Deepavali Special Train: ಬೆಂಗಳೂರು-ಕಾರವಾರ ದೀಪಾವಳಿ ವಿಶೇಷ ರೈಲು, ವೇಳಾಪಟ್ಟಿ
ಬೆಂಗಳೂರು, ಅಕ್ಟೋಬರ್ 19: ಅಕ್ಟೋಬರ್ ತಿಂಗಳ ಅಂತ್ಯ ಮತ್ತು ನವೆಂಬರ್ ಮೊದಲ ವಾರದ ದೀಪಾವಳಿ ಮತ್ತು ವಾರಾಂತ್ಯದ ರಜೆಗಳ ಪ್ರಯುಕ್ತ ನೂರಾರು ಜನರು ಪ್ರಯಾಣಿಸುತ್ತಾರೆ. ಆದ್ದರಿಂದ ಈಗಾಗಲೇ ಬಸ್, ರೈಲುಗಳಲ್ಲಿ ಸೀಟುಗಳು ಭರ್ತಿಯಾಗಿವೆ. ರಾಜಧಾನಿ ಬೆಂಗಳೂರು ಮತ್ತು ಕರಾವಳಿ ಭಾಗಕ್ಕೆ ಸಂಚಾರ ನಡೆಸುವ ಜನರ ಅನುಕೂಲಕ್ಕಾಗಿ ಕೊಂಕಣ ರೈಲ್ವೆ ಬೆಂಗಳೂರು-ಕಾರವಾರ ನಡುವೆ ವಿಶೇಷ ರೈಲುಗಳನ್ನು ಓಡಿಸಲಿದೆ. ಪ್ರಯಾಣಿಕರು ರೈಲು ಸೇವೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಬೆಂಗಳೂರಿನ ಸರ್ ಎಂ. ವೀಶ್ವಶ್ವರಯ್ಯ ಟರ್ಮಿನಲ್, ಬೈಯಪ್ಪನಹಳ್ಳಿ ಮತ್ತು ಕಾರವಾರ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ. ರೈಲಿನ ವೇಳಾಪಟ್ಟಿ, ನಿಲ್ದಾಣಗಳ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಈ ರೈಲಿನಲ್ಲಿ ಸಂಚಾರ ನಡೆಸುವವರು ಈ ಮಾಹಿತಿ ಆಧರಿಸಿ ಮುಂಗಡ ಟಿಕೆಟ್ ಕಾಯ್ದಿರಿಸಬಹುದು.

ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಾರವಾರ-ಸರ್ ಎಂ. ವೀಶ್ವೇಶ್ವರಯ್ಯ ಟರ್ಮಿನಲ್ ನಡುವೆ ರೈಲು ಸಂಖ್ಯೆ 06597/ 06598 ಸಂಚಾರ ನಡೆಸಲಿದೆ ಎಂದು ಕೊಂಕಣ ರೈಲ್ವೆ ಹೇಳಿದೆ. ಈ ರೈಲು 18 ಕೋಚ್‌ಗಳನ್ನು ಹೊಂದಿರಲಿದೆ. 3ಟೈರ್ ಎಸಿ 2, 10 ಸ್ಲೀಪರ್, 4 ಜನರಲ್, ಎಸ್‌ಎಲ್‌ಆರ್ 2 ಕೋಚ್‌ಗಳನ್ನು ರೈಲು ಹೊಂದಿದೆ.
ವೇಳಾಪಟ್ಟಿ, ನಿಲ್ದಾಣ: ರೈಲು ನಂಬರ್ 06597 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು-ಕಾರವಾರ ಎಕ್ಸ್‌ಪ್ರೆಸ್ ರೈಲು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ 13:00 ಗಂಟೆಗೆ 30/10/2024ರ ಬುಧವಾರ ಹೊರಡಲಿದೆ. ಕಾರವಾರಕ್ಕೆ ಮರುದಿನ 4 ಗಂಟೆಗೆ ತಲುಪಲಿದೆ.
ರೈಲು ನಂಬರ್ 06598 ಕಾರವಾರ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಕಾರವಾರದಿಂದ 31/10/2024ರ ಗುರುವಾರ 12:00 ಗಂಟೆಗೆ ಹೊರಡಲಿದೆ. ಮರುದಿನ 4 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ತಲುಪಲಿದೆ.
ಈ ರೈಲು ಹೋಗುವಾಗ ಮತ್ತು ಬರುವಾಗ ಚಿಕ್ಕಬಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕ ರೋಡ್ ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲ ನಿಲ್ದಾಣದಲ್ಲಿ ನಿಲುಗಡೆ ಹೊಂದಿದೆ.
ಬೆಂಗಳೂರು-ಮಂಗಳೂರು ವಿಶೇಷ ರೈಲು: ನೈಋತ್ಯ ರೈಲ್ವೆ ಸಹ ಹಬ್ಬದ ಸಂದರ್ಭದಲ್ಲಿ ಉಂಟಾಗುವ ದಟ್ಟಣೆ ತಪ್ಪಿಸಲು ಬೆಂಗಳೂರಿನ ಯಶವಂತಪುರ-ಮಂಗಳೂರು ಜಂಕ್ಷನ್ ನಡುವೆ ಹಬ್ಬದ ವಿಶೇಷ ರೈಲು ಓಡಿಸುವುದಾಗಿ ಘೋಷಣೆ ಮಾಡಿದೆ. ಅಕ್ಟೋಬರ್ 30, 31ರಂದು ಈ ರೈಲುಗಳು ಸಂಚಾರವನ್ನು ನಡೆಸಲಿವೆ.
ರೈಲು ನಂಬರ್ 06565 ಯಶವಂತಪುರ-ಮಂಗಳೂರು ಜಂಕ್ಷನ್ ರೈಲು ಅಕ್ಟೋಬರ್ 30ರ ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಡಲಿದೆ. ಮರುದಿನ ಮಧ್ಯಾಹ್ನ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ರೈಲು ನಂಬರ್ 06566 ಮಂಗಳೂರು ಜಂಕ್ಷನ್-ಯಶವಂತಪುರ ರೈಲು ಅಕ್ಟೋಬರ್ 31ರ ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಂಕ್ಷನ್‌ನಿಂದ ಹೊರಡಲಿದ್ದು, ರಾತ್ರಿ 9.45ಕ್ಕೆ ಬೆಂಗಳೂರು ತಲುಪಲಿದೆ.
ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ ಮೂಲಕ ಸಂಚಾರ ನಡೆಸಲಿದೆ. ರೈಲು 21 ಬೋಗಿಯನ್ನು ಒಳಗೊಂಡಿದೆ.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ












Click it and Unblock the Notifications