Vande Bharat Express: ಆಗಸ್ಟ್ 15ರ ವೇಳೆಗೆ 75 ವಂದೇ ಭಾರತ್ ರೈಲುಗಳ ಸಂಚಾರ, ಭಾರತೀಯ ರೈಲ್ವೆ ಮಾಹಿತಿ
ನವದೆಹಲಿ, ಏಪ್ರಿಲ್, 02: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 8 ರಂದು ಎಂಟು ಬೋಗಿಗಳ ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ನಿರ್ಧರಿಸಿದ್ದಾರೆ. ಚೆನ್ನೈ-ಕೊಯಮತ್ತೂರು ಮಾರ್ಗವಾಗಿ ಸಂಚಾರ ಮಾಡುವ ಈ ರೈಲು ಒಂದು ಎಕ್ಸಿಕ್ಯೂಟಿವ್ ಕೋಚ್ ಅನ್ನು ಹೊಂದಿದ್ದು, ಇದರಲ್ಲಿ 530 ಪ್ರಯಾಣಿಕರು ಪ್ರಯಾಣ ಮಾಡಬಹುದಾಗಿದೆ.
ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ (ICF) ಭಾರತೀಯ ರೈಲ್ವೇಯು ತಲಾ ಎಂಟು ಕೋಚ್‌ಗಳುಳ್ಳ 64 ವಂದೇ ಭಾರತ್ ರೈಲುಗಳನ್ನು ತಯಾರಿಸಲು ಸಿದ್ಧತೆ ನಡೆಸಿದೆ. ಈ ಮೂಲಕ ಕಡಿಮೆ ಸಮಯದಲ್ಲಿ ಗರಿಷ್ಠ ಸ್ಥಳಗಳನ್ನು ತಲುಪುವ ಕ್ರಿಯಾ ಯೋಜನೆಯನ್ನು ರೂಪಿಸಿಕೊಂಡಿದೆ.

ಅಲ್ಲದೇ ಆಗಸ್ಟ್ 15, 2023ರ ವೇಳೆಗೆ 75 ವಂದೇ ಭಾರತ್ ರೈಲು ಸೇವೆಗಳನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದೆ. ಭಾರತೀಯ ರೈಲ್ವೆಯ ಪ್ರಕಾರ, ಹೆಚ್ಚಿನ ವೆಚ್ಚದ 16-ಕೋಚ್‌ಗಳ ವಂದೇ ಭಾರತ್ ರೈಲುಗಳು ಪೂರ್ಣ ಪ್ರಮಾಣದಲ್ಲಿ ಇನ್ನು ಸಂಚಾರ ಆರಂಭಿಸಿಲ್ಲ. ಕೆಲವು ವಿಭಾಗಗಳಲ್ಲಿ ಆಕ್ಯುಪೆನ್ಸಿ ದರಗಳು ಕಡಿಮೆಯಿದ್ದು, ಇದು ರೈಲ್ವೆಗೆ ಆರ್ಥಿಕ ತೊಂದರೆ ಉಂಟುಮಾಡುತ್ತದೆ. ಆದ್ದರಿಂದ ಪೂರ್ಣ ಪ್ರಮಾಣದ ರೈಲುಗಳನ್ನು ಬಿಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ
ಇನ್ನು ಇದು ಹೈಸ್ಪೀಡ್ ರೈಲಾಗಿದ್ದು, ಭಾರಿ ಜನಮನ್ನಣೆಯನ್ನೂ ಪಡೆದಿದೆ. ವಿಶ್ವದರ್ಜೆಯ ಸೌಲಭ್ಯಗಳನ್ನು ಹೊಂದಿರುವ ಈ ರೈಲು ವೇಗವಾಗಿ ಚಲಿಸುವ ಮೂಲಕ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಇದರಿಂದ ಜನರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ವಂದೇ ಭಾರತ್ ರೈಲಿನಲ್ಲೇ ಪ್ರಯಾಣ ಮಾಡಲು ಇಷ್ಟಪಡುತ್ತಿದ್ದಾರೆ.
ಅಷ್ಟೇ ಅಲ್ಲದೆ ಇದು ಭಾರತೀಯ ರೈಲ್ವೇಯಿಂದ ಇದು ಪ್ರಾರಂಭವಾಗಿದೆ. ಆಗಿನಿಂದ ಈ ರೈಲು ಭಾರತದಲ್ಲಿ ಪ್ರಸಿದ್ಧಿ ಎನ್ನುವ ಸ್ಥಾನಮಾನವನ್ನು ಗಿಟ್ಟಿಸಿಕೊಂಡಿದೆ. ಅದೇ ರೀತಿ ಭಾರತೀಯ ಭೂದೃಶ್ಯದ ಉದ್ದ ಮತ್ತು ಅಗಲದಲ್ಲಿ ಹಾದುಹೋಗುವ ಬಿಳಿ ಬಣ್ಣದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ನೋಡಲು ಸಾಮಾನ್ಯ ಜನರು ಸಾಕಷ್ಟು ಕಾತರದಿಂದ ಕಾಯುತ್ತಿರುತ್ತಾರೆ.
ವಂದೇ ಭಾರತ್ ಎಕ್ಸ್‌ಪ್ರೆಸ್‌ನ ವಿಡಿಯೋ ವೈರಲ್ ಆದ್ದರಿಂದ ಭಾರತೀಯ ರೈಲ್ವೆಯ ವಿಭಾಗವಾದ ದಕ್ಷಿಣ ರೈಲ್ವೆಯು ಚೆನ್ನೈ-ಮೈಸೂರು ಮಾರ್ಗದ ನಡುವೆ ಚಲಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸುಂದರವಾದ ವೀಡಿಯೊವನ್ನು ಇತ್ತೀಚೆಗಷ್ಟೇ ಹಂಚಿಕೊಂಡಿತ್ತು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಜನರು ಇದಕ್ಕೆ ಭಾರಿ ಮೆಚ್ಚುಗೆಯನ್ನು ಸಹ ವ್ಯಕ್ತಪಡಿಸುತ್ತಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರದ ವಿಡಿಯೋ ವೈರಲ್
ಚೆನ್ನೈ-ಮೈಸೂರು ಮಾರ್ಗದಲ್ಲಿ ಸಂಚಾರ ಚೆನ್ನೈ-ಮೈಸೂರು ಮಾರ್ಗದ ಮಧ್ಯೆ ಚಲಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ವಿಡಿಯೋವನ್ನು ದಕ್ಷಿಣ ರೈಲ್ವೆಯು ತನ್ನ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ಇದು 130 kmph ವೇಗದಲ್ಲಿ ಕಾರ್ಯಾಚರಣೆ ಮಾಡುತ್ತದೆ. ಈ ವೇಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಸಂಚಾರ ಮಾಡುವ ದೃಶ್ಯವನ್ನು ನೋಡಲು ಹಲವಾರು ಜನರು ಕಾಯುತ್ತಿದ್ದರು.
ಇದೀಗ ರೈಲ್ವೆ ಇಲಾಖೆ ಹಂಚಿಕೊಂಡ ವಿಡಿಯೋಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಭಾರತೀಯ ರೈಲ್ವೆಯಿಂದ ಆರಂಭವಾದ ಎಲೆಕ್ಟ್ರಿಕ್ ಮಲ್ಟಿಪಲ್-ಯೂನಿಟ್, ಅರೆ-ಹೈ-ಸ್ಪೀಡ್ ಇಂಟರ್‌ಸಿಟಿ ರೈಲಾಗಿದೆ. ವಂದೇ ಭಾರತ್ ರೈಲುಗಳ ಸ್ಲೀಪರ್ ಆವೃತ್ತಿಯನ್ನು 220 kmph ವೇಗದಲ್ಲಿ ಭಾರತೀಯ ರೈಲ್ವೆ ಅಭಿವೃದ್ಧಿಪಡಿಸುತ್ತಿದೆ. ಪ್ರಯಾಣಿಕರ ಬೇಡಿಕೆಯ ಮೇರೆಗೆ Wi-Fi ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.
ಹಿಂದಿನ ಆವೃತ್ತಿಯಲ್ಲಿದ್ದ 24 ಇಂಚಿನ ಸ್ಕ್ರೀನ್‌ಗಳಿಗೆ ಹೋಲಿಸಿದರೆ, ಈಗಿನ ಪ್ರತಿ ಕೋಚ್‌ನಲ್ಲಿ 32-ಇಂಚಿನ ಸ್ಕ್ರೀನ್‌ಗಳು ಪ್ರಯಾಣಿಕರಿಗೆ ಸೂಕ್ತ ಮಾಹಿತಿಯನ್ನು ಒದಗಿಸುತ್ತದೆ. ಈ ಮೂಲಕ ವಂದೇ ಭಾರತ್ ಎಕ್ಸ್‌ಪ್ರೆಸ್ 2.0 ಪರಿಸರ ಸ್ನೇಹಿಯಾಗಿದೆ.
ಬೆಂಗಳೂರು, ಹೈದರಾಬಾದ್, ಮುಂಬೈ ನಡುವೆ ಸಂಚಾರ
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ದಿನದಿಂದ ದಿನಕ್ಕೆ ಜನಮನ್ನಣೆಯನ್ನು ಪಡೆಯುತ್ತಲೇ ಇದೆ. ಈಗಾಗಲೇ ಈ ರೈಲು ದೇಶದ ಹಲವಾರು ಭಾಗಗಳಲ್ಲಿ ಸಂಚರಿಸುತ್ತಿದ್ದು, ಇದರಲ್ಲಿ ಪ್ರಯಾಣ ಮಾಡುವವರ ಸಂಖ್ಯೆಯೂ ಕೂಡ ಹೆಚ್ಚುತ್ತಲೇ ಇದೆ. ಇದೀಗ ಬೆಂಗಳೂರು-ಹೈದರಾಬಾದ್ & ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ರೈಲು ಶೀಘ್ರದಲ್ಲೇ ಓಡಲಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಇತ್ತೀಚೆಗಷ್ಟೇ ಮಾಹಿತಿ ನೀಡಿದ್ದಾರೆ.












Click it and Unblock the Notifications