Expressways: ಈ ವರ್ಷ ಭಾರತದಲ್ಲಿ ಉದ್ಘಾಟನೆಗೊಳ್ಳಲಿರುವ 5 ಎಕ್ಸ್‌ಪ್ರೆಸ್‌ವೇಗಳು- ಯಾವುವು ಗೊತ್ತೇ?
Expressways: ದೇಶದ ಹಲವೆಡೆ ಹೆದ್ದಾರಿಗಳ ಅಭಿವೃದ್ಧಿ ಆಗುತ್ತಲೇ ಇದೆ. ಹಾಗೆಯೇ 2024ರೊಳಗೆ ಅಂದರೆ ಈ ವರ್ಷದೊಳಗೆ ಇನ್ನು 5 ಹೊಸ ಎಕ್ಸ್‌ಪ್ರೆಸ್ ವೇಗಳು ಉದ್ಘಾಟನೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಅವು ಯಾವುವು ಹಾಗೂ ಇವುಗಳಿಂದಾಗುವ ಪ್ರಯೋಜನೆಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
* Bengaluru-Chennai Expressway: ದಕ್ಷಿಣ ಭಾರತದ ಎರಡು ಬೃಹತ್ ನಗರಗಳನ್ನು ಸಂಪರ್ಕಿಸಲು ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಸಿದ್ಧವಾಗಿದೆ. ಈ ಹೆದ್ದಾರಿಯಿಂದ ಪ್ರಯಾಣದ ಸಮಯವನ್ನು ಕಡಿಮೆ ಆಗಲಿದೆ. ಇದು ಕರ್ನಾಟಕ ಮತ್ತು ತಮಿಳುನಾಡು ನಡುವೆ ವ್ಯಾಪಾರ, ಪ್ರವಾಸೋದ್ಯಮದ ಕೇಂದ್ರಗಳ ಅಭಿವೃದ್ಧಿಗೆ ಸಹಾಯ ಆದಂತಾಗುತ್ತದೆ. ಅಲ್ಲದೆ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ.

* Mumbai-Delhi Expressway: ಮುಂಬೈ-ದೆಹಲಿ ಎಕ್ಸ್‌ಪ್ರೆಸ್‌ವೇ, ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿದ್ದು, ಇದರಿಂದ ಎರಡು ಪ್ರಮುಖ ಮಹಾನಗರಗಳ ನಡುವಿನ ಪ್ರಯಾಣವನ್ನು ಸುಗಮಗೊಳಿಸಲು ಅನುಕೂಲ ಆದಂತಾಗಲಿದೆ. 1,200 ಕಿಲೋ ಮೀಟರ್‌ಗಳಷ್ಟು ವಿಸ್ತರಿಸಿರುವ ಈ ಎಕ್ಸ್‌ಪ್ರೆಸ್‌ವೇ ಮುಂಬೈ ಮತ್ತು ದೆಹಲಿ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿದೆ.
ಈ ಹೆದ್ದಾರಿ ನಿರ್ಮಾಣದಿಂದ ಪ್ರಯಾಣಿಕರಿಗೆ ಅತ್ಯಾಧುನಿಕ ಸೌಲಭ್ಯಗಳಗಳು ಒದಗಿಸಿದಂತಾಗಿತ್ತದೆ. ಇನ್ನು ಇಲ್ಲಿ ಪ್ರಯಾಣಿಕರಿಗೆ ಉತ್ತಮ ಸೇವೆಗಳು, ವಿಶ್ರಾಂತಿ ವಲಯಗಳನ್ನು ನಿರ್ಮಾಣ ಮಾಡಲಾಗಿದೆ.
* Kolkata-Jharkhand Expressway: ಕೋಲ್ಕತ್ತಾ-ಜಾರ್ಖಂಡ್ ಎಕ್ಸ್‌ಪ್ರೆಸ್‌ವೇ ಪೂರ್ವ ಪ್ರದೇಶದಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸಲು ಸಹಕಾರಿಯಾಗಲಿದೆ. ಜಾರ್ಖಂಡ್‌ನ ಕೈಗಾರಿಕಾ ಕೇಂದ್ರದೊಂದಿಗೆ ಸಂಪರ್ಕಿಸುವ ಈ ಎಕ್ಸ್‌ಪ್ರೆಸ್‌ವೇ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸಲು, ಹೂಡಿಕೆಗಳ ಆಕರ್ಷಣೆಗೆ ಪ್ರಮುಖ ಪಾತ್ರ ವಹಿಸಲಿದೆ. ಹಾಗೆಯೇ ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಲ್ಲಿನ ಪ್ರಮುಖ ಕೇಂದ್ರಗಳನ್ನು ಸಂಪರ್ಕಿಸುವಲ್ಲಿ ಇದರ ಪಾತ್ರ ವಹಿಸಲಿದೆ.
* Delhi-Meerut Expressway Extension: ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇ ಅನ್ನು ಪ್ರಯಾಣಿಕರ ಸೇವೆಗೆ ಈಗಾಗಲೇ ಲಭ್ಯವಿದ್ದು, ಇನ್ನು ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿ ಇದನ್ನು ವಿಸ್ತರಣೆ ಮಾಡಲಾಗುತ್ತದೆ. ಈ ವಿಸ್ತರಣೆಯಿಂದ ಮತ್ತಷ್ಟು ನೆರೆಯ ಪ್ರದೇಶಗಳಿಗೆ ಸಂಪರ್ಕ ಸಾಧಿಸಲು ಸಹಾಯ ಆದಂತಾಗುತ್ತದೆ. ಅಲ್ಲದೆ ಘಾಜಿಯಾಬಾದ್ ಮತ್ತು ಮೀರತ್‌ನಂತಹ ಪ್ರದೇಶಗಳಲ್ಲಿ ಅಭಿವೃದ್ಧಿಯನ್ನು ಕಾಣಬಹುದು.
ಇನ್ನು ಈ ಯೋಜನೆಯು ನವದೆಹಲಿಯ ಸಂಚಾರ ದಟ್ಟಣೆಯನ್ನು ನಿವಾರಿಸುವ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಬೆಳವಣಿಗೆಯನ್ನು ಉತ್ತೇಜಿಸಲು ಪ್ರಮುಖ ಪಾತ್ರವಹಿಸಲಿದೆ.
* Amritsar-Jamnagar Expressway: ಅಮೃತಸರ-ಜಾಮ್‌ನಗರ ಎಕ್ಸ್‌ಪ್ರೆಸ್‌ವೇ ವಾಯುವ್ಯದಲ್ಲಿ ಸಂಪರ್ಕವನ್ನು ಹೆಚ್ಚಿಸಲು ಸಹಾಯ ಆದಂತಾಗಲಿದೆ. ಪಂಜಾಬ್‌ನ ಅತೀ ದೊಡ್ಡ ನಗರವಾದ ಅಮೃತಸರವನ್ನು ಗುಜರಾತ್‌ನ ಜಾಮ್‌ನಗರದ ಕೈಗಾರಿಕಾ ಕೇಂದ್ರದೊಂದಿಗೆ ಈ ಎಕ್ಸ್‌ಪ್ರೆಸ್‌ವೇ ಸಂಪರ್ಕಿಸಲಿದ್ದು, ವವ್ಯಾಪಾರ, ಪ್ರವಾಸೋದ್ಯಮದ ಉತ್ತೇಜನಕ್ಕೆ ಸಹಕಾರಿಯಾಗಲಿದೆ. ಅಲ್ಲದೆ ಇಲ್ಲಿ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವಲ್ಲಿ ಇದರ ಪಾತ್ರ ಪ್ರಮುಖ ಪಾತ್ರವಾಗಲಿದೆ.
ಹೊಸ ಎಕ್ಸ್‌ಪ್ರೆಸ್‌ವೇಗಳ ಮಹತ್ವ
* ಆರ್ಥಿಕ ಬೆಳವಣಿಗೆ ಮತ್ತು ವ್ಯಾಪಾರದ ಅನುಕೂಲ: ಈ ಎಕ್ಸ್‌ಪ್ರೆಸ್‌ವೇಗಳು ಕೇವಲ ಡಾಂಬರಿನ ವಿಸ್ತರಣೆಯಲ್ಲ. ಆರ್ಥಿಕ ಉತ್ತೇಜನ, ಸರಕು ಮತ್ತು ಸೇವೆಗಳ ಸುಗಮ ಚಲನೆಗೆ ಸಹಕಾರಿಯಾಗಲಿದೆ. ಇನ್ನು ಪ್ರಯಾಣ ಸಮಯವನ್ನು ಕಡಿಮೆ ಮಾಡಲಿದ್ದು, ಪ್ರಮುಖ ಆರ್ಥಿಕ ಕೇಂದ್ರಗಳ ನಡುವಿನ ಸಂಪರ್ಕವನ್ನು ಹೆಚ್ಚಿಸಲಿದೆ. ಹೀಗೆ ಆರ್ಥಿಕತೆ ಮತ್ತು ವ್ಯಾಪಾರದ ಬೆಳವಣಿಗೆಯನ್ನು ಉತ್ತೇಜಿಸಲು ಇದು ಸಿದ್ಧವಾಗಿವೆ.
* ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿ: ಪ್ರವಾಸೋದ್ಯಮ ಅಭಿವೃದ್ಧಿಯಾಗುವುದೇ ಉತ್ತಮ ರಸ್ತೆಗಳಿಂದ. ಇನ್ನು ಎಕ್ಸ್‌ಪ್ರೆಸ್‌ವೇಗಳು ನಿರ್ಮಾಣದಿಂದ ಪ್ರವಾಸಿ ತಾಣಗಳನ್ನು ಪ್ರವಾಸಿಗರು ಅತೀ ಬೇಗ ತಲುಪಲು ಸಹಕಾರಿಯಾಗಲಿವೆ. ಇದು ಈ ಕ್ಷೇತ್ರ ಆರ್ಥಿಕ ಬೆಳವಳಿಗೆಯಲ್ಲಿ ಅಭಿವೃದ್ಧಿ ಹೊಂದಲು ಸಹಾಯ ಆಗುತ್ತದೆ. ಪ್ರವಾಸಿಗರು ಈ ಎಕ್ಸ್‌ಪ್ರೆಸ್‌ವೇಗಳ ಉದ್ದಕ್ಕೂ ಹೊಸ ಸ್ಥಳಗಳನ್ನು ವೀಕ್ಷಣೆ ಮಾಡಲು ತುಂಬಾ ಅನುಕೂವಾಗುತ್ತದೆ. ಇದು ಪ್ರವಾಸೋದ್ಯಮ ಸಂಬಂಧಿತ ಮೂಲಸೌಕರ್ಯಗಳ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ, ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ











Click it and Unblock the Notifications