ರೈಲು ಸೇವೆಯಲ್ಲಿ ಬದಲಾವಣೆ; ಬೆಂಗಳೂರು, ತುಮಕೂರು, ಹುಬ್ಬಳ್ಳಿ ಪ್ರಯಾಣಿಕರ ಗಮನಕ್ಕೆ
ಬೆಂಗಳೂರು, ನವೆಂಬರ್ 20: ನೈಋತ್ಯ ರೈಲ್ವೆ ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆಯನ್ನು ಮಾಡಿದೆ. ಬೆಂಗಳೂರು-ತುಮಕೂರು, ಬೆಂಗಳೂರು-ಹುಬ್ಬಳ್ಳಿ ರೈಲು ಪ್ರಯಾಣಿಕರು ಈ ಕುರಿತು ಮಾಹಿತಿ ತಿಳಿದು ಸಂಚಾರವನ್ನು ನಡೆಸಬಹುದು. ರೈಲು ಸಂಚಾರ ರದ್ದು, ರೈಲು ಸೇವೆ ಭಾಗಶಃ ರದ್ದುಗೊಳಿಸಲಾಗಿದೆ. ಪ್ರಯಾಣಿಕರು ಇಲಾಖೆ ಜೊತೆ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.
ನೈಋತ್ಯ ರೈಲ್ವೆಯ ಪ್ರಕಟಣೆಯ ಮಾಹಿತಿಯಂತೆ ನಿಡವಂದ ಯಾರ್ಡ್‌ನಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಸಲುವಾಗಿ, ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ, ವಿವರಗಳು ಇಲ್ಲಿದೆ.

ರೈಲು ಸಂಚಾರ ರದ್ದು: ನವೆಂಬರ್ 23ರಂದು ತುಮಕೂರು-ಬಾಣಸವಾಡಿ ಮೆಮು ವಿಶೇಷ ರೈಲು (ರೈಲು ಸಂಖ್ಯೆ 06512), ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ 16239) ಮತ್ತು ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16240) ರೈಲುಗಳ ಸಂಚಾರವನ್ನು ರದ್ದು ಮಾಡಲಾಗುತ್ತಿದೆ.
ರೈಲು ಸಂಚಾರ ಭಾಗಶಃ ರದ್ದು: ನವೆಂಬರ್ 23 ಮತ್ತು 24ರಂದು ಕೆಎಸ್‌ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ ( ರೈಲು ಸಂಖ್ಯೆ 06571) ರೈಲು ಸೇವೆಯನ್ನು ದೊಡ್ಡಬೆಲೆ-ತುಮಕೂರು ನಡುವೆ ಮತ್ತು ತುಮಕೂರು-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ( ರೈಲು ಸಂಖ್ಯೆ 06576) ರೈಲು ಸೇವೆಯನ್ನು ತುಮಕೂರು-ದೊಡ್ಡಬೆಲೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ.
ನವೆಂಬರ್ 23ರಂದು ಕೆಎಸ್‌ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ (ರೈಲು ಸಂಖ್ಯೆ 06575) ರೈಲು ದೊಡ್ಡಬೆಲೆ-ತುಮಕೂರು ನಡುವೆ ಮತ್ತು ತುಮಕೂರು-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ( ರೈಲು ಸಂಖ್ಯೆ 06572) ರೈಲು ಸೇವೆಯನ್ನು ತುಮಕೂರು-ದೊಡ್ಡಬೆಲೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ.
ರೈಲುಗಳ ನಿಯಂತ್ರಣ: ನವೆಂಬರ್ 22 ರಂದು ಹೊರಡುವ ರೈಲು ಸಂಖ್ಯೆ 17392 ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗದಲ್ಲಿ 20 ನಿಮಿಷ, ನವೆಂಬರ್ 24 ರಂದು ಹೊರಡುವ ರೈಲು ಸಂಖ್ಯೆ 20652 ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗದಲ್ಲಿ 30 ನಿಮಿಷ ಮತ್ತು ರೈಲು ಸಂಖ್ಯೆ 17326 ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗದಲ್ಲಿ 120 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ.
ರೈಲು ತಡವಾಗಿ ಆರಂಭ: ನವೆಂಬರ್ 24 ರಂದು ಹೊರಡುವ ಕೆಎಸ್‌ಆರ್ ಬೆಂಗಳೂರು-ಧಾರವಾಡ ಸಿದ್ಧಗಂಗಾ ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 12725) ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ 30 ನಿಮಿಷ ಮತ್ತು ಯಶವಂತಪುರ-ಶಿವಮೊಗ್ಗ ಟೌನ್ ಇಂಟರ್ ಸಿಟಿ ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16579) ರೈಲು ಯಶವಂತಪುರದಿಂದ 90 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ.
ಕಳೆದ ವಾರ ಬೆಂಗಳೂರು ನಗರದಿಂದ ಸಂಚಾರ ನಡೆಸುವ ಕೆಲವು ರೈಲುಗಳಿಗೆ ತಿಪಟೂರು ಮತ್ತು ಸಂಪಿಗೆ ರೋಡ್ ನಿಲ್ದಾಣಗಳಲ್ಲಿ ಹೆಚ್ಚುವರಿ ನಿಲುಗಡೆಯನ್ನು ಒದಗಿಸುವ ಕುರಿತು ರೈಲ್ವೆ ಇಲಾಖೆ ಆದೇಶವನ್ನು ಹೊರಡಿಸಿತ್ತು. ಪ್ರಯಾಣಿಕರ ಬೇಡಿಕೆಯಂತೆ ಪ್ರಾಯೋಗಿಕವಾಗಿ ರೈಲು ನಿಲುಗಡೆ ನೀಡಲಾಗಿತ್ತು. ಇದರಿಂದಾಗಿ ಈ ಪ್ರದೇಶದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಸಹಾಯಕವಾಗಲಿದೆ ಎಂದು ಹೇಳಿತ್ತು.












Click it and Unblock the Notifications