ಪ್ರವಾಸಿ ವಾಹನಗಳ ತಪಾಸಣೆ: ಚಿಕ್ಕಮಗಳೂರು ಪ್ರವಾಸ, ಪೊಲೀಸರ ಸಲಹೆಗಳು
ಚಿಕ್ಕಮಗಳೂರು, ಜುಲೈ 14: ನೈಋತ್ಯ ಮುಂಗಾರು ಮಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಬ್ಬರಿಸುತ್ತಿದೆ. ಈ ಸಮಯದಲ್ಲಿ ಪ್ರಕೃತಿ ಸೌಂದರ್ಯ ಸವಿಯಲು ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದೆ. ಆದರೆ ಕೆಲವು ಪ್ರವಾಸಿಗರಿಂದ ಉಳಿದವರಿಗೆ ಕಿರಿಕಿರಿ ಉಂಟಾಗುತ್ತಿದೆ. ಆದ್ದರಿಂದ ಜಿಲ್ಲಾ ಪೊಲೀಸರು ಪ್ರವಾಸಿ ವಾಹನಗಳ ತಪಾಸಣೆ ಆರಂಭಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಮತ್ತು ಚಿಕ್ಕಮಗಳೂರು ಅಡ್ವೆಂಚರ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮುಳ್ಳಯ್ಯನಗಿರಿಗೆ ಹೋಗುವ ರಸ್ತೆಯಲ್ಲಿರುವ ಕೈಮರ ಚೆಕ್‌ಪೋಸ್ಟ್‌ನಲ್ಲಿ ಎಸ್‌ಪಿ ಡಾ. ವಿಕ್ರಮ ಅಮಟೆ ನೇತೃತ್ವದಲ್ಲಿ ಪ್ರವಾಸಿ ವಾಹನಗಳ ತಪಾಸಣೆ ನಡೆಸಲಾಯಿತು. ಪ್ಲಾಸ್ಟಿಕ್, ಮದ್ಯ ಮತ್ತು ತಂಬಾಕು ಉತ್ಪನ್ನಗಳಿಗಾಗಿ ಹುಡುಕಾಟ ನಡೆಸಲಾಯಿತು.

ತಪಾಸಣೆ ವೇಳೆಯಲ್ಲಿ ಕರ್ನಾಟಕ ಪೊಲೀಸ್ ಆಕ್ಟ್ ಅಡಿಯಲ್ಲಿ 86 ಲಘು ಪ್ರಕರಣಗಳು, ಅಬಕಾರಿ ಕಾಯ್ದೆಯಡಿಯಲ್ಲಿ 1 ಪ್ರಕರಣ ಮತ್ತು ಸಂಚಾರಿ ನಿಯಮ ಉಲ್ಲಂಘನೆ ವಿರುದ್ಧ 6 ಪ್ರಕರಣಗಳನ್ನು ದಾಖಲಿಸಲಾಗಿದೆ. ಇಂತಹ ಕಾರ್ಯಾಚರಣೆಯನ್ನು ಜಿಲ್ಲೆಯ ಇತರ ಪ್ರವಾಸಿ ಸ್ಥಳಗಳಲ್ಲಿಯೂ ಸಹ ನಡೆಸಲಾಗುತ್ತಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಾದ್ಯಂತ ಕೆ. ಪಿ. ಆಕ್ಟ್ ಮತ್ತು ಸಂಚಾರಿ ನಿಯಮ ಉಲ್ಲಂಘನೆ ವಿರುದ್ಧ 225 ಪ್ರಕರಣಗಳು, ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ವಿರುದ್ಧ 2 ಪ್ರಕರಣಗಳು, ಕೋಟ್ಪಾ ಕಾಯ್ದೆಯಡಿಯಲ್ಲಿ 10 ಪ್ರಕರಣಗಳು ಮತ್ತು ಅಬಕಾರಿ ಕಾಯ್ದೆಯಡಿಯಲ್ಲಿ 2 ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರವಾಸಿಗರಿಗೆ ಸಲಹೆಗಳು
* ಪ್ರವಾಸಿ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿ, ತೊಂದರೆ ಉಂಟುಮಾಡುವ ಯಾವುದೇ ರೀತಿಯ ಚಟುವಟಿಕೆಯಲ್ಲಿ ತೊಡಗಬೇಡಿ
* ಪ್ರವಾಸಿ ಸ್ಥಳಗಳಲ್ಲಿ ಮದ್ಯಪಾನ ಮಾಡಬೇಡಿ
* ಇತರರಿಗೆ ಅನಾನುಕೂಲತೆ ಮಾಡುವ ರೀತಿಯಲ್ಲಿ ನಿಮ್ಮ ವಾಹನಗಳನ್ನು ನಿಲ್ಲಿಸಬೇಡಿ
* ಪ್ರವಾಸಿ ತಾಣಗಳಲ್ಲಿ ಜವಾಬ್ದಾರಿಯುತವಾಗಿ ವರ್ತಿಸಿ
* ಪ್ರವಾಸಿ ತಾಣಗಳಲ್ಲಿ ಮಹಿಳೆಯರು ಅಥವಾ ಹೆಣ್ಣು ಮಕ್ಕಳನ್ನು ಚುಡಾಯಿಸಬೇಡಿ
* ಪ್ಲಾಸ್ಟಿಕ್ ಬಾಟಲ್ ಅಥವಾ ಇತರೆ ಅನುಪಯುಕ್ತ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡಬೇಡಿ
* ಪ್ರಕೃತಿ, ಅದರ ಉತ್ತಮ ನಿರ್ವಹಣೆ ಪ್ರತಿಯೊಬ್ಬ ನಾಗರೀಕರ ಜವಾಬ್ದಾರಿ ಎಂಬುದು ತಿಳಿಯಿರಿ
* ಶಿಸ್ತು, ಕಾನೂನು ಹಾಗೂ ನೀತಿ ನಿಯಮಗಳನ್ನು ಸದಾ ಅನುಸರಿಸಿ ಹಾಗೂ ಗೌರವಿಸಿ
* ಅರಣ್ಯ ಇಲಾಖೆ, ಜಿಲ್ಲಾಡಳಿತದ ಸೂಚನೆಗಳನ್ನು ತಪ್ಪದೆ ಪಾಲಿಸಿ
* ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಬೇಡಿ
* ದಯವಿಟ್ಟು ಪ್ರವಾಸಿ ಸ್ಥಳಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬೇಡಿ/ ಎಸೆಯಬೇಡಿ
* ನಿಮ್ಮ ಸುರಕ್ಷತೆ ಮತ್ತು ನಿಮ್ಮ ಪ್ರೀತಿಪಾತ್ರರ ಸುರಕ್ಷತೆಯ ಬಗ್ಗೆ ಸದಾ ಜಾಗರೂಕರಾಗಿರಿ
ಮುಂಗಾರು ಮಳೆ ಅವಧಿಯಲ್ಲಿ ಚಿಕ್ಕಮಗಳೂರು ಪ್ರವಾಸಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ ಕೆಲವು ಪ್ರವಾಸಿಗರ ಹುಚ್ಚಾಟದಿಂದಾಗಿ ದೇವರಮನೆ ಮೋಜು, ಮಸ್ತಿಯ ಅಡ್ಡವಾಗಿತ್ತು. ಇದರಿಂದಾಗಿ ಶ್ರೀ ಕ್ಷೇತ್ರ ಕಾಲಭೈರವೇಶ್ವರನ ಸನ್ನಿಧಿಗೆ ಆಗಮಿಸುವ ಭಕ್ತರು ಮುಜುಗರ ಅನುಭವಿಸಿದ್ದರು.
ದೇವರಮನೆಯಲ್ಲಿ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ದೇವಾಲಯವಿದೆ. ಈ ಕ್ಷೇತ್ರಕ್ಕೆ ಭಕ್ತರು ಆಗಮಿಸುತ್ತಾರೆ. ಆದರೆ ಇಲ್ಲಿಗೆ ಸಂಪರ್ಕಿಸುವ ರಸ್ತೆಯಲ್ಲಿ ಕೆಲವು ಪ್ರವಾಸಿಗತು ಮದ್ಯ ಕುಡಿದು, ಧಮ್ ಹೊಡೆದುಕೊಂಡು, ರಸ್ತೆ ಮಧ್ಯೆ ಅಡ್ಡಾದಿಡ್ಡಿ ವಾಹನಗಳನ್ನು ನಿಲ್ಲಿಸಿಕೊಂಡು, ಜೋರಾಗಿ ಹಾಡು ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಇದರಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.
ಕೆಲವು ಪ್ರವಾಸಿಗರು ಜೋರಾಗಿ ಕಿರುಚಾಡಿ ಗದ್ದಲವನ್ನು ಎಬ್ಬಿಸುತ್ತಿದ್ದರು. ಸ್ಥಳೀಯರ ಮಾತನ್ನು ಸಹ ಯಾರೂ ಕೇಳುತ್ತಿರಲಿಲ್ಲ. ಆದ್ದರಿಂದ ಪೊಲೀಸರು ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದರು. ಬಳಿಕ ಬಣಕಲ್ ಠಾಣೆ ಪೊಲೀಸರು ದೇವರಮನೆ ಸಂಪರ್ಕಿಸುವ ರಸ್ತೆಯಲ್ಲಿ ಪ್ರವಾಸಿ ವಾಹನಗಳಲ್ಲಿ ಪಾರ್ಟಿ ಮಾಡುವವರ ಮೇಲೆ ದಾಳಿ ಮಾಡಿ ಪ್ರಕರಣ ದಾಖಲು ಮಾಡಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications