Vande Bharat Express: ಕರ್ನಾಟಕದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಘೋಷಣೆ, ಮಾರ್ಗ

ಬೆಂಗಳೂರು, ನವೆಂಬರ್ 16: ಭಾರತೀಯ ರೈಲ್ವೆ ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಲೀಪರ್ ಮಾದರಿ ರೈಲುಗಳ ಸಂಚಾರಕ್ಕೆ ತಯಾರಿ ನಡೆಸಿದೆ. ಸದ್ಯದ ಮಾಹಿತಿ ಪ್ರಕಾರ 2025ರ ಜನವರಿಯಲ್ಲಿ ಈ ಮಾದರಿ ರೈಲುಗಳು ದೇಶದ ವಿವಿಧ ಮಾರ್ಗದಲ್ಲಿ ಸಂಚಾರವನ್ನು ನಡೆಸಲಿವೆ. ಕರ್ನಾಟಕಕ್ಕೆ ಸಹ ವಂದೇ ಭಾರತ್ ಸ್ಲೀಪರ್ ರೈಲು ಘೋಷಣೆಯಾಗಿದೆ. ರಾಜ್ಯದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಬಗ್ಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ, ತುಮಕೂರು ಸಂಸದ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.

ಸಚಿವ ವಿ. ಸೋಮಣ್ಣ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಭೆ ನಡೆಸಿದರು. ಬೆಳಗಾವಿ ಮತ್ತು ಧಾರವಾಡ ನಡುವಿನ ನೂತನ ರೈಲ್ವೆ ಮಾರ್ಗ ಸೇರಿದಂತೆ ವಿವಿಧ ಯೋಜನೆ ಬಗ್ಗೆ ಪರಿಶೀಲನೆ ನಡೆಸಿದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Karnatakas First Vande Bharat Sleeper Train Between Bengaluru And Belagavi

ಬೆಂಗಳೂರು-ಬೆಳಗಾವಿ: ಈ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ವಿ. ಸೋಮಣ್ಣ ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಲೀಪರ್ ಮಾದರಿ ರೈಲು ಸಂಚಾರ ನಡೆಸಲಿದೆ. ಈ ರೈಲು ಕರ್ನಾಟಕದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಆಗಲಿದೆ ಎಂದು ಹೇಳಿದರು.

ಸಚಿವ ಸೋಮಣ್ಣ ಮಾತನಾಡಿ, "ಬೆಳಗಾವಿ-ಪುಣೆ ನಡುವೆ ಈಗಾಗಲೇ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ಬೆಂಗಳೂರು-ಬೆಳಗಾವಿ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಲೀಪರ್ ಮಾದರಿ ರೈಲು ಸಂಚಾರ ನಡೆಸಲಿದೆ. ರಾಜ್ಯದಲ್ಲಿ ಸಂಚಾರ ನಡೆಸುವ ಈ ಮಾದರಿಯ ಮೊದಲ ರೈಲು ಇದಾಗಲಿದೆ" ಎಂದು ತಿಳಿಸಿದರು.

ಬೆಳಗಾವಿಯ ಜನರು ಕೆಎಸ್ಆರ್ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಈ ಪ್ರಸ್ತಾವನೆಗೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಬೆಂಗಳೂರು-ಬೆಳಗಾವಿ ನಡುವೆ ಪ್ರಾಯೋಗಿಕ ಸಂಚಾರ ಮುಗಿದು ನವೆಂಬರ್ 21ಕ್ಕೆ ಒಂದು ವರ್ಷ ಆಗಲಿದೆ.

ಆದರೆ ಇನ್ನೂ ಸಹ ಬೆಳಗಾವಿಗೆ ಬೆಂಗಳೂರಿನಿಂದ ವಂದೇ ಭಾರತ್ ರೈಲು ಸೇವೆ ಆರಂಭವಾಗಿಲ್ಲ. ಆದರೆ ಹುಬ್ಬಳ್ಳಿ-ಪುಣೆ ನಡುವಿನ ವಂದೇ ಭಾರತ್ ರೈಲು ಬೆಳಗಾವಿ ಮೂಲಕ ಸಂಚಾರ ನಡೆಸುತ್ತದೆ. ಬೆಳಗಾವಿಯಲ್ಲಿಯೂ ನಿಲುಗಡೆ ಇದೆ.

ಕೆಎಸ್ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡುವ ಬೇಡಿಕೆಯೇ ಇನ್ನೂ ಸಹ ಈಡೇರಿಲ್ಲ. ಈಗ ಸಚಿವ ವಿ. ಸೋಮಣ್ಣ ಬೆಳಗಾವಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಲೀಪರ್ ರೈಲಿನ ಘೋಷಣೆಯನ್ನು ಮಾಡಿದ್ದಾರೆ.

ಬೆಂಗಳೂರಿನಲ್ಲೇ ತಯಾರಿ: ವಂದೇ ಭಾರತ್ ಎಕ್ಸ್‌ಪ್ರೆಸ್‌ ಸ್ಲೀಪರ್‌ ರೈಲಿನ ಬೋಗಿಯನ್ನು ಬೆಂಗಳೂರಿನ ಬಿಇಎಂಎಲ್‌ನಲ್ಲಿ ತಯಾರು ಮಾಡಲಾಗುತ್ತಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸೆಟ್‌ಗೆ ಚಾಲನೆ ನೀಡಿದ್ದಾರೆ. ಈ ರೈಲನ್ನು ಭಾರತದ ಪ್ರಮುಖ ರೈಲು ಮತ್ತು ಮೆಟ್ರೋ ತಯಾರಕ ಸಂಸ್ಥೆ ಬೆಮೆಲ್‌ನಿಂದ ಸ್ಥಳೀಯವಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ತಯಾರಿಸಲಾಗಿದೆ.

ವಂದೇ ಭಾರತ್ ಸ್ಲೀಪರ್ ರೈಲು ಈಗ ಸಂಚಾರಕ್ಕೆ ಸಿದ್ಧವಾಗುತ್ತಿದೆ. ಇದು ಪ್ರಯಾಣಿಕರಿಗೆ ವಿಶ್ವ ದರ್ಜೆಯ ಪ್ರಯಾಣದ ಅನುಭವ ಮತ್ತು ಅತ್ಯುತ್ತಮ ದರ್ಜೆಯ ಸೌಕರ್ಯಗಳನ್ನು ಒದಗಿಸುತ್ತದೆ. ಭಾರತ ದೂರ ಪ್ರಯಾಣದಲ್ಲಿ ಸ್ಲೀಪರ್ ಮಾದರಿ ರೈಲು ಕ್ರಾಂತಿ ಉಂಟು ಮಾಡಲಿದೆ ಎಂದು ಅಂದಾಜಿಸಲಾಗಿದೆ. ಸೌಕರ್ಯ, ಸುರಕ್ಷತೆಗೆ ರೈಲಿನಲ್ಲಿ ಹಲವಾರು ವ್ಯವಸ್ಥೆಗಳನ್ನು ಮಾಡಲಾಗಿದೆ.

ಈ ರೈಲು ಬೋಗಿ ಯುಎಸ್‌ಬಿ ಚಾರ್ಜಿಂಗ್ ಸೌಲಭ್ಯ, ಸಾರ್ವಜನಿಕ ಪ್ರಕಟಣೆ ಮತ್ತು ದೃಶ್ಯ ಮಾಹಿತಿ ವ್ಯವಸ್ಥೆಗಳು, ಡಿಸ್‌ಪ್ಲೇ ಪ್ಯಾನೆಲ್‌ಗಳು ಮತ್ತು ಭದ್ರತಾ ಕ್ಯಾಮೆರಾಗಳನ್ನು ಒಳಗೊಂಡಿದೆ. ಮಾಡ್ಯುಲರ್ ಪ್ಯಾಂಟ್ರಿಗಳು ಮತ್ತು ವಿಕಲಚೇತನ ಪ್ರಯಾಣಿಕರಿಗಾಗಿ ವಿಶೇಷ ಬರ್ತ್‌ಗಳು ಮತ್ತು ಶೌಚಾಲಯಗಳನ್ನು ಒಳಗೊಂಡಿವೆ. 1ನೇ ಎಸಿ ಕಾರು ಬೋಗಿಯಲ್ಲಿ ಬಿಸಿನೀರಿನ ಸ್ನಾನದ ಸೌಕರ್ಯವೂ ಇದೆ.

ಬೆಂಗಳೂರು-ಮುಂಬೈ ಮಾರ್ಗದಲ್ಲಿ ವಂದೇ ಭಾರತ್ ಸ್ಲೀಪರ್ ಮಾದರಿ ರೈಲು ಸಂಚಾರ ನಡೆಸಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಸಚಿವ ವಿ. ಸೋಮಣ್ಣ ಕರ್ನಾಟಕದ ಮೊದಲ ರೈಲು ಬೆಂಗಳೂರು-ಬೆಳಗಾವಿ ನಡುವೆ ಓಡಲಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+