Charmadi Ghat: ಚಾರ್ಮಾಡಿ ಘಾಟ್ ಹೆದ್ದಾರಿ ದ್ವಿಪಥದ ಕಾಮಗಾರಿ ಕಾಮಗಾರಿ ಆರಂಭ ಯಾವಾಗ ಹಾಗೂ ಅನುದಾನ ಎಷ್ಟು?
Charmadi Ghat: ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲ್ಲೂಕಿನ ಮೇಲೆ ಹಾದುಹೋಗುವ ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ. ಇನ್ನು ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಬಿಡುಗಡೆಯಾದ ಅನುದಾನ ಎಷ್ಟು ಹಾಗೂ ಕಾಮಗಾರು ಆರಂಭ ಯಾವಾಗ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿ ಮಾಡಲು ಕೇಂದ್ರ ಸರ್ಕಾರ 343.74 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಇದರ ಕಾಮಗಾರಿ ಶೀಘ್ರದಲ್ಲೇ ಕಾಮಗಾರಿ ಆರಂಭ ಆಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಮಾಹಿತಿ ನೀಡಿದ್ದಾರೆ. ಹಾಗಾದರೆ ಇದರಿಂದ ಯಾವೆಲ್ಲಾ ಜಿಲ್ಲೆಗಳಿಗೆ ಅನುಕೂಲ ಆಗಲಿದೆ ಎಂದು ಇಲ್ಲಿ ಗಮನಿಸಿ.

ಮಂಗಳೂರು-ಮೂಡಿಗೆರೆ-ತುಮಕೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ- 73ರ ಚಾರ್ಮಾಡಿ ಘಾಟಿಯಲ್ಲಿ 75-86.20 ಕಿಲೋ ಮೀಟರ್ ವರೆಗೆ ಅಭಿವೃದ್ದಿ ಆಗಲಿದೆ. ಇದರಿಂದ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣ ಆಗಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸಹ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ ಪ್ರಮುಖ ಹೆದ್ದಾರಿಯಾದ ಚಾರ್ಮಾಡಿ ಘಾಟ್ ಅನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚು ಅನುಕೂಲ ಆಗಲಿದೆ. ಅಲ್ಲದೆ, ಯಾವುದೇ ತೊಂದರೆ ಇಲ್ಲದೆ, ಸುಗಮವಾಗಿ ಸರಕು ಸಾಗಾಣೆ ಮಾಡಬಹುದಾಗಿದೆ. ಇದರಿಂದ ಈ ಭಾಗದ ವ್ಯಾಪಾರ-ವಹಿವಾಟು ಮತ್ತಷ್ಟು ಅಭಿವೃದ್ಧಿಯಾಗಲಿದೆ.
ಆ ಮೂಲಕ, ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲು ಎಂದೇ ಪ್ರಖ್ಯಾತಿ ಪಡೆದಿರುವ ಕರಾವಳಿ ಮತ್ತಷ್ಟು ಅಭಿವೃದ್ಧಿ ಕಾಣಲಿದೆ. ಈ ಹಿನ್ನೆಲೆ ಚಾರ್ಮಾಡಿ ಘಾಟ್ ಹೆದ್ದಾರಿಯನ್ನು ದ್ವಿಪಥ ಹೆದ್ದಾರಿಯನ್ನಾಗಿ ಪರಿವರ್ತಿಸಲು 343,74,00,000 ರೂಪಾಯಿ ಬಿಡುಗಡೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಇಲಾಖೆ ಅಧಿಕಾರಿಗಳಿಗೆ ಜಿಲ್ಲೆಯ ಜನತೆ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.












Click it and Unblock the Notifications