ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ನಡೆಯುವ ಈ ವಿಶೇಷ ಜಾತ್ರೆಯ ಮಹತ್ವವೇನು?
ಚಾಮರಾಜನಗರ, ಮಾರ್ಚ್ 19: ಪವಿತ್ರ ಕ್ಷೇತ್ರ ಮತ್ತು ಪ್ರವಾಸಿ ತಾಣವೂ ಆಗಿರುವ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಾರ್ಚ್ 22ರಿಂದ 28ರವರೆಗೆ ಏಳು ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದ್ದು, ಈ ಕ್ಷಣಗಳಿಗಾಗಿ ಕಾಯುತ್ತಿದ್ದ ಸಹಸ್ರಾರು ಭಕ್ತರು ಪುಳಕಗೊಂಡಿದ್ದು ಜಾತ್ರೆಯಲ್ಲಿ ಭಾಗವಹಿಸಿ ಗೋಪಾಲನ ದರ್ಶನ ಮಾಡಿಕೊಂಡು ನಿಸರ್ಗದ ಸೌಂದರ್ಯವನ್ನು ಸವಿದು ಬರಲು ಹಾತೊರೆಯುತ್ತಿದ್ದಾರೆ. ಇದೀಗ ಜಿಲ್ಲಾಡಳಿತವು ಜಾತ್ರಾ ಸಂಬಂಧ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸರ್ವ ರೀತಿಯ ಕ್ರಮಗಳನ್ನು ಕೈಗೊಂಡಿದೆ.
ಈ ಬಾರಿಯ ಜಾತ್ರೆಯಲ್ಲಿ ಏನೇನು ಕಾರ್ಯಕ್ರಮಗಳಿವೆ ಮತ್ತು ಜಾತ್ರೆಯ ಪ್ರಮುಖ ಭಾಗವಾಗಿರುವ ಬ್ರಹ್ಮರಥೋತ್ಸವ ಯಾವಾಗ ನಡೆಯುತ್ತದೆ ಎಂಬುದನ್ನು ನೋಡಿದ್ದೇ ಆದರೆ ಈ ಬಾರಿ ಮಾರ್ಚ್ 25ರಂದು ಬ್ರಹ್ಮ ರಥೋತ್ಸವ ನಡೆಯಲಿದ್ದು, ಈ ಸಂಬಂಧ ಮಾರ್ಚ್ 22ರಿಂದಲೇ ವಿವಿಧ ದೈವಿಕ ಕಾರ್ಯಕ್ರಮಗಳು ಆರಂಭವಾಗಿ ಮಾ.28ರಂದು ಮುಕ್ತಾಯಗೊಳ್ಳಲಿದೆ. ಕಾರ್ಯಕ್ರಮಗಳ ಬಗ್ಗೆ ನೋಡುವುದಾದರೆ ಮಾರ್ಚ್ 22ರಂದು ಜಾತ್ರೆ ಸಂಬಂಧ ಕಾರ್ಯಕ್ರಮಗಳು ಆರಂಭವಾಗಲಿದ್ದು ಬೆಳಗ್ಗೆ ಶ್ರೀಯವರಿಗೆ ಫಲ ಪಂಚಾಮೃತಾಭಿಷೇಕ, ಸಂಜೆ ಆದಿವಾಸರ, ಅಂಕುರಾರ್ಪಣ ಗರುಡ ಪ್ರತಿಷ್ಠ ರಕ್ಷಾಬಂಧನ ನಡೆಯಲಿದೆ.

ಜಾತ್ರೆಯ ಎರಡನೇ ದಿನವಾದ ಮಾರ್ಚ್ 23ರಂದು ಬೆಳಿಗ್ಗೆ ಉತ್ಸವ, ಧ್ವಜಾರೋಹಣ, ಸಂಜೆ ಭೇರಿತಾಡನ ಯಾಗಶಾಲಾ ಪ್ರವೇಶ. ಮೂರನೇ ದಿನವಾದ ಮಾರ್ಚ್ 24 ರಂದು ಬೆಳಿಗ್ಗೆ ಶ್ರೀಯವರ ಉತ್ಸವ, ಸಂಜೆ 4 ಗಂಟೆಗೆ ಕಾಶಿಯಾತ್ರಾ ಉತ್ಸವ ಸಂಬಂಧ ಮಾಲಾಪೂರ್ವಕ ಶ್ರೀ ರುಕ್ಮಿಣಿ ಸತ್ಯಭಾಮ ಸಹಿತ ಶ್ರೀ ಹಿಮವದ್ ಗೋಪಾಲಸ್ವಾಮಿಯವರ ದಿವ್ಯಕಲ್ಯಾಣೋತ್ಸವ. ನಾಲ್ಕನೇ ದಿನ ಮಾರ್ಚ್ 25 ರಂದು ಬೆಳಿಗ್ಗೆ ಶ್ರೀಯವರ ದಿವ್ಯ ಬ್ರಹ್ಮ ರಥೋತ್ಸವ, ಸಂಜೆ ಶಾಂತ್ಯುತ್ಸವ ನಡೆಯಲಿದೆ. ಈ ದಿನದಂದು ಸಹಸ್ರಾರು ಭಕ್ತರು ಭಾಗವಹಿಸಲಿದ್ದು, ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ ಸರ್ವ ಸಿದ್ಧತೆ ಕೈಗೊಂಡಿದೆ.
ಮಾರ್ಚ್ 28ರಂದು ಏಳು ದಿನಗಳ ಜಾತ್ರೆಗೆ ತೆರೆ
ಐದನೇ ದಿನವಾದ ಮಾರ್ಚ್ 26 ರಂದು ಬೆಳಿಗ್ಗೆ ಉತ್ಸವ ಕೈಂಕರ್ಯ ಮತ್ತು ಬೆಳ್ಳಿ ಗರುಡೋತ್ಸವ ಸಂಜೆ ಡೋಲೋತ್ಸವ ಶಯನೋತ್ಸವ. ಆರನೇ ದಿನ ಮಾರ್ಚ್ 27ರಂದು ಸಂಧಾನ ಲೀಲೋತ್ಸವ, ಅವಭೃತ ಸ್ನಾನ, ಸಂಜೆ ಉತ್ಸವ, ಫಣಿಮಾಲಾ ಪ್ರಬಂಧಸೇವೆ. ಪೂರ್ಣಾಹುತಿ. ಏಳನೇ ದಿನವಾದ ಮಾರ್ಚ್ 28ರಂದು ಬೆಳಿಗ್ಗೆ ಮಹಾಭಿಷೇಕ, ಮಹಾಮಂಗಳಾರತಿ, ದ್ವಾದಶಾರಾಧನಾ, ಪುಷ್ಪಯಾಗ ಧ್ವಜಾವರೋಹಣ, ಉಧ್ವಾಸನ ಪ್ರಬಂಧ ಸೇವೆ ಸೇತೂ ಸೇವೆ ಮೂಕಬಲಿ ವಿಶೇಷ ಉತ್ಸವ ಕಾರ್ಯಕ್ರಮಗಳು ನಡೆಯುವುದರೊಂದಿಗೆ ಏಳು ದಿನಗಳ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ

ಜಾತ್ರೆ ಸಂಬಂಧ ಭಕ್ತರು ಹೇಗೆ ನಡೆದುಕೊಳ್ಳಬೇಕು ಮತ್ತು ನಿಯಮಗಳನ್ನು ಪಾಲಿಸಬೇಕು ಎಂಬುದರ ಕುರಿತಂತೆ ಗುಂಡ್ಲುಪೇಟೆ ತಾಲೂಕು ಆಡಳಿತ ಕೆಲವೊಂದು ಸೂಚನೆಗಳನ್ನು ನೀಡಿದ್ದು ಅದನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕಾಗಿದೆ. ದೂರದಿಂದ ಬರುವ ಭಕ್ತರಿಗಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು ಅದರಂತೆ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕೆ.ಎಸ್.ಆರ್.ಟಿ.ಸಿ ಬಸ್ ಗಳನ್ನು ಹೊರತುಪಡಿಸಿ ಉಳಿದ ದ್ವಿಚಕ್ರ, 4 ಚಕ್ರ, ಮಿನಿ ವಾಹನ ಮತ್ತು ಇತರೆ ವಾಹನಗಳಲ್ಲಿ ಬರುವ ಭಕ್ತಾಧಿಗಳು, ಸಾರ್ವಜನಿಕರು ತಮ್ಮ ವಾಹನಗಳನ್ನು ಅರಣ್ಯ ಇಲಾಖೆಯ ಚೆಕ್‌ಪೋಸ್ಟ್ ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕು. ಅಲ್ಲಿಂದ ಕೆ.ಎಸ್.ಆರ್.ಟಿ.ಸಿ ಬಸ್‌ಗಳಲ್ಲಿ ನಿಗದಿತ ದರ ಪಾವತಿಸಿ ದೇವರ ದರ್ಶನಕ್ಕೆ ಹೋಗಿ ಬರಬೇಕಾಗುತ್ತದೆ.
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವುದು ಹೇಗೆ?
ಇನ್ನು ಮೊದಲ ಬಾರಿಗೆ ಹಿಮವದ್ ಗೋಪಾಲಸ್ವಾಮಿ ರಥೋತ್ಸವಕ್ಕೆ ಪಾಲ್ಗೊಳ್ಳಲು ಬಯಸುವ ಭಕ್ತರಿಗೆ ಗೋಪಾಲಸ್ವಾಮಿಬೆಟ್ಟದ ಬಗ್ಗೆ ಹೇಳುವುದಾದರೆ ಇದು 1450ಅಡಿ ಎತ್ತರ ಹೊಂದಿರುವ ರಾಜ್ಯದ ಅತ್ಯಂತ ಎತ್ತರದ ಬೆಟ್ಟಗಳಲ್ಲಿ ಮೂರನೆಯದ್ದಾಗಿದೆ. ಇಲ್ಲಿನ ವಿಶೇಷತೆ ಏನೆಂದರೆ ಬೆಟ್ಟಪ್ರದೇಶವು ಅತಿ ಎತ್ತರದ ವಿಶಾಲ ಪ್ರದೇಶವನ್ನು ಹೊಂದಿರುವ ಕಾರಣ ತಂಗಾಳಿಯೊಂದಿಗೆ ಮುಂಜಾನೆ ಹಾಗೂ ಸಂಜೆ ಸದಾ ಹಿಮದಿಂದ ಆವೃತವಾಗಿರುತ್ತದೆ. ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಬೆಂಗಳೂರಿನಿಂದ 220 ಕಿ.ಮೀ. ಮೈಸೂರಿನಿಂದ 74 ಕಿ.ಮೀ. ಹಾಗೂ ಗುಂಡ್ಲುಪೇಟೆಯಿಂದ 20ಕಿ.ಮೀ ದೂರದಲ್ಲಿದೆ. ಗುಂಡ್ಲುಪೇಟೆಯಿಂದ ಊಟಿ ರಸ್ತೆಯಲ್ಲಿ ಸಾಗಿದರೆ ಅಲ್ಲಿ ಹಂಗಳ ಎಂಬ ಗ್ರಾಮ ಸಿಗುತ್ತದೆ. ಅಲ್ಲಿಂದ ಬಲಗಡೆ ಸಾಗಿದರೆ ಹಿಮವದ್ ಗೋಪಾಲಸ್ವಾಮಿ ಬೆಟ್ಟವನ್ನು ತಲುಪಬಹುದಾಗಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications