Deepavali Special train: ನೈಋತ್ಯ ರೈಲ್ವೆಯಿಂದ ದೀಪಾವಳಿ ಹಬ್ಬಕ್ಕೆ ವಿಶೇಷ ಎಕ್ಸ್‌ಪ್ರೆಸ್ ರೈಲು, ಸಮಯಗಳ ವಿವರ ಹೀಗಿದೆ
ಹುಬ್ಬಳ್ಳಿ, ನವೆಂಬರ್, 06: ನಾಡಿನ ದೊಡ್ಡ ಹಬ್ಬಗಳಲ್ಲಿ ಒಂದಾದ ಬೆಳಕಿನ ಹಬ್ಬ ದೀಪಾವಳಿಗೆ ನಗರ ಪ್ರದೇಶಗಳಿಂದ ತಮ್ಮ ಊರುಗಳಿಗೆ ಪ್ರಯಾಣಿಕರ ದಂಡೇ ಹರಿದುಬರುತ್ತದೆ. ಆದ್ದರಿಂದ ಪ್ರಯಾಣಿಕರ ದಟ್ಟಣೆಯನ್ನು ತಡೆಯಲು ನೈರುತ್ಯ ರೈಲ್ವೆಯು ವಿಶೇಷ ಎಕ್ಸ್‌ಪ್ರೆಸ್ ರೈಲು ಬಿಡಲು ನಿರ್ಧಾರ ಮಾಡಿದೆ.
ಹಬ್ಬದ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ವಿಜಯಪುರ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳನ್ನು ಓಡಿಸಲಿದೆ ಎಂದು ನೈರುತ್ಯ ರೈಲ್ವೆ ವಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ.

1. ರೈಲು ಸಂಖ್ಯೆ 06231: ಎಸ್‌ಎಂವಿಟಿ ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10 ರಂದು ಸಂಜೆ 7 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 10:55 ಕ್ಕೆ ವಿಜಯಪುರ ತಲುಪಲಿದೆ.
2. ರೈಲು ಸಂಖ್ಯೆ 06232: ವಿಜಯಪುರ-ಎಸ್‌ಎಂವಿಟಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 14ರಂದು ಸಂಜೆ 5 ಗಂಟೆಗೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 9:30ಕ್ಕೆ ಎಸ್‌ಎಂವಿಟಿಗೆ ಆಗಮಿಸುತ್ತದೆ.
3. ರೈಲು ಸಂಖ್ಯೆ 06585: ಎಸ್‌ಎಂವಿಟಿ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10ರಂದು ರಾತ್ರಿ 8 ಗಂಟೆಗೆ ಎಸ್ಎಂವಿಟಿಯಿಂದ ಹೊರಟು ಮರುದಿನ ಬೆಳಗ್ಗೆ 8 ಗಂಟೆಗೆ ಬೆಳಗಾವಿಗೆ ಆಗಮಿಸುತ್ತದೆ.
4. ರೈಲು ಸಂಖ್ಯೆ 06586: ಬೆಳಗಾವಿ-ಎಸ್‌ಎಂವಿಟಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 14ರಂದು ಸಂಜೆ 6:50ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 6 ಗಂಟೆಗೆ ಎಸ್‌ಎಂವಿಟಿಗೆ ಆಗಮಿಸುತ್ತದೆ.
ಈ ಮೇಲೆ ತಿಳಿಸಿದ ಪ್ರತಿಯೊಂದು ರೈಲುಗಳು 16 ಕೋಚ್‌ಗಳನ್ನು ಒಳಗೊಂಡಿರುತ್ತವೆ. ಇದರಲ್ಲಿ ಒಂದು ಎಸಿ ಟು-ಟೈರ್, ಮೂರು ಎಸಿ ತ್ರೀ-ಟೈರ್, ಎಂಟು ಸ್ಲೀಪರ್ ಕ್ಲಾಸ್, ಎರಡು ಸಾಮಾನ್ಯ ಸೆಕೆಂಡ್ ಕ್ಲಾಸ್ ಮತ್ತು ಎರಡು ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್-ವ್ಯಾನ್‌ಗಳು/ಅಂಗವಿಕಲ ಸ್ನೇಹಿ ಕಂಪಾರ್ಟ್‌ಮೆಂಟ್‌ಗಳು ವ್ಯವಸ್ಥೆ ಸಹ ಇದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications