ಚಾಮರಾಜನಗರ-ಮೈಸೂರು ದಸರಾ ವಿಶೇಷ ರೈಲು, ವೇಳಾಪಟ್ಟಿ
ಮೈಸೂರು, ಅಕ್ಟೋಬರ್ 15; ನಾಡಹಬ್ಬ ಮೈಸೂರು ದಸರಾಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಸಂಗೀತ ನಿರ್ದೇಶಕ ಹಂಸಲೇಖ 2023ನೇ ಸಾಲಿನ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ. ಇಂದಿನಿಂದ ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಲಿದೆ.
ನೈರುತ್ಯ ರೈಲ್ವೆ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ. ದಸರಾ ಅಂಗವಾಗಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ಮೈಸೂರು-ಚಾಮರಾಜನಗರ ನಡುವೆ ಕಾಯ್ದಿರಿಸದ ವಿಶೇಷ ರೈಲುಗಳನ್ನು ಓಡಿಸಲಿದೆ.

ರೈಲು ವೇಳಾಪಟ್ಟಿ; ರೈಲು ಸಂಖ್ಯೆ 06281/ 06282 ಮೈಸೂರು-ಚಾಮರಾಜನಗರ-ಮೈಸೂರು ಕಾಯ್ದಿರಿಸದ ವಿಶೇಷ ರೈಲು ಒಂದು ಟ್ರಿಪ್ ಸಂಚಾರ ನಡೆಸಲಿದೆ.
ರೈಲು ಸಂಖ್ಯೆ 06281 ಮೈಸೂರು-ಚಾಮರಾಜನಗರ ವಿಶೇಷ ರೈಲು ಅಕ್ಟೋಬರ್ 24 ರಂದು ರಾತ್ರಿ 11:30 ಗಂಟೆಗೆ ಮೈಸೂರಿನಿಂದ ಹೊರಟು ಮರುದಿನ 1:15 am ಗಂಟೆಗೆ ಚಾಮರಾಜನಗರ ನಿಲ್ದಾಣವನ್ನು ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ ಈ ರೈಲು (06282) ಅಕ್ಟೋಬರ್ 25ರಂದು ಬೆಳಗ್ಗೆ 5 ಗಂಟೆಗೆ ಚಾಮರಾಜನಗರದಿಂದ ಹೊರಟು ಅದೇ ದಿನ ಬೆಳಗ್ಗೆ 6:50ಕ್ಕೆ ಮೈಸೂರು ತಲುಪಲಿದೆ.
ಈ ರೈಲು ಎರಡೂ ದಿಕ್ಕುಗಳಲ್ಲಿ ಚಾಮರಾಜಪುರಂ, ಅಶೋಕಪುರಂ,ಕಡಕೋಳ, ತಾಂಡವಪುರ ಹಾಲ್ಟ್, ಸುಜಾತಾ ಪುರಂ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ್ ಗಂಗವಾಡಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.
ಈ ವಿಶೇಷ ರೈಲುಗಳು ಸಾಮಾನ್ಯ ದ್ವಿತೀಯ ದರ್ಜೆ (13) ಮತ್ತು 2ನೇ ದರ್ಜೆ ಲಗೇಜ್ ಕಂ ಬ್ರೇಕ್ ವ್ಯಾನ್/ ಅಂಗವಿಕಲ ಸ್ನೇಹಿ ಕಂಪಾರ್ಟೆಂಟ್ (2) ಸೇರಿದಂತೆ ಒಟ್ಟು 15 ಬೋಗಿಗಳನ್ನು ಹೊಂದಿರುತ್ತವೆ.
ಮೈಸೂರು-ಚಾಮರಾಜನಗರ ರೈಲು; ರೈಲು ಸಂಖ್ಯೆ 06283 ಮೈಸೂರು-ಚಾಮರಾಜನಗರ ವಿಶೇಷ ರೈಲು ಅಕ್ಟೋಬರ್ 24ರಂದು ರಾತ್ರಿ 9:15 ಗಂಟೆಗೆ ಮೈಸೂರಿನಿಂದ ಹೊರಟು ಅದೇ ದಿನ ರಾತ್ರಿ 11:10ಕ್ಕೆ ಚಾಮರಾಜನಗರವನ್ನು ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ ಈ ರೈಲು (06284) ಅಕ್ಟೋಬರ್ 24ರಂದು ರಾತ್ರಿ 11:30 ಗಂಟೆಗೆ ಚಾಮರಾಜನಗರದಿಂದ ಹೊರಟು ಮರುದಿನ 01:30 amಗೆ ಮೈಸೂರು ತಲುಪಲಿದೆ.
ಈ ರೈಲು ಎರಡೂ ದಿಕ್ಕುಗಳಲ್ಲಿ ಚಾಮರಾಜಪುರಂ, ಅಶೋಕಪುರಂ,ಕಡಕೋಳ, ತಾಂಡವಪುರ ಹಾಲ್ಟ್, ಸುಜಾತಾಪುರಂ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಡ್, ನರಸಾಂಬುಧಿ ಹಾಲ್ಡ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ್ ಗಂಗವಾಡಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.
ಈ ವಿಶೇಷ ರೈಲುಗಳಲ್ಲಿ ಎಸಿ ಚೇರ್ ಕಾರ್ (1), ನಾನ್ ಎಸಿ ಚೇರ್ ಕಾರ್ ಸಿಟಿಂಗ್ (9), ಜನರಲ್ ಸೆಕೆಂಡ್ ಕ್ಲಾಸ್ (9) ಮತ್ತು 2ನೇ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್/ ಅಂಗವಿಕಲ ಸ್ನೇಹಿ ಕಂಪಾರ್ಟೆಂಟ್ (2) ಸೇರಿದಂತೆ 21 ಬೋಗಿಗಳು ಹೊಂದಿರುತ್ತವೆ. ಎಸಿ ಚೇರ್ ಕಾರ್ ಬೋಗಿಗಳು ಲಾಕ್ ಸ್ಥಿತಿಯಲ್ಲಿರುತ್ತವೆ.












Click it and Unblock the Notifications