Vande Bharat Expressway: ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆ ಬಗ್ಗೆ ಶೆಟ್ಟರ್ ಮಹತ್ವದ ಅಪ್ಡೇಟ್
Vande Bharat Expressway: ವಂದೇ ಭಾರತ್ ಎಕ್ಸ್‌ಪ್ರೆಸ್ ಐಷಾರಾಮಿ, ಹೈಸ್ಪೀಡ್ ರೈಲು ಆಗಿ ಗುರುತಿಸಿಕೊಂಡಿದೆ. ಇನ್ನೂ ಇದೀಗ ಬಹುದಿನಗಳ ಬೇಡಿಕೆಯಾಗಿದ್ದ ಪುಣೆ-ಹುಬ್ಬಳ್ಳಿ-ಬೆಳಗಾವಿ ಮಾರ್ಗದಲ್ಲಿ ವಂದೇ ಭಾರತ್ ರೈಲು ಸೇವೆಯ ಬೇಡಿಕೆ ಈಡೇರುವ ಸಮಯ ಹತ್ತಿರದಲ್ಲಿ. ಇನ್ನು ಬೆಂಗಳೂರಿನಿಂದ-ಬೆಳಗಾವಿಗೆ ಈ ಸೇವೆಯನ್ನು ಶೀಘ್ರದಲ್ಲೇ ವಿಸ್ತರಿಸಲಾಗುವುದು ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬಹುನಿರೀಕ್ಷಿತ ಪುಣೆ-ಬೆಳಗಾವಿ ಮತ್ತು ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ರೈಲು ಸೇವೆಯ ಆರಂಭವು ಕೊನೆಗೂ ಕಾರ್ಯರೂಪಕ್ಕೆ ಬಂದಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು. ಇನ್ನು ಸೆಪ್ಟೆಂಬರ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ರೈಲಿಗೆ ಚಾಲನೆ ನೀಡಲಿದ್ದು, ಜಗದೀಶ್ ಶೆಟ್ಟರ್ ಅವರು ಬೆಳಗಾವಿ ರೈಲು ನಿಲ್ದಾಣದಲ್ಲಿ ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಗೆಷ್ಟೇ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಈ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅವರೊಂದಿಗೆ ಚರ್ಚೆ ನಡೆಸಿದ್ದರು. ಇನ್ನು ಜಗದೀಶ್ ಶೆಟ್ಟರ್ ಅವರು ಬೆಂಗಳೂರು-ಧಾರವಾಡದ ವಂದೇ ಭಾರತ್ ರೈಲು ಸೇವೆಯನ್ನು ಬೆಳಗಾವಿಗೆ ವಿಸ್ತರಿಸಲು ಮನವಿ ಮಾಡಿದ್ದರು.
ಇದೀಗ ಪುಣೆ-ಹುಬ್ಬಳ್ಳಿ ಮಾರ್ಗಕ್ಕೆ ಅನುಮೋದನೆ ದೊರೆತಿದ್ದು, ಬೆಂಗಳೂರು-ಧಾರವಾಡದ ರೈಲು ಸೇವೆಯನ್ನು ಬೆಳಗಾವಿಗೆ ವಿಸ್ತರಿಸುವ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಸೂಚನೆ ನೀಡಿದ್ದಾರೆ.
"ಈ ಹಿಂದೆ ಅರಣ್ಯ ಪ್ರದೇಶಗಳು, ಟ್ರ್ಯಾಕ್ ಸಮಸ್ಯೆ, ತಾಂತ್ರಿಕ ಸವಾಲುಗಳನ್ನು ಎದುರಿಸಲಾಗಿದ್ದು, ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗವನ್ನು ಸ್ಥಾಪನೆ ಮಾಡುವ ಪ್ರಕ್ರಿಯೆಯಲ್ಲಿದ್ದೇವೆ. ಇನ್ನು ಅಸ್ತಿತ್ವದಲ್ಲಿರುವ ಮಾರ್ಗದಲ್ಲಿ ರೈಲು ಕಾರ್ಯನಿರ್ವಹಿಸಲು ನಾವು ವಿನಂತಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಸವಾಲುಗಳನ್ನು ಪರಿಹರಿಸಲಾಗಿದೆ," ಎಂದು ಅವರು ಹೇಳಿದರು.
ವಿಶೇಷ ರೈಲು ಸೇವೆ ವಿಸ್ತರಣೆ: ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ರೈಲ್ವೇ ಇಲಾಖೆ ವಿಶೇಷ ರೈಲುಗಳನ್ನು ಬಿಡುತ್ತಲೇ ಬಂದಿದೆ. ಇನ್ನೂ ಇದೀಗ ಗಣೇಶ ಹಬ್ಬ ಹಿನ್ನೆಲೆ ಊರಿಗೆ ಹೊರಡುವ ಹಾಗೂ ಹಬ್ಬ ಮುಗಿದ ಬಳಿಕ ಮತ್ತೆ ಬೆಂಗಳೂರಿಗೆ ವಾಪಸ್ ಆಗುವವರ ಸಂಖ್ಯೆ ಸಾಮಾನ್ಯ ದಿನಗಳಿಗಿಂತಲೂ ಹೆಚ್ಚಿರುತ್ತದೆ. ಆದ್ದರಿಂದ ವಿಶೇಷ ರೈಲು ಸೇವೆಯನ್ನು ವಿಸ್ತರಣೆ ಮಾಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ಎರ್ನಾಕುಲಂ-ಯಲಹಂಕ ನಡುವೆ ವಾರಕ್ಕೆ 3 ದಿನ ಸಂಚರಿಸುತ್ತಿದ್ದ ವಿಶೇಷ ರೈಲ ಸೇವೆಯನ್ನು ಸೆಪ್ಟೆಂಬರ್ 19ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಸೆಪ್ಟೆಂಬರ್ 7ರ ವರೆಗೆ ರೈಲು ಸಂಚರಿಸಲಿದೆ ಎಂದು ಈ ಹಿಂದೆ ತಿಳಿಸಿತ್ತು. ಇದೀಗ ಮತ್ತೆ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಿದಲು ಈ ಸೇವೆಯನ್ನು ವಿಸ್ತರಣೆ ಮಾಡಿದೆ.
ರೈಲು ಸಂಖ್ಯೆ 06101/06102 ಎರ್ನಾಕುಲಂ ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್ ಫಾಸ್ಟ್ ವೀಕ್ಲಿ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಟ್ವೀಟ್ ಮೂಲಕ ಭಾರತೀಯ ರೈಲ್ವೆ ಮಾಹಿತಿ ನೀಡಿದೆ.
ಎರ್ನಾಕುಲಂ ಯಲಹಂಕ ಗರೀಬ್ ರಥ್ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ಸೆಪ್ಟೆಂಬರ್ 8, 11, 13, 15 ಹಾಗೂ 18ರಂದು ಸಂಚರಿಸಲಿದೆ. ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್ ಪಾಸ್ಟ್ ಎಕ್ಸ್‌ಪ್ರೆಸ್ ಸೆಪ್ಟೆಂಬರ್ 9, 12, 14, 16, 19ರಂದು ಓಡಲಿದೆ ಎಂದು ಟ್ವೀಟ್‌ನಲ್ಲಿ ತಿಳಿಸಿದೆ.












Click it and Unblock the Notifications