Deepavali 2023: KKRTCಯಿಂದ 600 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ, ಮಾರ್ಗ, ಸಮಯ, ದರಗಳ ವಿವರ

ಕರ್ನಾಟಕ, ನವೆಂಬರ್‌, 10: ಬೆಳಕಿನ ಹಬ್ಬೆ ದೀಪಾವಳಿಗೆ ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿ ಇದ್ದು, ಈ ಹಿನ್ನೆಲೆ ನಗರ ಪ್ರದೇಶಗಳಿಂದ ಜನರು ತಮ್ಮ ತಮ್ಮ ಊರುಗಳಿಗೆ ಹೋಗಲು ಕಾತರದಿಂದ ಕಾಯುತ್ತಿದ್ದಾರೆ. ಆದ್ದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆ ಬೆಂಗಳೂರಿನಿಂದ ಈಗಾಗಲೇ ಹಲವೆಡೆ ವಿಶೇಷ ಬಸ್‌ಗಳನ್ನು ಬಿಟ್ಟಿದೆ. ಹಾಗೆಯೇ ಸಾರಿಗೆ ಸಂಸ್ಥೆಯ ಒಂದು ಭಾಗವಾರ KKRTCಯು ಕೂಡ 600 ಹೆಚ್ಚುವರಿ ಬಸ್‌ಗಳನ್ನು ಬಿಡಲು ನಿರ್ಧರಿಸಿದೆ. ಮಾರ್ಗಗಳು, ಪ್ರಯಾಣ ದರ, ದಿನಾಂಕಗಳ ವಿವರವನ್ನು ತಿಳಿಯಿರಿ.

ಈಗಾಗಲೇ ಕಳೆದ ತಿಂಗಳು KSRTCಯು ದಸರಾ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕೆ ತಕ್ಕೆಂತ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ವಿಶೇಷ ಬಸ್‌ಗಳನ್ನು ಬಿಟ್ಟಿತ್ತು. ಮತ್ತೆ ಇದೀಗ ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿರುವ ಹಿನ್ನೆಲೆ ಜನರು ತಮ್ಮ ಊರುಗಳಿಗೆ ಹೋಗಲು ಕಾತರದಿಂದ ಕಾದಿರುತ್ತಾರೆ. ಆದ್ದರಿಂದ ಸಾರಿಗೆ ಇಲಾಖೆ ಮತ್ತೇ ವಿಶೇಷ ಬಸ್‌ಗಳನ್ನು ಬಿಟ್ಟಿದೆ. ಹಾಗೆಯೇ ಕೆಕೆಆರ್‌ಟಿಸಿಯಿಂದಲೂ ಕೂಡ ವಿಶೇಷ ಬಸ್‌ಗಳನ್ನು ಬಿಡಲು ನಿರ್ಧರಿಸಲಾಗಿದೆ.

deepavali-2023

ದೀಪಾವಳಿ ಹಬ್ಬ ಮತ್ತು ಹುಲಿಜಂತಿ ಶ್ರೀ ಮಾಳಿಂಗರಾಯ ಜಾತ್ರೆ ಹಿನ್ನೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (KKRTC)ಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ನವೆಂಬರ್‌ 11 ಮತ್ತು 12ರಂದು ತಾಲೂಕು, ಜಿಲ್ಲಾಕೇಂದ್ರಗಳಿಂದ ಬೆಂಗಳೂರು, ಹುಲಿಜಂತಿ ಮತ್ತು ಇತರೆ ಪ್ರಮುಖ ಸ್ಥಳಗಳಿಗೆ ಒಟ್ಟು 600 ಹೆಚ್ಚುವರಿ ಬಸ್‌ಗಳನ್ನು ಬಿಡಲು ನಿರ್ಧಾರ ಮಾಡಿದೆ.

ಇನ್ನು ಹಬ್ಬ ಮುಗಿದ ಬಳಿಕ ವಾಪಾಸ್‌ ಮತ್ತೆ ಹೋಗುವವರಿಗೆ ಬೆಂಗಳೂರು ಮತ್ತು ಇತರೆ ಸ್ಥಳಗಳಿಗೆ ಸಂಚಾರ ದಟ್ಟಣೆ ಆಗದಂತೆ ನವೆಂಬರ್‌ 14ರಿಂದ 16ರವರೆಗೆ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತವೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಂ.ರಾಚಪ್ಪ ಮಾಹಿತಿ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕೆಕೆಆರ್‌ಟಿಸಿ ನಿಗಮದ ವ್ಯಾಪ್ತಿಯಲ್ಲಿ ಬರುವ ಕಲಬುರಗಿ, ಬೀದರ್‌, ಯಾದಗಿರ, ರಾಯಚೂರು, ಬಳ್ಳಾರಿ, ಕೊಪ್ಪಳ, ಹೊಸಪೇಟೆ ಹಾಗೂ ವಿಜಯಪುರ ಜಿಲ್ಲೆಗಳಿಂದ ಬೆಂಗಳೂರು, ಹೈದರಾಬಾದ್‌, ಧಾರವಾಡ, ಹುಬ್ಬಳ್ಳಿ, ದಾವಣಗೆರೆ, ಶಿವಮೊಗ್ಗ ಹಾಗೂ ಬೆಳಗಾವಿ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸುತ್ತವೆ ಎಂದು ತಿಳಿಸಿದ್ದಾರೆ.

ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಸಹ ಕಲ್ಪಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರ ರಾಜ್ಯದಲ್ಲಿಇರುವ 16 ಗಣಕೀಕೃತ ಬುಕ್ಕಿಂಗ್‌ ಕೌಂಟರ್‌ಗಳ ಮುಖಾಂತರ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿಕೊಳ್ಳಬಹುದಾಗಿದೆ.

ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಿದ್ದ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್‌ ನಿಲ್ದಾಣ ಅಥವಾ ಪಿಕ್‌ಅಪ್‌ ಪಾಯಿಂಟ್‌ನ ಹೆಸರನ್ನು ಗಮನಿಸಬೇಕು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದರೆ ಶೇಕಡಾ 5ರಷ್ಟು ರಿಯಾಯತಿ ನೀಡಲಾಗುತ್ತದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡಾ 10ರಷ್ಟು ರಿಯಾಯತಿ ನೀಡಲಾಗುತ್ತದೆ.

ಕೆಕೆಆರ್‌ಟಿಸಿ ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲ ತಾಲ್ಲೂಕು, ಜಿಲ್ಲಾಬಸ್‌ ನಿಲ್ದಾಣಗಳಿಂದ ಸಂಚಾರ ದಟ್ಟಣೆಗನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರು ಈ ಸಾರಿಗೆ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ದೀಪಾವಳಿ ಹಬ್ಬ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಿಂದ ನವೆಂಬರ್‌ 11 ರಿಂದ 14ರ ವರೆಗೆ ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ ಮತ್ತು ಗೋಕಾಕ ಘಟಕಗಳಿಂದ ಕೊಲ್ಲಾಪುರ, ಪುಣೆ, ಮುಂಬೈ ಹಾಗೂ ಇತರ ಅಂತಾರಾಜ್ಯ ಮಾರ್ಗಗಳಿಗೆ ಹೆಚ್ಚುವರಿ ಬಸ್‌ ಸೇವೆ ಕಲ್ಪಿಸಲಾಗಿದೆ.

ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ, ಗೋಕಾಕ, ಹುಕ್ಕೇರಿ, ರಾಯಬಾಗ ಮತ್ತು ಅಥಣಿ ಘಟಕಗಳಿಗೆ ನವೆಂಬರ್‌ 10 ರಿಂದ 11ರ ವರೆಗೆ ಬೆಂಗಳೂರಿನಿಂದ ವಿಶೇಷ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ಮಾಡುತ್ತಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದೀಪಾವಳಿ ಹಬ್ಬ ಮುಗಿಸಿ ವಾಪಾಸ್‌ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ನವೆಂಬರ್‌ 14 ಮತ್ತು 15ರಂದು ಬೆಂಗಳೂರಿಗೆ ಹೆಚ್ಚುವರಿ ಬಸ್‌ ವ್ಯವಸ್ಥೆ ಮಾಡಲಾಗಿದೆ ಎಂದು ಸಾರಿಗೆ ಇಲಾಖೆಯ ಚಿಕ್ಕೋಡಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್‌. ಮುಂಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+