Special Train: ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ರೈಲು ಸೇವೆ ವಿಸ್ತರಣೆ: ಹೆಚ್ಚಿನ ವಿವರ ಇಲ್ಲಿದೆ

ಹುಬ್ಬಳ್ಳಿ, ಡಿಸೆಂಬರ್‌ 26: ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ರಾಮೇಶ್ವರಂ ರೈಲು ನಿಲ್ದಾಣಗಳ ಮಧ್ಯೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಅವಧಿ ವಿಸ್ತರಿಸಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ. ಪ್ರಯಾಣಿಕರು ಗಮನಿಸಬೇಕಾದ ಅವಧಿ ವಿಸ್ತರಿಸಿದ ರೈಲುಗಳ ವಿವರಗಳು ಈ ಕೆಳಗಿನಂತಿವೆ.

ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 4 ರಿಂದ ಜೂನ್ 28, 2025 ರವರೆಗೆ ತನ್ನ ಸೇವೆ ಮುಂದುವರಿಸಲಿದೆ. ಈ ಮೊದಲು ಡಿಸೆಂಬರ್ 28, 2024 ರವರೆಗೆ ಓಡಿಸಲು ಸೂಚಿಸಲಾಗಿತ್ತು.

Hubballi-Rameswaram Weekly Express Train Service Extended Until June 2025

ರೈಲು ಸಂಖ್ಯೆ 07356 ರಾಮೇಶ್ವರಂ-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 5 ರಿಂದ ಜೂನ್ 29, 2025 ರವರೆಗೆ ತನ್ನ ಸೇವೆ ಮುಂದುವರಿಸಲಿದೆ. ಈ ಮೊದಲು ಡಿಸೆಂಬರ್ 29, 2024 ರವರೆಗೆ ಓಡಿಸಲು ಸೂಚಿಸಲಾಗಿತ್ತು.

ಮಧುರೈ ವಿಭಾಗದ ವ್ಯಾಪ್ತಿಯಲ್ಲಿ ಬರುವ ಶಿವಗಂಗಾ ನಿಲ್ದಾಣದಲ್ಲಿ ಈ ರೈಲುಗಳಿಗೆ ಹೆಚ್ಚುವರಿ ನಿಲುಗಡೆಯನ್ನು ಒದಗಿಸಲಾಗಿದೆ.

ಜನವರಿ 4, 2025 ರಿಂದ ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ ಮತ್ತು ಜನವರಿ 5, 2025 ರಿಂದ ರೈಲು ಸಂಖ್ಯೆ 07356 ರಾಮೇಶ್ವರಂ- ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಪರಿಷ್ಕೃತ ಸಮಯ ಜಾರಿಗೆ ಬರಲಿದೆ.

ರೈಲುಗಳ ಇನ್ನೂ ಹೆಚ್ಚಿನ ವಿವರಗಳಿಗಾಗಿ, ದಯವಿಟ್ಟು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ (https://swr.indianrailways.gov.in/view_detail.jsp?lang=0&dcd=8152&id=0,4,268) ಅಥವಾ ಭಾರತೀಯ ರೈಲ್ವೆ ವೆಬ್‌ ಸೈಟ್‌(www.enquiry.indianrail.gov.in) ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+