Karnataka Budget 2023; ದಾವಣಗೆರೆ, ಕೊಪ್ಪಳಕ್ಕೆ ವಿಮಾನ ನಿಲ್ದಾಣ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್‌ನಲ್ಲಿ ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ ವಿಮಾನ ನಿಲ್ದಾಣಕ್ಕೆ ಸಿಕ್ಕ ಕೊಡುಗೆ ಏನು?

ಬೆಂಗಳೂರು, ಫೆಬ್ರವರಿ 17; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಬಜೆಟ್‌ನಲ್ಲಿ ಸಾರಿಗೆ ಮತ್ತು ಸಂಪರ್ಕ ವಲಯಕ್ಕೆ ಹೆಚ್ಚಿನ ಆದ್ಯತೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿಗಳು ಬಜೆಟ್ ಮಂಡನೆ ಮಾಡಿದರು. ಬಜೆಟ್ ಭಾಷಣದಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ನೆರವಿನೊಂದಿಗೆ ವಿಮಾನ ನಿಲ್ದಾಣಗಳ ಅಭಿವೃದ್ಧಿ, ರೈಲು ಮಾರ್ಗಗಳ ಅಭಿವೃದ್ಧಿ, ಸಬ್‌ಅರ್ಬನ್ ರೈಲ್ವೆ ನಿಲ್ದಾಣ, ಬಂದರುಗಳ ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ಮಲ್ಟಿ ಮೋಡಲ್ ಲಾಜಿಸ್ಟಿಕ್ ಪಾರ್ಕ್ ಮೊದಲಾದ ಮೂಲಸೌಕರ್ಯಗಳ ಅಭಿವೃದ್ಧಿಗೆ 69,031 ಕೋಟಿ ರೂ. ಗಳ ಯೋಜನೆಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಅಲ್ಲದೆ ಇನ್ನೂ ಹೆಚ್ಚುವರಿಯಾಗಿ ಸಾಕಷ್ಟು ಯೋಜನೆಗಳು ಅನುಷ್ಠಾನಗೊಳಿಸುವ ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ ಎಂದು ಹೇಳಿದ ಮುಖ್ಯಮಂತ್ರಿಗಳು ಹೇಳಿದರು. ಅಲ್ಲದೇ ರಾಜ್ಯದ ವಿಮಾನ ನಿಲ್ದಾಣ ಯೋಜನೆಗಳ ಕುರಿತು ಮಾಹಿತಿ ನೀಡಿದರು.

Karnataka Budget 2023 Airport Highlights

ಬಜೆಟ್‌ ಭಾಷಣದಲ್ಲಿ ಸುಗಮ ಸಂಚಾರ ಮತ್ತು ಸಮಯದ ಉಳಿತಾಯದ ದೃಷ್ಟಿಯಿಂದ ಜನ ಸಾಮಾನ್ಯರು ವಿಮಾನ ಪ್ರಯಾಣಕ್ಕೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರವು ದಾಖಲೆ ಪ್ರಮಾಣದ 5 ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡಿದೆ ಎಂದರು.

ಶಿವಮೊಗ್ಗ, ವಿಜಯಪುರ, ಹಾಸನ, ರಾಯಚೂರು ಮತ್ತು ಕಾರವಾರ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ಯೋಜನೆ ಕೈಗೆತ್ತಿಕೊಂಡಿದೆ. ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಪ್ರಸಕ್ತ ಸಾಲಿನಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ಘೋಷಣೆ ಮಾಡಿದರು.

ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ, ಹೊಸ ಟೆಂಡರ್‌ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಿ ಸ್ಪರ್ಧಾತ್ಮಕ ಬಿಡ್‌ ಪ್ರಕ್ರಿಯೆ ಮೂಲಕ ಪಿಪಿಪಿ ಮಾದರಿಯಲ್ಲಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು.

Karnataka Budget 2023 Airport Highlights

ಮೈಸೂರು ವಿಮಾನ ನಿಲ್ದಾಣವನ್ನು ಉನ್ನತೀಕರಿಸಲು ಭೂ ಸ್ವಾಧೀನಕ್ಕಾಗಿ ಕ್ರಮ ವಹಿಸಲಾಗಿದ್ದು, ಇದಕ್ಕಾಗಿ 320 ಕೋಟಿ ರೂ. ಗಳಷ್ಟು ಹಂಚಿಕೆ ಮಾಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಈಗಾಗಲೇ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗಿದ್ದು, ಪ್ರಸ್ತುತ ಸಾಲಿನಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+