಬಾರಿಗೆ ದೇಶಿಯವಾಗಿ ಅಭಿವೃದ್ಧಿಪಡಿಸಿರುವ ಬ್ಯಾಲೆಸ್ಟೆಲೆಸ್ ಟ್ರ್ಯಾಕ್ ನಿರ್ಮಾಣ ಮಾಡಲಾಗುತ್ತಿದೆ. ಈ ಟ್ರ್ಯಾಕ್ ಮೇಲೆ ಬುಲೆಟ್ ರೈಲು ಗಂಟೆಗೆ 320 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದೆ ಎಂದು ತಿಳಿಸಿದ್ದಾರೆ.

ಇನ್ನು 295.5 ಕಿಲೋ ಮೀಟರ್ ಹಳಿ ಅಡಿಪಾಯದ ಸೀಲಿಂಗ್ ಕಾಮಗಾರಿ ಪೂರ್ಣಗೊಂಡಿದ್ದು, 153 ಕಿಲೋಮೀಟರ್ ಸೇತುವೆ ನಿರ್ಮಾಣ ಕಾಮಗಾರಿ ಮುಕ್ತಾಯವಾಗಿದೆ ಎಂದು ತಮ್ಮ ಟ್ವಿಟರ್ ಖಾತೆ ಮೂಲಕ ತಿಳಿಸಿದ್ದಾರೆ.
ದೇಶದಲ್ಲೇ ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್ ಟ್ರ್ಯಾಕ್: ಭಾರತೀಯ ರೈಲ್ವೆಯಲ್ಲಿ ದೊಡ್ಡ ದೊಡ್ಡ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಇದೀಗ ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆಗಾಗಿ ದೇಶದಲ್ಲೇ ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್ ಟ್ರ್ಯಾಕ್ ನಿರ್ಮಾಣ ಮಾಡಲಾಗುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಹಾಗಾದರೆ ಇದಕ್ಕೆ ತಗಲು ವೆಚ್ಚ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಜೆ ಸ್ಲ್ಯಾಬ್ ಬ್ಯಾಲೆಸ್ಟ್‌ಲೆಸ್ ಟ್ರ್ಯಾಕ್ ವ್ಯವಸ್ಥೆಯು ಪ್ರಿ ಕ್ಯಾಸ್ಟ್ ಟ್ರ್ಯಾಕ್ ಅನ್ನು ಒಳಗೊಂಡಿದ್ದು, ಇಲ್ಲಿ ಜೋಡಣೆ ಸಾಧನಗಳು ಮತ್ತು ಹಳಿಯನ್ನು ಜೋಡಿಸಲಾಗಿರುತ್ತದೆ. ಈ ಸ್ಲ್ಯಾಬ್ ಅನ್ನು ಆರ್‌ಸಿ ಟ್ರ್ಯಾಕ್ ಬೆಡ್ ಮೇಲೆ ಇರಿಸಲಾಗುತ್ತದೆ. ಇದು ಸುಮಾರು 300 ಎಂಎಂ ದಪ್ಪ ಇರಲಿದೆ. ವಯಡಕ್ಟ್ ಟಾಪ್‌ಗಳಲ್ಲಿ ಪ್ರತ್ಯೇಕ ಅಪ್ ಮತ್ತು ಡೌನ್ ಟ್ರ್ಯಾಕ್ ಲೈನ್‌ಗಳಿಗಾಗಿ ನಿರ್ಮಾಣ ಮಾಡಲಾಗುತ್ತದೆ.












Click it and Unblock the Notifications