ಕರ್ನಾಟಕದ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ 9 ಅಕ್ರಮ ರೆಸಾರ್ಟ್‌ಗಳ ಪತ್ತೆ: ಎನ್‌ಟಿಸಿಎನಿಂದ ಕ್ರಮಕ್ಕೆ ಸೂಚನೆ
ಚಾಮರಾಜನಗರ, ಡಿಸೆಂಬರ್, 15: ಜಿಲ್ಲೆಯ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೆಸಾರ್ಟ್‌ಗಳು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಅಲ್ಲದೇ ಅಕ್ರಮವಾಗಿ ರೆಸಾರ್ಟ್‌ಗಳನ್ನು ನಿರ್ಮಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದೆ. ಪರಿಸರ ಸಂರಕ್ಷಣಾ ಕಾಯ್ದೆ1986 ಅನ್ನು ಉಲ್ಲಂಘಿಸಿ 9 ಹೋಂಸ್ಟೇಗಳು, ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಕಾರ್ಯನಿರ್ವಹಿಸುತ್ತಿರುವುದನ್ನು ಬಯಲಿಗೆಳೆದಿದ್ದಾರೆ. ಅಲ್ಲದೇ ಅಕ್ರಮವಾಗಿ ರೆಸಾರ್ಟ್‌ಗಳನ್ನು ನಡೆಸುವವರ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಈ ಕುರಿತು ಮೇಲ್ವಿಚಾರಣಾ ಸಮಿತಿಯ ಸಭೆಯನ್ನು ಕರೆಯಲು ಮತ್ತು ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಪರಿಶೀಲಿಸಲು ಪ್ರಾಧಿಕಾರವು ಶಿಫಾರಸು ಮಾಡಿದೆ. ಈ ಮಾಹಿತಿಯನ್ನು ಪರಿಗಣಿಸಿ ಕಂದಾಯ, ಅರಣ್ಯ, ಪರಿಸರ, ಪ್ರವಾಸೋದ್ಯಮ ಮತ್ತು ನಗರಾಭಿವೃದ್ಧಿ ಇಲಾಖೆಗಳು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಕ್ರಮ ರೆಸಾರ್ಟ್‌ಗಳನ್ನು ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ. ಒಂಬರ್ ರೆಸಾರ್ಟ್‌ಗಳ ಮಾಲೀಕರು ಪ್ರವಾಸೋದ್ಯಮ ಇಲಾಖೆಯ ಅನುಮತಿಯನ್ನು ಪಡೆದಿಲ್ಲ. ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆದಿಲ್ಲ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ ದೂರು
ಸೆಪ್ಟೆಂಬರ್‌ನಲ್ಲಿ ವನ್ಯಜೀವಿ ಸಂರಕ್ಷಣಾಧಿಕಾರಿ ಗಿರಿಧರ್ ಕುಲಕರ್ಣಿ ಅವರು ಈ ಬಗ್ಗೆ ಪ್ರಾಧಿಕಾರಕ್ಕೆ ದೂರು ನೀಡಿದ್ದರು. ನಂತರ ಈ ಬೆಳವಣಿಗೆಗಳು ನಡೆದಿವೆ ಎನ್ನಲಾಗಿದೆ. ಇನ್ನು ಅಕ್ಟೋಬರ್‌ನಲ್ಲಿ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ರಾಜೇಂದ್ರ ಜಿ.ಗರವಾಡ ಅವರು ಬೆಂಗಳೂರಿನಲ್ಲಿರುವ ಪ್ರಾಧಿಕಾರದ ಪ್ರಾದೇಶಿಕ ಕಚೇರಿಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಹಾಗೆಯೇ ನವೆಂಬರ್‌ನಲ್ಲಿ ಅರಣ್ಯ ಸಹಾಯಕ ಮಹಾನಿರೀಕ್ಷಕರಾದ ಹರಿಣಿ ವೇಣುಗೋಪಾಲ್ ಅವರು ರಾಜ್ಯ ಅರಣ್ಯಾಧಿಕಾರಿಗಳೊಂದಿಗೆ ರೆಸಾರ್ಟ್‌ಗಳು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ್ದರು.
ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
ಈ ಪ್ರದೇಶವು ಆನೆಗಳ ಪ್ರಮುಖ ವಾಸಸ್ಥಾನವಾಗಿದೆ. ಮತ್ತು ನೀಲಗಿರಿ ಅರಣ್ಯ ಮೀಸಲು ಭಾಗವಾಗಿದೆ. ಆನೆಗಳು ಮತ್ತು ಅವುಗಳ ವಾಸಸ್ಥಾನಗಳ ಸಂರಕ್ಷಣೆ ಸಂಬಂಧಿಸಿದಂತೆ ಮೇಲ್ವಿಚಾರಣಾ ಸಮಿತಿಯು ಇದನ್ನು ಕಟ್ಟುನಿಟ್ಟಾಗಿ ಪರಿಶೀಲಿಸುತ್ತದೆ ಎನ್ನುವ ಮಾಹಿತಿ ತಿಳಿದುಬಂದಿದೆ. ನಂತರ ವನ್ಯಜೀವಿ ಸಂರಕ್ಷಣಾಧಿಕಾರಿ ಗಿರಿಧರ್ ಕುಲಕರ್ಣಿ ಮಾತನಾಡಿ, ಮಾನವ ಮತ್ತು ವನ್ಯಜೀವಿ ನಡುವಿನ ಸಂಘರ್ಷವನ್ನು ತಗ್ಗಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಆದ್ದರಿಂದ ಸರ್ಕಾರವು ಶಿಫಾರಸುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಮತ್ತು ಆನೆಗಳ ವಾಸಸ್ಥಾನವಾಗಿರುವ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶವನ್ನು ರಕ್ಷಿಸಲು ಮುಂದಾಗಬೇಕು. ನಿಯಮವನ್ನು ಉಲ್ಲಂಘಿಸಿ ಅಕ್ರಮವಾಗಿ ರೆಸಾರ್ಟ್‌ಗಳನ್ನು ನಡೆಸುವವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದರು.

ವನ್ಯಜೀವಿ ಸಂರಕ್ಷಣೆ ಕಾಯ್ದೆ 1972 ಸೆಕ್ಷನ್ 33 (ಎ)ನ ಪ್ರಕಾರ ವನ್ಯಜೀವಿಗಳನ್ನು ಹೊರತುಪಡಿಸಿ ವಾಣಿಜ್ಯ ಪ್ರವಾಸಿ ವಸತಿಗೃಹಗಳು, ಹೋಟೆಲ್‌ಗಳನ್ನು ನಿರ್ಮಾಣವನ್ನು ಅಭಯಾರಣ್ಯದೊಳಗೆ ನಿರ್ಮಿಸುವಂತಿಲ್ಲ. ಸುಪ್ರೀಂ ಕೋರ್ಟ್‌ನ ಅನುಮತಿ ಇಲ್ಲದೆ ಅಭಯಾರಣ್ಯದ ಭಾಗದಲ್ಲಿ ಯಾವುದೇ ಚಟುವಟಿಕೆಗಳು ಕೈಗೊಳ್ಳುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ.












Click it and Unblock the Notifications