ಕಲಬುರಗಿ-ಮಂಗಳೂರು ಕಲ್ಯಾಣ ರಥ ಬಸ್; ದರ, ವೇಳಾಪಟ್ಟಿ

ಕಲಬುರಗಿ, ಫೆಬ್ರವರಿ 06: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಕರಾವಳಿ ಕರ್ನಾಟಕವನ್ನು ಸಂಪರ್ಕಿಸಲು ಐಷಾರಾಮಿ ಕಲ್ಯಾಣರಥ ನೂತನ ಬಸ್ ಸೇವೆಯನ್ನು ಆರಂಭಿಸಿದೆ. ಹವಾನಿಯಂತ್ರಿತ ಎಸಿ ಬಸ್‌ ಇದಾಗಿದೆ.

ಕೆಕೆಆರ್‌ಟಿಸಿಯ ಕಲಬುರಗಿ ವಿಭಾಗ-1ರ ಕಲಬುರಗಿ ಘಟಕ ಕಲಬುರಗಿ-ಬೆಂಗಳೂರು, ಕಲಬುರಗಿ-ಮಂಗಳೂರು ನಡುವೆ ನೂತನ ವೋಲ್ವೋ ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ.

Kalaburagi Mangaluru Kalyana Ratha Bus Fare And Schedule

'ಕಲ್ಯಾಣರಥ' ಹೆಸರಿನ ವೋಲ್ವೋ ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ ಹೊಸದಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರ್ಪಡೆಗೊಂಡಿದೆ. ಈ ಐಷಾರಾಮಿ ಬಸ್‌ಗೆ ರಾಜ್ಯದಲ್ಲಿ ಈಗಾಗಲೇ ಹಲವು ಮಾರ್ಗದಲ್ಲಿ ಸಂಚಾರ ನಡೆಸುತ್ತಿವೆ.

ವೇಳಾಪಟ್ಟಿ, ದರ: ಕಲಬುರಗಿ ಮತ್ತು ಮಂಗಳೂರು ನಡುವಿನ ಕಲ್ಯಾಣ ರಥ ಸ್ಲೀಪರ್‌ ಬಸ್‌ ಸೇವೆಗೆ 1,100 ಪ್ರಯಾಣ ದರವನ್ನು ನಿಗದಿ ಮಾಡಲಾಗಿದೆ. ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಟಿಕೆಟ್ ಬುಕ್ ಮಾಡುವ ಅವಕಾಶವನ್ನು ಸಹ ನೀಡಲಾಗಿದೆ.

ಈ ಬಸ್ ಕಲಬುರಗಿಯಿಂ ಸಂಜೆ 5 ಗಂಟೆಗೆ ಹೊರಡಲಿದೆ. ಮಂಗಳೂರು ನಗರವನ್ನು ಮರುದಿನ ಬೆಳಗ್ಗೆ 7.30ಕ್ಕೆ ತಲುಪಲಿದೆ. ಇನ್ನೂ ಮಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಡುವ ಬಸ್‌ ಕಲಬುರಗಿ ನಗರವನ್ನು ಮಾರನೇ ದಿನ ಬೆಳಗ್ಗೆ 7.30ಕ್ಕೆ ತಲುಪಲಿದೆ.

ವಿಜಯಪುರ-ಬೆಂಗಳೂರು, ಸಿಂಧನೂರು-ಬೆಂಗಳೂರು, ಕಲಬುರಗಿ-ಬೆಂಗಳೂರು ಸೇರಿದಂತೆ ವಿವಿಧ ಮಾರ್ಗದಲ್ಲಿ ಈಗಾಗಲೇ ಕಲ್ಯಾಣರಥ ಬಸ್‌ಗಳು ಸಂಚಾರ ನಡೆಸುತ್ತಿವೆ. ಪ್ರಯಾಣಿಕರಿಂದ ಸಹ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

'ಕಲ್ಯಾಣರಥ' ಬ್ರಾಂಡ್‌ನ ವೋಲ್ವೋ ಮಲ್ಟಿ ಆಕ್ಸೆಲ್ ಸ್ಲೀಪರ್ ಕ್ಲಾಸ್ ಬಸ್ ಇದಾಗಿದ್ದು, 40 ಆಸನಗಳನ್ನು ಹೊಂದಿದೆ. ಈ ಬಸ್ 350 ಬಿಎಸ್-6 ಇಂಜಿನ್ ಹೊಂದಿದೆ. ಬಸ್ಸಿಗೆ ವಿಶಿಷ್ಟ ಸಸ್ಪೆಕ್ಷನ್‌ಗಳನ್ನು ಅಳವಡಿಸಲಾಗಿದೆ.

ಈ ಬಸ್ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯನ್ನು ಹೊಂದಿದ್ದು, ಸ್ವಯಂ ಚಾಲಿತ ಬಾಗಿಲು ತೆರೆಯುವ ವ್ಯವಸ್ಥೆ, ಬೆಂಕಿ ನಂದಿಸುವ ಉಪಕರಣಗಳ ವ್ಯವಸ್ಥೆ, ವಾಹನದ ಟ್ರ್ಯಾಕಿಂಗ್ ಗುರುತು ವ್ಯವಸ್ಥೆಯನ್ನು ಒಳಗೊಂಡಿದೆ.

ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಬೆಡ್ ಲೈಟ್, ಲ್ಯಾಪ್ ಟಾಪ್ ಬ್ಯಾಗ್ ಇಡುವ ವ್ಯವಸ್ಥೆಇದೆ. ಐಷಾರಾಮಿ ಬಸ್‌ಗಳು ಒಟ್ಟಾರೆ ಆರಾಮದಾಯಕ ಮತ್ತು ಸುಖಕರ ಪ್ರಯಾಣದ ಅನುಭವ ನೀಡುತ್ತವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+