ಭಾರೀ ಮಳೆ: ಚಿಕ್ಕಮಗಳೂರು ಜಿಲ್ಲೆಯ ಈ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು, ಜುಲೈ, 28: ಭಾರೀ ಮಳೆ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಪಶ್ಚಿಮ ಘಟ್ಟಗಳಂತಹ ಪ್ರವಾಸಿ ತಾಣಗಳಲ್ಲಿ ಜಲಮೂಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಉಡುಪಿಯ ಜಲಪಾತದಲ್ಲಿ ಯುವಕನೊಬ್ಬ ಕೊಚ್ಚಿ ಹೋಗಿದ್ದ ಬೆನ್ನೆಲ್ಲೇ ಚಿಕ್ಕಮಗಳೂರು ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ಮುಂಜಾಗ್ರತಾ ಕ್ರಮವಾಗಿ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ‌ ಫಾಲ್ಸ್ ಸೇರಿದಂತೆ ಇನ್ನಿತರ ಜಿಲ್ಲೆಯ ಪ್ರವಾಸಿ ತಾಣಗಳಿಗೆ ತಾತ್ಕಾಲಿಕವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

Chikkamagaluru tour: Restriction to Tourists in these tourist spots of Chikkamagaluru district

ಅದರಲ್ಲೂ ವೀಕೆಂಡ್‌ನಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಿಬ್ಬಂದಿ ಮುಂಜಾಗ್ರತಾ ಕ್ರಮವಹಿಸಿದ್ದು, ಕೈಮರ ಚೆಕ್ ಪೋಸ್ಟ್‌ನಲ್ಲೇ ಪ್ರವಾಸಿಗನ್ನು ತಡೆದು ವಾಪಾಸ್‌ ಕಳುಹಿಸುತ್ತಿದ್ದಾರೆ.

ಅಲ್ಲದೆ 2-3 ದಿನದಿಂದ ಜಿಲ್ಲೆ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಪ್ರವಾಸಿಗರಲ್ಲಿ ಮನವಿ ಮಾಡುತ್ತಲೇ ಇದೆ. ಆದರೆ ಪ್ರವಾಸಿಗರು ಮನವಿಗೆ ಸ್ಪಂದಿಸದ ಹಿನ್ನೆಲೆ ಜಿಲ್ಲೆಯ ಗಿರಿ ಪ್ರದೇಶಗಳು ಸೇರಿದಂತೆ ಹಲವು ಪ್ರವಾಸಿ ತಾಣಗಳ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಜಲಪಾತ ನೋಡಲು ಆಗಮಿಸಿದ ಪ್ರವಾಸಿಗರ ದಂಡು

ಹಾಗೆಯೇ ನಿರಂತರ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಹೊಸ ಲೋಕದಂತಾಗಿದ್ದು, ಹೆಜ್ಜೆ ಹೆಜ್ಜೆಗೂ ಜಲಪಾತಗಳು ಸೃಷ್ಟಿಯಾಗಿವೆ. ಮಳೆಯ ನಡುವೆ ಮಂಜು ಮುಸುಕಿದ್ದು, ಕಾಫಿನಾಡು ಭೂಲೋಕದ ಸ್ವರ್ಗದಂತೆ ಕಾಣುತ್ತಿದೆ. ಈ ಸುಂದರವಾದ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇತರ ಜಿಲ್ಲೆಗಳಿಂದ ಜನ ಜಿಲ್ಲೆಗೆ ಆಗಮಿಸುತ್ತಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ದತ್ತಪೀಠ ರಸ್ತೆಯಲ್ಲಿರುವ ಹೊನ್ನಮ್ಮನ ಹಳ್ಳ ಜಲಪಾತ ಉಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಹೊನ್ನಮ್ಮನ ಹಳ್ಳ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಮೈದುಂಬಿ ಹರಿಯುತ್ತಿರುವ ಹೊನ್ನಮ್ಮಳ ಹಳ್ಳ ಜಲಪಾತ ನೋಡಲು ಪ್ರವಾಸಿಗರು ಮುಗಿಬಿದ್ದಿದ್ದಾರೆ. ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಈ ಜಲಪಾತದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.

ಚಿಕ್ಕಮಗಳೂರಿನ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ. ಕೆಲವು ಪ್ರವಾಸಿಗರು ಜಾಗ್ರತೆಯಿಂದ ಮಲೆನಾಡಿನ ಪ್ರಕೃತಿ ಸೌಂದರ್ಯ ಸವಿದರೆ ಇನ್ನೂ ಕೆಲವರು ಅಪಾಯದ ಸ್ಥಳಕ್ಕೆ ತೆರಳಿ ಹುಚ್ಚಾಟ ಮೆರೆಯುತ್ತಿದ್ದಾರೆ. ಹೊನ್ನಮ್ಮನ ಹಳ್ಳ ಜಲಪಾತದಲ್ಲಿ ನೀರಿನ ಮಧ್ಯೆ ನಿಂತು ಕುಣಿದು ಕುಪ್ಪಳಿಸುತ್ತಾ ಕೆಲವು ಪ್ರವಾಸಿಗರು ಅಜಾಗ್ರತೆಯಿಂದ ವರ್ತಿಸುತ್ತಿರುವುದು ಕೂಡ ಕಂಡು ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಹುತೇಕ ನದಿ, ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಜೊತೆಗೆ ಗುಡ್ಡ ಕುಸಿತಗಳು ಕೂಡ ಸಂಭವಿಸುತ್ತಿದ್ದು, ಪ್ರವಾಸಿಗರು ಹಾಗೂ ಸ್ಥಳೀಯ ನಿವಾಸಿಗಳು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಹೀಗಿದ್ದರೂ ಕೂಡ ಚಾರ್ಮಾಡಿ ಘಾಟ್‌ನಲ್ಲಿ ಪ್ರವಾಸಿಗರ ಪುಂಡಾಟ ಹೆಚ್ಚುತ್ತಲೇ ಇದೆ.

ಪ್ರವಾಸಿಗರು ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಪಾಯಕಾರಿ ಬಂಡೆ ಮೇಲೆ ಹತ್ತಿ ಫೋಟೋ ತೆಗೆದುಕೊಳ್ಳುವ ಸಾಹಸ ಮಾಡುತ್ತಿದ್ದಾರೆ. ಸ್ವಲ್ಪ ಜಾರಿದರೂ ದೊಡ್ಡ ಮಟ್ಟದ ಅಪಾಯ ಸಂಭವಿಸುತ್ತದೆ ಎಂದು ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ಮನವಿ ಮಾಡಿದರೂ ಕೂಡ ಪ್ರವಾಸಿಗರು ಮಾತ್ರ ಚಾರ್ಮಾಡಿ ಘಾಟ್‌ನ ಅಪಾಯದ ಸ್ಥಳದಲ್ಲಿರುವ ಕಲ್ಲು, ಬಂಡೆಗಳ ಮೇಲೆ ನಿಂತು ಫೋಟೋ ತೆಗೆಸಿಕೊಳ್ಳುವ ಹಾಗೂ ವಿಡಿಯೋ ಮಾಡುವ ಸಾಹಸ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+