Deepavali Special Trains: ದೀಪಾವಳಿಗಾಗಿ ಬೆಂಗಳೂರಿನಿಂದ ಈ ಮಾರ್ಗಗಳಿಗೆ ವಿಶೇಷ ರೈಲು-ಸಮಯ ದಿನಾಂಕಗಳ ವಿವರ ಇಲ್ಲಿದೆ

Deepavali 2024 Special Train: ದೀಪಾವಳಿ ಬಂತೆಂದರೆ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸುವವರ ಸಂಖ್ಯೆ ಹೆಚ್ಚಾಗಿರುತ್ತಾರೆ. ಹಬ್ಬಕ್ಕೆ ಇನ್ನೂ ಕೆಲವೇ ದಿನಗಳು ಬಾಕಿಯಿದ್ದು, ಈ ವೇಳೆ ದಟ್ಟಣೆ ತಡೆಯಲು ಹಾಗೂ ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಬೆಂಗಳೂರಿನಿಂದ ಈ ಮಾರ್ಗಗಳಿಗೆ ಹೆಚ್ಚುವರಿ ವಿಶೇಷ ರೈಲು ಸೇವೆ ಒದಗಿಸಲು ನಿರ್ಧರಿಸಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.

ಹೆಚ್ಚಿನ ಜನರು ರೈಲುಗಳಲ್ಲೇ ಪ್ರಯಾಣ ಮಾಡಲು ಇಷ್ಟಪಡುತ್ತಾರೆ. ಅದರಲ್ಲೂ ಹಬ್ಬಗಳು ಸಂದರ್ಭಗಳಲ್ಲಿ ರೈಲುಗಳು ತುಂಬಿ ತುಳುಕುತ್ತವೆ. ಇದರಿಂದ ಪ್ರಯಾಣಿಕರಿಗೆ ತುಂಬಾ ಕಿರಿಕಿರು ಆದಂತಾಗುತ್ತದೆ. ಇದನ್ನೆಲ್ಲ ಗಮನಲ್ಲಿಟ್ಟುಕೊಂಡು ಈ ವೇಳೆ ಭಾರತೀಯ ರೈಲ್ವೆಯು ಪ್ರಯಾಣಿಕೆ ದಟ್ಟಣೆ ನಿಯಂತ್ರಿಸಲು ಹೆಚ್ಚುವರಿಯಾಗಿ ವಿಶೇಷ ರೈಲುಗಳನ್ನು ಒದಗಿಸುತ್ತಾ ಬಂದಿದೆ. ಹಾಗೆಯೇ ಇದೀಗ ದೀಪಾವಳಿ ಹಿನ್ನೆಲೆ ಬೆಂಗಳೂರಿನಿಂದ ಈ ಮಾರ್ಗಗಳಿಗೆ ನೈಋತ್ಯ ರೈಲ್ವೆ ವಿಶೇಷ ರೈಲು ಸೇವೆ ನೀಡಲು ಮುಂದಾಗಿದೆ.

Deepavali 2024 Special Trains Service from Bengaluru to these routes Know details

ಅಕ್ಟೋಬರ್ 17ರಿಂದ ನವೆಂಬರ್ 7ರ ವರೆಗೆ ಈ ವಿಶೇಷ ರೈಲುಗಳು ಸೇವೆ ಒದಗಿಸಲಿದ್ದು, ಪ್ರಮುಖವಾಗಿ ಬೆಂಗಳೂರು ಹಾಗೂ ಹುಬ್ಬಳ್ಳಿ ರೈಲು ನಿಲ್ದಾಣದಿಂದ ಹೊರಡುವ ವಿಶೇಷ ರೈಲು ಸೇವೆ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಬೆಂಗಳೂರಿನಿಂದ ಜೋಧಪುರದ ಭಗತ್ ರೈಲ್ವೇ ನಿಲ್ದಾಣಕ್ಕೆ, ಹುಬ್ಬಳ್ಳಿಯಿಂದ ಉತ್ತರಖಂಡದ ರಿಷಿಕೇಷ್‌ಗೂ ವಿಶೇಷ ರೈಲು ಸೇವೆ ಒದಗಿಸಲಿದೆ. ಅಲ್ಲದೆ, ಶೀಘ್ರದಲ್ಲೇ ಬೆಂಗಳೂರಿನಿಂದ ಕರ್ನಾಟಕದ ವಿವಿಧ ರೈಲು ನಿಲ್ದಾಣಗಳನ್ನು ಸಂಪರ್ಕಿಸುವ ವಿಶೇಷ ರೈಲು ವೇಳಾಪಟ್ಟಿ ಬಿಡುಗಡೆ ಆಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

* ರೈಲು ಸಂಖ್ಯೆ 07363/07364 ಎಸ್‌ಎಸ್‌ಎಸ್ ಹುಬ್ಬಳ್ಳಿ-ಯೋಗ ನಗರಾರಿ ರಿಷಿಕೇಷ್ ಮಾರ್ಗದಲ್ಲಿ ವಾರದಲ್ಲಿ ವಿಶೇಷ ನಾಲ್ಕು ಟ್ರಿಪ್ ಒಡಲಿದೆ. 07363 ರೈಲು ಹುಬ್ಬಳ್ಳಿ ರೈಲು ನಿಲ್ದಾಣದಿಂದ ರಾತ್ರಿ 8:30ಕ್ಕೆ ಹೊರಡಲಿದೆ. ಅಕ್ಟೋಬರ್ 14ರಿಂದ ನವೆಂಬರ್ 4ರ ವರೆಗೆ ಈ ವಿಶೇಷ ರೈಲು ಸೇವೆ ಒದಗಿಸಲಿದೆ. ಇನ್ನು ಇದೇ ರಿಷಿಕೇಶ್‌ದಿಂದ ಮರಳಿ ಹುಬ್ಬಳ್ಳಿಗೆ ಬರುವ ರೈಲು ಸಂಖ್ಯೆ 07364, ರಿಷಿಕೇಶ್‌ದಿಂದ ಬೆಳಗ್ಗೆ 6:15ಕ್ಕೆ ಹೊರಡಲಿದ್ದು, ಇದು ಅಕ್ಟೋಬರ್ 17ರಿಂದ ನವೆಂಬರ್ 7ರ ವರೆಗೆ ಸೇವೆ ಒದಗಿಸಲಿದೆ.

ಹುಬ್ಬಳ್ಳಿಯಿಂದ ಹೊರಡುವ ಈ ರೈಲು ಧಾರವಾಡ-ಲೊಂಡಾ-ಬೆಳಗಾವಿ-ಪುಣೆ-ಗ್ವಾಲಿಯರ್-ಮಥುರಾ-ಹಜ್ರತ್, ನಿಜಾಮುದ್ದೀನ್-ಹರಿದ್ವಾರ ನಿಲ್ದಾಣಗಲ್ಲಿ ನಿಲುಗಡೆ ಆಗಲಿದೆ. ಬಳಿಕ ರಿಷಿಕೇಶ್ ತಲುಪಲಿದ್ದು, ರಿಷಿಕೇಶ್‌ದಿಂದ ವಾಪಾಸ್‌ ಬರುವ ರೈಲು ಕೂಡ ಇದೇ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿದೆ ಎಂದು ತಿಳಿಸಿದೆ.

ರೈಲು ಸಂಖ್ಯೆ 06587/06588 ಬೆಂಗಳೂರಿನ ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಜೋಧಪುರದ ಭಗತ್ ಕೊಥಿ ರೈಲು ನಿಲ್ದಾಣಕ್ಕೆ ಪ್ರಯಾಣ ಬೆಳೆಸುವ ಈ ರೈಲು ಬೆಂಗಳೂರಿನಿಂದ ಸಂಜೆ 5:45ಕ್ಕೆ ಹೊರಡಲಿದೆ. ಇನ್ನು ಭಗತ್ ಕೊಥಿ ರೈಲು ನಿಲ್ದಾಣದಿಂದ ಬೆಳಗ್ಗೆ 5 ಗಂಟೆಗ ಈ ರೈಲು ಬೆಂಗಳೂರಿನತ್ತ ವಾಪಾಸ್‌ ಆಗಲಿದೆ. ಈ ರೈಲು ಬೆಂಗಳೂರಿನ ವಿಶ್ವೇಶ್ವರಯ್ಯ ನಿಲ್ದಾಣದಿಂದ ಹೊರಟು ಬಾಣಸವಾಡಿ-ತುಮಕೂರು-ದಾವಣಗೆರೆ-ಪುಣೆ-ಸೂರತ್-ವಡೋದರ ಹಾಗೂ ಅಬು ರೋಡ್ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+