Christmas and New Year : ಬೆಂಗಳೂರಿನಿಂದ ವಿವಿಧ ಊರುಗಳಿಗೆ ವಿಶೇಷ ರೈಲು ಸೇವೆ
ಹೊಸ ವರ್ಷ ಹಾಗೂ ಸಾಲು ಸಾಲು ರಜೆ ದಿನಗಳು ಬರುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ರೈಲುಗಳನ್ನು ಬಿಡಲಾಗಿದೆ. ವರ್ಷಾಂತ್ಯವೂ ಆಗಿರುವುದರಿಂದ ಸಾಲು ಸಾಲು ರಜೆಗಳು ಬರುತ್ತಿದ್ದು, ಈ ಸಂದರ್ಭದಲ್ಲಿ ಪ್ರವಾಸ ಮಾಡುವವರ ಸಂಖ್ಯೆ ಹೆಚ್ಚಾಗಿ ಇರಲಿದೆ. ಹೀಗಾಗಿ ದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ ವಿಶೇಷ ರೈಲುಗಳನ್ನು ಬಿಡಲಾಗಿದೆ. ಕ್ರಿಸ್ಮಸ್ ಹಾಗೂ ಹೊಸ ವರ್ಷ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ವಿವಿಧ ಊರಿಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧ ರೈಲು ನಿಲ್ದಾಣಗಳಿಂದ ಹೆಚ್ಚುವರಿ ರೈಲುಗಳ ವ್ಯವಸ್ಥೆಯನ್ನು ಮಾಡಲಾಗಿದೆ. ನೈಋತ್ಯ ರೈಲ್ವೆಯಿಂದ ನಗರದಿಂದ ಹೊರಡುವ ರೈಲುಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಯಾವೆಲ್ಲ ರೈಲುಗಳ ಸೇವೆ ವಿಸ್ತರಣೆಯಾಗಿದೆ ಎನ್ನುವ ವಿವರ ಇಲ್ಲಿದೆ.
ಕ್ರಿಸ್ಮಸ್ ಹಾಗೂ ಹೊಸ ವರ್ಷ 2025ರ ಸಂಭ್ರಮಾಚರಣೆ ಜೋರಾಗಿದೆ. ಈ ಹಿನ್ನೆಲಯಲ್ಲಿ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸೇವೆಯನ್ನು ಪ್ರಾರಂಭಿಸಲಾಗಿದೆ. ಇದರೊಂದಿಗೆ ಉತ್ತರ ಪ್ರದೇಶದಲ್ಲಿ ಮಹಾ ಕುಂಭಮೇಳ ಸಹ ನಡೆಯುತ್ತಿರುವುದರಿಂದ ಮೈಸೂರಿನಿಂದ ಪ್ರಯಾಗರಾಜ್‌ಗೆ ವಿಶೇಷ ಏಕಮುಖ ಎಕ್ಸ್‌ಪ್ರೆಸ್ ರೈಲು (06215) ಸಂಚಾರ ಪ್ರಾರಂಭಿಸಲಾಗಿದೆ. ಇನ್ನು ರೈಲು ಸಂಖ್ಯೆ 06507 SMVT ಬೆಂಗಳೂರು-ತಿರುವನಂತಪುರಂ ಉತ್ತರ ಎಕ್ಸ್‌ಪ್ರೆಸ್ ವಿಶೇಷ ರೈಲು ಡಿಸೆಂಬರ್ 23ರ ರಾತ್ರಿ 11 ಗಂಟೆಗೆ ಬೆಂಗಳೂರಿನ ಸರ್.ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಹೊರಟು ಡಿಸೆಂಬರ್ 24ಕ್ಕೆ ಸಂಜೆ 4.30ಕ್ಕೆ ತಿರುವನಂತಪುರಂ ತಲುಪಲಿದೆ.

ಡಿಸೆಂಬರ್ 24ರ ಸಂಜೆ 5.55 ಕ್ಕೆ ರೈಲು ಸಂಖ್ಯೆ 06508 ತಿರುವನಂತಪುರಂ ಉತ್ತರ - ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು ತಿರುವನಂತಪುರಂನಿಂದ ಹೊರಟು ಮರುದಿನ ಬೆಳಿಗ್ಗೆ 11.15 ಕ್ಕೆ ಬೆಂಗಳೂರಿನ ಸರ್.ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ಬರಲಿದೆ. ಈ ರೈಲು ತಮಿಳುನಾಡು ಹಾಗೂ ಕೇರಳದ ಹಲವು ಪ್ರಮುಖ ನಿಲ್ದಾಣಗಳಲ್ಲಿ ಸ್ಟಾಪ್ ಕೊಡಲಿದೆ. ಕೃಷ್ಣರಾಜಪುರ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಿಂಗವನಂ, ತಿರುವಲ್ಲಾ, ಚೆಂಗನ್ನೂರ್, ಮಾವೇಲಿಕರ, ಕಾಯಂಕುಳಂ ಹಾಗೂ ಕೊಲ್ಲಂ ರೈಲು ನಿಲ್ದಾಣಗಳಲ್ಲಿ ಎರಡೂ ದಿಕ್ಕುಗಳಲ್ಲಿ ರೈಲು ನಿಲುಗಡೆ ಇರಲಿದೆ.

ಇನ್ನು ಸರ್. ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ವಿಶೇಷ ರೈಲು ಸಂಚರಿಸಲಿದೆ. ಡಿಸೆಂಬರ್ 24ರ ರಾತ್ರಿ 9.15 ಕ್ಕೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 7.40 ಕ್ಕೆ ಕಲಬುರಗಿ ತಲುಪಲಿದೆ. ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಅದೋನಿ, ಮಂತ್ರಾಲಯ, ರಾಯಚೂರು, ಕೃಷ್ಣ ಸೇರಿದಂತೆ ಹಲವು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ಕೊಡಲಿದೆ. ಇನ್ನು ಹಿಂದಿರುಗುವಾಗ ರೈಲು ಸಂಖ್ಯೆ 06590 ಕಲಬುರಗಿ- ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಡಿಸೆಂಬರ್ 23 ಮತ್ತು 25 ರಂದು ಬೆಳಿಗ್ಗೆ 9:35ಕ್ಕೆ ಕಲಬುರಗಿಯಿಂದ ಹೊರಟು ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್.ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ಬರಲಿದೆ.












Click it and Unblock the Notifications