ಬೀದರ್‌ಗೆ ವಿಮಾನ ಸೇವೆ ಆರಂಭಿಸಿ, ಸಚಿವ ಈಶ್ವರ ಖಂಡ್ರೆ ಪತ್ರ
ಬೀದರ್, ಜೂನ್ 23: ಬೀದರ್ ನಗರಕ್ಕೆ ನಾಗರಿಕ ವಿಮಾನಯಾನ ಸೇವೆ ಪುನಃ ಆರಂಭಿಸಬೇಕು ಎಂದು ಸಚಿವ ಈಶ್ವರ ಖಂಡ್ರೆ ಪತ್ರವನ್ನು ಬರೆದಿದ್ದಾರೆ. ಬೀದರ್ ವಿಮಾನ ನಿಲ್ದಾಣದ 7ನೇ ಫೆಬ್ರವರಿ 2020ರಲ್ಲಿ ಉದ್ಘಾಟನೆಗೊಂಡಿತ್ತು. ಈಗ ಯಾವುದೇ ವಿಮಾನ ಹಾರಾಟ ನಡೆಸುತ್ತಿಲ್ಲ.
ಈ ಕುರಿತು ಕರ್ನಾಟಕ ಪರಿಸರ ಮತ್ತು ಅರಣ್ಯ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಎಂ. ಬಿ. ಪಾಟೀಲ್ ಮೂಲಸೌಕರ್ಯ ಅಭಿವೃದ್ಧಿ ಸಚಿವರು ಇವರಿಗೆ ಪತ್ರವನ್ನು ಬರೆದಿದ್ದಾರೆ. ವಿಮಾನ ಸೇವೆ ಆರಂಭಿಸುವ ಕುರಿತು ವಿಮಾನಯಾನ ಸಂಸ್ಥೆಗಳೊಂದಿಗೆ ಸಭೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಫೇಸ್‌ಬುಕ್ ಪೋಸ್ಟ್ ಹಾಕಿರುವ ಸಚಿವ ಈಶ್ವರ ಖಂಡ್ರೆ, 'ಬೀದರ್ ಜಿಲ್ಲಾ ಕೇಂದ್ರಕ್ಕೆ ಉಡಾನ್ ಯೋಜನೆಯಡಿಯಲ್ಲಿ ನಾಗರಿಕ ವಿಮಾನಯಾನ ಸೇವೆ ಆರಂಭಿಸಿದ್ದರಿಂದ ಇಲ್ಲಿನ ಉದ್ಯಮಿಗಳಿಗೆ, ವಿದ್ಯಾರ್ಥಿಗಳಿಗೆ, ಸಂದರ್ಶನಕ್ಕೆ ಹೋಗುವ ಅಭ್ಯರ್ಥಿಗಳಿಗೆ, ಪ್ರವಾಸಿಗರಿಗೆ, ನಾಗರಿಕರೆಗೆ ತುಂಬಾ ಅನುಕೂಲವಾಗಿತ್ತು. ಆದರೆ ಕಳೆದ 6 ತಿಂಗಳಿನಿಂದ ಕೇಂದ್ರ ಸರ್ಕಾರದಿಂದ ಸಬ್ಸಿಡಿ ಬಿಡುಗಡೆಯಾಗಿಲ್ಲ ಎಂಬ ಕಾರಣಕ್ಕೆ ನಾಗರಿಕ ವಿಮಾನಯಾನ ರದ್ದು ಮಾಡಲಾಗಿದ್ದು, ಈಗ ವಿಮಾನ ಯಾನ ಸೇವೆ ಸ್ಥಗಿತಗೊಂಡಿರುವುದರಿಂದ ಅನಾನುಕೂಲವಾಗಿದೆ' ಎಂದು ಹೇಳಿದ್ದಾರೆ.
'ಈ ಹಿಂದೆ ವಿಮಾನಯಾನ ಸೇವೆ ನೀಡುತ್ತಿದ್ದ ಸ್ಟಾರ್‌ಏರ್ ನೊಂದಿಗೆ ಮಾತನಾಡಿದ್ದು, ಸಬ್ಸಿಡಿ ಕೊಟ್ಟರೆ ನಾಗರಿಕ ವಿಮಾನಯಾನ ಸೇವೆ ಪುನಃ ಆರಂಭ ಮಾಡುತ್ತೇವೆ ಎಂದು ತಿಳಿಸಿದ್ದಾರೆ, ಈ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳೊಂದಿಗೆ ಶೀಘ್ರ ಸಭೆ ಕರೆದು ವಿಮಾನ ಯಾನ ಸೇವೆ ಪುನಾರಂಭಿಸಲು ಕ್ರಮ ವಹಿಸುವಂತೆ ಕೋರುತ್ತೇನೆ' ಎಂದು ತಿಳಿಸಿದ್ದಾರೆ.
ಸಚಿವರ ಪತ್ರದ ವಿವರ: ಸಚಿವ ಈಶ್ವರ ಖಂಡ್ರೆ ಪತ್ರದಲ್ಲಿ ಕರುನಾಡ ಕಿರೀಟ ಎಂದೇ ಖ್ಯಾತವಾಗಿರುವ ಬೀದರ್ ಜಿಲ್ಲೆ ಬಸವಾದಿ ಪ್ರಮಥರ ಪುಣ್ಯಭೂಮಿಯಾಗಿದ್ದು, ಬಸವಕಲ್ಯಾಣದ ಅನುಭವ ಮಂಟಪ, ಬೀದರ್ ನಗರದಲ್ಲಿಯೇ ಇರುವ ನಾನಕ್ ಝೀರಾ ಗುರುದ್ವಾರ, ಮೊಹಮದ್ ಗವಾನರ ಮದರಸಾ, ನರಸಿಂಹ ಝರ್ನಾ ಬೀದರ್ ಕೋಟೆ-ಕರೇಜ್, ಪಾಪನಾಶ ಮೊದಲಾದ ಹಲವು ಪ್ರಮುಖ ಪ್ರವಾಸಿ ತಾಣಗಳಿಂದ ಕೂಡಿದೆ.
ರಾಜ್ಯದ ರಾಜಧಾನಿ ಬೆಂಗಳೂರಿನಿಂದ ಸುಮಾರು 700 ಕಿ. ಮೀ. ದೂರದಲ್ಲಿರುವ ಬೀದರ್‌ಗೆ ರಸ್ತೆ ಮತ್ತು ರೈಲು ಮಾರ್ಗವಾಗಿ ತಲುಪಲು 15-16 ಗಂಟೆಗಳಾಗುತ್ತದೆ. ಬೀದರ್ ಜಿಲ್ಲಾ ಕೇಂದ್ರಕ್ಕೆ ಉಡಾನ್ ಯೋಜನೆಯಡಿಯಲ್ಲಿ ನಾಗರಿಕ ವಿಮಾನಯಾನ ಸೇವೆ ಆರಂಭಿಸಿದ್ದರಿಂದ ಇಲ್ಲಿನ ಉದ್ಯಮಿಗಳಿಗೆ, ವಿದ್ಯಾರ್ಥಿಗಳಿಗೆ, ಪ್ರವಾಸಿಗರಿಗೆ, ನಾಗರಿಕರೆಗೆ ತುಂಬಾ ಅನುಕೂಲವಾಗಿತ್ತು.
ಆದರೆ ಕಳೆದ 6 ತಿಂಗಳಿನಿಂದ ಕೇಂದ್ರ ಸರ್ಕಾರದಿಂದ ಸಬ್ಸಿಡಿ ಬಿಡುಗಡೆಯಾಗಿಲ್ಲ ಎಂಬ ಕಾರಣಕ್ಕೆ ನಾಗರಿಕ ವಿಮಾನಯಾನ ರದ್ದು ಮಾಡಲಾಗಿದ್ದು, ಈಗ ಬೀದರ್ ಜಿಲ್ಲೆಯ ಜನರು 4 ಗಂಟೆ ಪ್ರಯಾಣ ಮಾಡಿ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಹೋಗಬೇಕಾದ ಅನಿವಾರ್ಯತೆ ಬಂದಿದೆ.
ಈ ನಿಟ್ಟಿನಲ್ಲಿ ನಾನು ಈ ಹಿಂದೆ ವಿಮಾನಯಾನ ಸೇವೆ ಪೂರೈಸಿದ್ದ ಸ್ಟಾರ್‌ಏರ್‌ನೊಂದಿಗೆ ಮಾತನಾಡಿದ್ದು, ಸಬ್ಸಿಡಿ ಕೊಟ್ಟರೆ ನಾಗರಿಕ ವಿಮಾನಯಾನ ಸೇವೆ ಪುನಾರಂಭ ಮಾಡುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳೊಂದಿಗೆ ಶೀಘ್ರ ಸಭೆ ಕರೆದು ವಿಮಾನ ಯಾನ ಸೇವೆ ಪುನಾರಂಭಿಸಲು ಕ್ರಮ ವಹಿಸುವಂತೆ ತಮ್ಮನ್ನು ಕೋರುತ್ತೇನೆ ಎಂದು ಸಚಿವ ಎಂ. ಬಿ. ಪಾಟೀಲ್‌ಗೆ ಪತ್ರದಲ್ಲಿ ಸಚಿವರು ಮನವಿ ಮಾಡಿದ್ದಾರೆ.
ಕಲ್ಯಾಣ ಕರ್ನಾಟಕದ 2ನೇ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ ಬೀದರ್ ವಿಮಾನ ನಿಲ್ದಾಣದ್ದು. ಮೊದಲು ಬೀದರ್‌ನಿಂದ ಟ್ರೂ ಜೆಟ್ ಮತ್ತು ಸ್ಟಾರ್ ಏರ್ ವಿಮಾನ ಹಾರಾಟ ಆರಂಭಿಸಿದ್ದವು. ಬಳಿಕ ಟ್ರೂ ಜೆಟ್ ವಿಮಾನ ಸೇವೆ ರದ್ದುಗೊಂಡಿತು. ಸ್ಟಾರ್ ಏರ್ ಸಹ ಈಗ ಹಾರಾಟ ನಿಲ್ಲಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications