ಕೊಡಗು; ರಾಜಸೀಟು ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನದ ದಿನಾಂಕ ನಿಗದಿ

ಮಡಿಕೇರಿ, ಡಿಸೆಂಬರ್ 26; ಮಡಿಕೇರಿ ನಗರದ ರಾಜಸೀಟು ಉದ್ಯಾನವನದಲ್ಲಿ 'ಫಲಪುಷ್ಪ ಪ್ರದರ್ಶನದ ದಿನಾಂಕವನ್ನು ನಿಗದಿ ಮಾಡಲಾಗಿದೆ. 2024ರ ಜನವರಿ, 26 ರಿಂದ ಮೂರು ದಿನಗಳ ಕಾಲ ಪ್ರದರ್ಶನ ನಡೆಯಲಿದ್ದು, ಸಾವಿರಾರು ಜನರು ಆಗಮಿಸುವ ನಿರೀಕ್ಷೆ ಇದೆ.

ರಾಜಸೀಟು ಅಭಿವೃದ್ಧಿ ಸಮಿತಿ ಸಭೆಯು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಸಿದ್ದೇಗೌಡ, ಕೆಆರ್‌ಐಡಿಎಲ್ ಕಾರ್ಯಪಾಲಕ ಇಂಜಿನಿಯರ್ ಸುರೇಶ್ ಮುಂತಾವರು ಸಭೆಯಲ್ಲಿ ಪಾಲ್ಗೊಂಡಿದ್ದರು.

Horticulture Dept Flower Show At Raja Seat Madikeri From January 26

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, "ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಭೇಟಿ ನೀಡುವ ಪ್ರತಿ ಪ್ರವಾಸಿಗರು ರಾಜಾಸೀಟಿಗೆ ಭೇಟಿ ನೀಡಲಿದ್ದಾರೆ. ಆದ್ದರಿಂದ ರಾಜಾಸೀಟು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿದೆ" ಎಂದರು.

ಮೂಲ ಸೌಕರ್ಯ ಒದಗಿಸಲು ಸೂಚನೆ; ಜನವರಿ 26 ರಿಂದ ಮೂರು ದಿನಗಳ ಕಾಲ ರಾಜಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ನಿಟ್ಟಿನಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದು ಮತ್ತಿತರ ಸಂಬಂಧ ವಿಶೇಷ ಗಮನಹರಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ರಾಜಾಸೀಟು ಮಾರ್ಗದ ರಸ್ತೆಯನ್ನು ಸರಿಪಡಿಸಬೇಕು. ರಾಜಾಸೀಟು ಉದ್ಯಾನವನದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗಿರುವ ನೀರು ಪೂರೈಕೆ ಮತ್ತು ಲೈಟಿಂಗ್ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟರು.

ರಾಜಾಸೀಟು ಉದ್ಯಾನವನದ ಕಾರಂಜಿಯನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಯಿತು. ಫಲಪುಷ್ಪ ಪ್ರದರ್ಶನದಲ್ಲಿ ಕೊಡಗು ಜಿಲ್ಲೆಯ ಕಲೆ, ಸಂಸ್ಕೃತಿ, ಪರಿಸರ ಮತ್ತಿತರ ವಿಷಯಗಳ ಕುರಿತು ಹಲವು ಮಾಹಿತಿ ನೀಡಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್. ಆರ್. ಯೋಗೇಶ್ ಸಲಹೆ ನೀಡಿದರು.

ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಮಾತನಾಡಿ, "ರಾಜಾಸೀಟು ಮುಂಭಾಗದಲ್ಲಿ ರಸ್ತೆ ಬದಿ ರೈಲಿಂಗ್ಸ್ ನಿರ್ಮಾಣ ಮಾಡುವುದು ಅತ್ಯಗತ್ಯ. ರಾಜಾಸೀಟು ಬಳಿ ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳ ಸಂಬಂಧ ಮಾಹಿತಿ ಫಲಕ ಅಳವಡಿಸುವುದು ಅಗತ್ಯ" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+