Shivamogga Airport: ಮಲೆನಾಡ ಜನರಿಗೆ ಸಿಹಿಸುದ್ದಿ ಕೊಟ್ಟ ರಾಜ್ಯ ಸರ್ಕಾರ

ಶಿವಮೊಗ್ಗ, ಅಕ್ಟೋಬರ್ 29: ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದ ಲೈಸೆನ್ಸ್ ನವೀಕರಣ ಮಾಡಲಾಗಿದೆ. 2025ರ ಅಕ್ಟೋಬರ್ ತನಕ ಲೈಸೆನ್ಸ್ ನವೀಕರಣ ಮಾಡಿ ಡಿಜಿಸಿಎ ಆದೇಶಿಸಿದೆ. ಈ ನಡುವೆಯೇ ಕರ್ನಾಟಕ ಸರ್ಕಾರ ಮಲೆನಾಡಿನ ಜನರಿಗೆ ಶುಭಸುದ್ದಿಯೊಂದನ್ನು ಕೊಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು 27.02.2023ರಂದು ಲೋಕಾರ್ಪಣೆ ಮಾಡಿದ್ದರು.

ಕರ್ನಾಟಕ ಸರ್ಕಾರವೇ ಶಿವಮೊಗ್ಗ ಹೊರವಲಯದಲ್ಲಿರುವ ವಿಮಾನ ನಿಲ್ದಾಣವನ್ನು ನಿರ್ವಹಣೆ ಮಾಡುತ್ತಿದೆ. ರಾಜ್ಯದಲ್ಲಿ ಕರ್ನಾಟಕ ಸರ್ಕಾರ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಮೂಲಕ ನಿರ್ವಹಣೆ ಮಾಡುತ್ತಿರುವ ಏಕೈಕ ಏರ್‌ಪೋರ್ಟ್ ಎಂಬ ಹೆಗ್ಗಳಿಕೆ ಶಿವಮೊಗ್ಗದ್ದಾಗಿದೆ.

Karnataka Government Sanctioned Additional Grants For Shivamogga Airport

ಹೆಚ್ಚುವರಿ ಅನುದಾನಕ್ಕೆ ಒಪ್ಪಿಗೆ: ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ತಾಲ್ಲೂಕಿನ ಸೋಗಾನೆ ಗ್ರಾಮದಲ್ಲಿರುವ ಶಿವಮೊಗ್ಗ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿಗೆ ರೂ.127.44 ಕೋಟಿಗಳ ಹೆಚ್ಚುವರಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್. ಕೆ. ಪಾಟೀಲ್ ಹೇಳಿದರು.

* ಹೆಚ್ಚುವರಿ ಮೊತ್ತ ರೂ.127.44 ಕೋಟಿ ರೂ.ಗಳು

* ಈ ಮೊದಲಿನ ವೆಚ್ಚ ರೂ.384.00 ಕೋಟಿ ಮತ್ತು 65.22 ಕೋಟಿ ಹೆಚ್ಚುವರಿ ಅನುದಾನ ಸೇರಿ ಇಲ್ಲಿಯವರೆಗೂ ಅನುಮೋದಿತವಾದ ವೆಚ್ಚ ರೂ. 449.22 ಕೋಟಿ.

* ಪ್ರಸ್ತುತ ಹಲವಾರು ಹೊಸ ಐಟಂಗಳನ್ನು ಮತ್ತು ಹೆಚ್ಚುವರಿ ಪ್ರಮಾಣಗಳನ್ನು ಸೇರಿಸಲಾಗಿದೆ.

* ಇದರಿಂದ ರೂ. 449.22 ಕೋಟಿ ವೆಚ್ಚಕ್ಕೆ ಅನುಮೋದನೆಯಾದ ಮೊತ್ತಕ್ಕೆ ಹೆಚ್ಚುವರಿಯಾಗಿ ರೂ. 127.44 ಕೋಟಿ ಅನುದಾನದ ಅವಶ್ಯಕತೆಯನ್ನು ಪರಿಗಣಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ನಿರ್ವಹಣೆ: ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರವೇ ಸಂಪೂರ್ಣವಾಗಿ ನಿರ್ವಹಣೆ ಮಾಡುತ್ತಿದೆ. ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಮಾನವ ಸಂಪನ್ಮೂಲವನ್ನು ನಿಯೋಜನೆ ಮಾಡಿ, ಅದರ ನಿರ್ವಹಣೆಯನ್ನು ನೋಡಿಕೊಳ್ಳುತ್ತಿದೆ.

ಮೊದಲ ಬಾರಿಗೆ ಕೆಎಸ್‌ಐಐಡಿಸಿ ಡಿಜಿಸಿಎಯಿಂದ ವಿಮಾನ ನಿಲ್ದಾಣ ಕಾರ್ಯಾಚರಣೆಗೆ ಅಗತ್ಯವಾದ ಅನುಮತಿಯನ್ನು ಪಡೆದುಕೊಂಡಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ಯಾಸೆಂಜರ್ ಟರ್ಮಿನಲ್ ಬಿಲ್ಡಿಂಗ್‌ ಅನ್ನು ಪೀಕ್ ಅವರ್‌ನಲ್ಲಿ ಸುಮಾರು 300 ಪ್ರಯಾಣಿಕರನ್ನು ನಿಭಾಯಿಸಲು ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ. ರನ್‌ವೇ, ಏಪ್ರನ್, ಐಸೋಲೇಶನ್ ಬೇ, ಟ್ಯಾಕ್ಸಿವೇ ಮತ್ತು ಇತರ ಮೂಲಸೌಕರ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಏರ್‌ಬಸ್-320 ಮಾದರಿಯ ವಿಮಾನಗಳ ಕಾರ್ಯಾಚರಣೆಗಾಗಿ ಅನುಕೂಲವಾಗುವಂತೆ ರನ್‌ ವೇ ವಿನ್ಯಾಸಗೊಳಿಸಲಾಗಿದೆ.

ಸೋಗಾನೆಯಲ್ಲಿರುವ ಈ ವಿಮಾನ ನಿಲ್ದಾಣ ರಾಜ್ಯದ 3ನೇ ಉದ್ದದ ರನ್‌ವೇಯನ್ನು ಹೊಂದಿದೆ. ರನ್‌ವೇ 3,050 ಮೀಟರ್ ಅಳತೆಯನ್ನು ಹೊಂದಿದೆ. ವಿಮಾನ ನಿಲ್ದಾಣದಲ್ಲಿ ರಾತ್ರಿ ಲ್ಯಾಂಡಿಂಗ್ ಮಾಡಲು ಅನುಕೂಲವಾಗುವಂತೆ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಈ ಕಾರ್ಯಾಚರಣೆ ನಡೆಸಲು ಅಗತ್ಯವಿರುವ ಉಪಕರಣಗಳ ಖರೀದಿ ಮತ್ತು ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಲಾಗಿದೆ.

ವಿಮಾನ ನಿಲ್ದಾಣವು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ 27.02.2023 ರಂದು ಲೋಕಾರ್ಪಣೆ ಮಾಡಿದ್ದರು. ಶಿವಮೊಗ್ಗದಿಂದ ದೇಶದ ವಿವಿಧ ಮೆಟ್ರೋ ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಸುಮಾರು 20 ವಿಮಾನಗಳು ಈ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಯನ್ನು ನಡೆಸಿವೆ.

ಇಂಡಿಗೋ ಏರ್‌ಲೈನ್ಸ್ 31.08.2023 ರಿಂದ ಬೆಂಗಳೂರು-ಶಿವಮೊಗ್ಗ-ಬೆಂಗಳೂರು ಮಾರ್ಗದಲ್ಲಿ ಮೊದಲು ವಿಮಾನ ಸೇವೆಯನ್ನು ಆರಂಭಿಸಿತು. ಮುಂದಿನ ದಿನಗಳಲ್ಲಿ ಶಿವಮೊಗ್ಗ-ದೆಹಲಿ, ಶಿವಮೊಗ್ಗ-ಮುಂಬೈಗೆ ವಿಮಾನ ಸೇವೆ ಆರಂಭಿಸಲು ಪ್ರಯತ್ನಗಳನ್ನು ನಡೆಸಲಾಗುತ್ತಿದೆ.

ಸದ್ಯ, ಶಿವಮೊಗ್ಗ-ತಿರುಪತಿ, ಶಿವಮೊಗ್ಗ-ಹೈದರಾಬಾದ್, ಶಿವಮೊಗ್ಗ-ಚೆನ್ನೈ ಮತ್ತು ಶಿವಮೊಗ್ಗ- ಗೋವಾಕ್ಕೆ ವಿಮಾನ ಸಂಪರ್ಕವಿದೆ. ಶಿವಮೊಗ್ಗದಿಂದ ಸ್ಪೈಸ್ ಜೆಟ್, ಸ್ಟಾರ್ ಏರ್‌ಲೈನ್ಸ್ ಮತ್ತು ಅಲಯನ್ಸ್ ಏರ್‌ಲೈನ್ಸ್ ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆಯನ್ನು ನಡೆಸುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+