ಕೆಕೆಆರ್‌ಟಿಸಿಯಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್‌ಗಳು

ಬೆಂಗಳೂರು, ಮೇ 13; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಾರಾಂತ್ಯದಲ್ಲಿ ಬೆಂಗಳೂರು ನಗರಕ್ಕೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಪ್ರಯಾಣಿಕರು ಬಸ್ ಸೇವೆಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದೆ.

ಕರ್ನಾಟಕ ವಿಧಾನಸಭೆಯ ಚುನಾವಣೆ ಮೇ 13ರ ಬುಧವಾರ ನಡೆದಿತ್ತು. ಶನಿವಾರ ಮತ ಎಣಿಕೆ ನಡೆಯುತ್ತಿದೆ. ಮತದಾನ ಮಾಡಲು ಬೆಂಗಳೂರಿನಿಂದ ಆಗಮಿಸಿದವರು ವಾಪಸ್ ತೆರಳಲು ಅನುಕೂಲವಾಗುವಂತೆ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುತ್ತಿದೆ.

kalyana karnataka bus

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಬೆಂಗಳೂರು ಹಾಗೂ ವಿವಿಧ ಸ್ಥಳಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ ಕಾರಣ, ಪುನಃ ಬೆಂಗಳೂರಿಗೆ ತೆರಳಲು ಬಳ್ಳಾರಿ ಮತ್ತು ಕೊಪ್ಪಳ ವಿಭಾಗದಿಂದ ಬಸ್‌ಗಳು ಬೆಂಗಳೂರಿಗೆ ಸಂಚಾರ ನಡೆಸಲಿವೆ.

ಬಳ್ಳಾರಿಯಿಂದ ಬಸ್‌ಗಳು; ಬಳ್ಳಾರಿ ಕೇಂದ್ರಿಯ ಬಸ್ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣಿಸಲು ಅನುಕೂಲ ಮಾಡಿಕೊಡಲು ಹೆಚ್ಚುವರಿ ವಿಶೇಷ ಬಸ್‍ಗಳ ವ್ಯವಸ್ಥೆಯನ್ನು ಮೇ 15ರವರೆಗೆ ಮಾಡಲಾಗಿದೆ.

bus

ಈ ವಿಶೇಷ ಬಸ್‌ಗಳಿಗೆ ಆನ್‌ಲೈನ್ ಮುಖಾಂತರವೂ www.ksrtc.in ವೆಬ್‍ಸೈಟ್‍ಗೆ ಮೂಲಕ ಮುಂಗಡ ಟಿಕೆಟ್‌ಗಳನ್ನು ಬುಕ್ ಮಾಡಬಹುದಾಗಿದೆ. ಜನರು ವಿಶೇಷ ಬಸ್ ಸೌಲಭ್ಯದ ಉಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ಕೊಪ್ಪಳದಿಂದಲೂ ಬಸ್ ಸೇವೆ; ಬೆಂಗಳೂರು ನಗರಕ್ಕೆ ಹೆಚ್ಚಿನ ಜನರು ಸಂಚಾರ ನಡೆಸುವ ಕಾರಣ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ವಿಭಾಗದಿಂದ ಮೇ 13ರಿಂದ ಮೇ 15 ರವರೆಗೆ ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಗಂಗಾವತಿ ಹಾಗೂ ಕುಕನೂರು ಬಸ್‌ ನಿಲ್ದಾಣಗಳಿಂದ ಬೆಂಗಳೂರಿಗೆ ಹೆಚ್ಚುವರಿ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

ಈ ಸೌಲಭ್ಯವನ್ನು ಜನರು ಪಡೆದುಕೊಳ್ಳಬೇಕು ಎಂದು ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆಎಸ್ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿಯೇ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶೇ 73.19ರಷ್ಟು ಮತದಾನವಾಗಿತ್ತು. ಕಲ್ಯಾಣ ಕರ್ನಾಟಕ ಭಾಗದ ಅನೇಕರು ಉದ್ಯೋಗ, ವಿದ್ಯಾಭ್ಯಾಸ ಸೇರಿದಂತೆ ವಿವಿಧ ಕಾರಣಗಳಿಗೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಅವರು ತಮ್ಮ ಹಕ್ಕು ಚಲಾವಣೆ ಮಾಡಲು ತಮ್ಮ ಊರುಗಳಿಗೆ ಆಗಮಿಸಿದ್ದರು. ಈಗ ಅವರು ವಾಪಸ್ ತೆರಳಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಭಾರತೀಯ ರೈಲ್ವೆ ಜನರು ಮತದಾನ ಮಾಡಲು ಊರಿಗೆ ತೆರಳಲು ಸಹಾಯಕವಾಗುವಂತೆ ಬೆಂಗಳೂರು ನಗರದಿಂದ ಸಾಗುವ ರೈಲುಗಳಿಗೆ ಹೆಚ್ಚುವರಿ ಬೋಗಿಯನ್ನು ಸಹ ಅಳವಡಿಕೆ ಮಾಡಿತ್ತು. ಈಗ ವಾರಾಂತ್ಯದ ರಜೆ ಮುಗಿಸಿ ಜನರು ವಾಪಸ್‌ ಬೆಂಗಳೂರು ನಗರಕ್ಕೆ ತೆರಳಲಿದ್ದಾರೆ.

ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆದಿತ್ತು. ಮತ ಎಣಿಕೆ ಮೇ 13ರ ಶನಿವಾರ ನಡೆಯುತ್ತಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ರಾಜ್ಯದಲ್ಲಿ ಯಾರು? ಸರ್ಕಾರ ರಚನೆ ಮಾಡಲಿದ್ದಾರೆ? ಎಂಬ ಸುಳಿವು ಸಿಗುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+