Vande Bharat Express: ಬೆಂಗಳೂರು-ಬಳ್ಳಾರಿ ಜಂಕ್ಷನ್ ರೈಲಿಗಾಗಿ ಸಚಿವರಿಗೆ ಪತ್ರ

ಬಳ್ಳಾರಿ, ಆಗಸ್ಟ್ 26: ಭಾರತೀಯ ರೈಲ್ವೆಯ ಸೆಮಿ-ಹೈ ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಭಾರೀ ಬೇಡಿಕೆ ಇದೆ. ಕರ್ನಾಟಕದಲ್ಲಿಯೂ ವಿವಿಧ ಮಾರ್ಗದಲ್ಲಿ ಈ ಮಾದರಿಯ ಬಿಳಿ ಮತ್ತು ಕೇಸರಿ ಬಣ್ಣದ ರೈಲುಗಳು ಸಂಚಾರ ನಡೆಸುತ್ತಿವೆ. ಈಗ ಹೊಸ ಮಾರ್ಗದಲ್ಲಿ ವಂದೇ ಭಾರತ್ ರೈಲು ಬೇಕು ಎಂದು ತುಮಕೂರು ಸಂಸದ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣಗೆ ಪತ್ರವನ್ನು ಬರೆಯಲಾಗಿದೆ.

ಕರ್ನಾಟಕದಲ್ಲಿ ಹೊಸ ಮಾರ್ಗದಲ್ಲಿ ಯಾವುದೇ ವಂದೇ ಭಾರತ್ ರೈಲು ಸದ್ಯ ಘೋಷಣೆಯಾಗಿಲ್ಲ. ಕೆಎಸ್ಆರ್ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆ ಇದೆ. ಇದಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದ್ದರೂ ಸಹ ರೈಲು ಸೇವೆ ಇನ್ನೂ ಆರಂಭವಾಗಿಲ್ಲ.

Demand For Vande Bharat Train Between Ballari Junction And Bengaluru

ಕಳೆದ ವಾರ ರೈಲ್ವೆ ಇಲಾಖೆ ಕೆಎಸ್ಆರ್ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ರೈಲಿಗೆ ತುಮಕೂರು ನಗರದಲ್ಲಿ ನಿಲುಗಡೆ ನೀಡಲು ಒಪ್ಪಿಗೆ ನೀಡಿದೆ. ಈ ಸೇವೆಗೆ ಚಾಲನೆಯೂ ಸಿಕ್ಕಿದೆ. ಈಗ ಬೆಂಗಳೂರು-ಬಳ್ಳಾರಿ ಜಂಕ್ಷನ್ ನಡುವೆ ಹೊಸ ವಂದೇ ಭಾರತ್ ರೈಲು ಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವರಿಗೆ ಪತ್ರವನ್ನು ಬರೆಯಲಾಗಿದೆ.

ಬಿ. ಶ್ರೀರಾಮುಲು ಪತ್ರದ ವಿವರ: ಮಾಜಿ ಸಚಿವ, ಬಿಜೆಪಿ ನಾಯಕ ಬಿ. ಶ್ರೀರಾಮುಲು ವಿ. ಸೋಮಣ್ಣ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಿಗೆ ಪತ್ರವನ್ನು ಬರೆದಿದ್ದಾರೆ. ಈ ಪತ್ರವು ವಂದೇ ಭಾರತ್ ರೈಲು ಬಳ್ಳಾರಿ ಜಂಕ್ಷನ್ ರೈಲ್ವೆ ನಿಲ್ದಾಣದ ಮಾರ್ಗವಾಗಿ ಚಲಿಸುವಂತೆ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

ಪತ್ರದಲ್ಲಿ ಮೇಲ್ಕಂಡ ವಿಷಯದನ್ವಯ ಬಳ್ಳಾರಿ ನಗರ ಮತ್ತು ಜಿಲ್ಲೆಯಲ್ಲಿ ವಿದ್ಯಾಭ್ಯಾಸ, ವ್ಯವಹಾರ, ಉದ್ಯೋಗ, ಕೈಗಾರಿಕೋದ್ಯಮ ಹಾಗೂ ಐತಿಹಾಸಿಕ ಪ್ರವಾಸದ ನಿಮಿತ್ತ ಬಳ್ಳಾರಿಯಿಂದ ಬೆಂಗಳೂರಿಗೆ, ಬೆಂಗಳೂರಿನಿಂದ ಬಳ್ಳಾರಿಗೆ ಪರಸ್ಪರ ಪ್ರಯಾಣಿಸುವವರು ಹೆಚ್ಚಿನ ಸಂಖ್ಯೆಯಲ್ಲಿರುತ್ತಾರೆ ಹಾಗೂ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲಿನಲ್ಲಿ ಪ್ರಯಾಣಿಸಲು ಆಪೇಕ್ಷಿಸುತ್ತಿದ್ದಾರೆ.

ಕಾರಣ ತಾವು 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲನ್ನು ಬಳ್ಳಾರಿ ಜಂಕ್ಷನ್ ರೈಲ್ವೆ ನಿಲ್ದಾಣ ಮಾರ್ಗದ ಮೂಲಕ ಚಲಿಸುವಂತೆ ಆದೇಶಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಈ ಮೂಲಕ ತಮ್ಮಲ್ಲಿ ಕೋರಲಾಗಿದೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ ವಿವಿಧ ಮಾರ್ಗದಲ್ಲಿ ವಂದೇ ಭಾರತ್ ರೈಲು ಬೇಕು ಎನ್ನುವುದು ಬೇಡಿಕೆಯಾಗಿದೆ. ಇವುಗಳಲ್ಲಿ ಶಿವಮೊಗ್ಗ-ಬೆಂಗಳೂರು, ಬೆಂಗಳೂರು-ಬಳ್ಳಾರಿ ಸೇರಿದೆ. ಆದರೆ ಈ ಮಾರ್ಗದಲ್ಲಿ ವಂದೇ ಭಾರತ್ ರೈಲು ಓಡಿಸಲು ಇನ್ನೂ ರೈಲ್ವೆ ಇಲಾಖೆಯ ಒಪ್ಪಿಗೆ ಸಿಕ್ಕಿಲ್ಲ.

ನೈಋತ್ಯ ರೈಲ್ವೆ 2023ರಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿ 10 ಹೊಸ ಮಾರ್ಗದಲ್ಲಿ ವಂದೇ ಭಾರತ್ ರೈಲು ಓಡಿಸಲು ಮೂಲ ಸೌಲಭ್ಯ ಕಲ್ಪಿಸಲು ಸೂಚಿಸಿತ್ತು. ಈ ಮಾರ್ಗಗಳಲ್ಲಿ ಬೆಂಗಳೂರು-ಬಳ್ಳಾರಿ ರೈಲು ಮಾರ್ಗವೂ ಸೇರಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+