ಕೊಡಗು; ಎಲ್ಲಾ ಹೋಂ-ಸ್ಟೇಗಳಿಗೆ ಜಿಲ್ಲಾಡಳಿತದ ಸೂಚನೆಗಳು

ಮಡಿಕೇರಿ, ಜುಲೈ 09; ಕರ್ನಾಟಕದ ಕಾಶ್ಮೀರ ಎಂದು ಕರೆಯುವ ಕೊಡಗು ಜಿಲ್ಲೆ ಪ್ರವಾಸೋದ್ಯಮಕ್ಕೆ ಪ್ರಸಿದ್ಧಿ ಪಡೆದಿದೆ. ವರ್ಷದ ಎಲ್ಲಾ ಋತುವಿನಲ್ಲಿಯೂ ಇಲ್ಲಿಗೆ ಪ್ರವಾಸಿಗರು ಆಗಮಿಸುತ್ತಾರೆ. ಪ್ರವಾಸೋದ್ಯಮವನ್ನು ನಂಬಿಕೊಂಡು ನೂರಾರು ಹೋಂ-ಸ್ಟೇಗಳು ಕಾರ್ಯ ನಿರ್ವಹಣೆ ಮಾಡುತ್ತಿವೆ.

ಕೊಡಗು ಜಿಲ್ಲಾಡಳಿತ ಹೋಂ-ಸ್ಟೇಗಳಿಗೆ ಹಲವು ನಿರ್ದೇಶನಗಳನ್ನು ನೀಡಿದೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಸರ್ಕಾರದ ಆದೇಶದನ್ವಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಹೇಳಿದೆ.

Kodagu District Administration

ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿ ಆಗಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ಜುಲೈ 30ರೊಳಗೆ ನೋಂದಾಯಿಸಿಕೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನೋಂದಣಿ ಮಾಡಿಕೊಳ್ಳದ ಹೋಂ-ಸ್ಟೇಗಳನ್ನು ರದ್ದುಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪ್ರವಾಸೋದ್ಯಮ ಇಲಾಖೆ; ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಡಾ. ಯತೀಶ ಉಲ್ಲಾಳ ಈ ಕುರಿತು ಮಾಹಿತಿ ನೀಡಿದ್ದಾರೆ. 2015-20ನೇ ಸಾಲಿನಲ್ಲಿ ಹೋಂ-ಸ್ಟೇ ನಡೆಸಲು ನೀಡಿರುವ ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿದ್ದು, ಅಂತಹ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸಬೇಕು ಹಾಗೂ ಹೋಂ-ಸ್ಟೇಗಳ ನೋಂದಣಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದೆ ಎಂದು ಹೇಳಿದ್ದಾರೆ.

ಆನ್‍ಲೈನ್‍ನಲ್ಲಿ ಹೋಂ-ಸ್ಟೇ ನೋಂದಣಿ ಮಾಡಲು ಭಾವಚಿತ್ರ, ಆಧಾರ್ ಕಾರ್ಡ್, ಹೋಂ-ಸ್ಟೇ ಹೊರಾಂಗಣ, ಒಳಾಂಗಣ, ಕೊಠಡಿ ಛಾಯಾಚಿತ್ರಗಳು, ಹೋಂ-ಸ್ಟೇ ಮಾಲೀಕತ್ವದ ದಾಖಲಾತಿ ಕಡ್ಡಾಯವಾಗಿದೆ.

ಇದರ ಜೊತೆಗೆ ಪೊಲೀಸ್ ಇಲಾಖೆಯಿಂದ ನೀಡಲಾಗಿರುವ ನಿರಾಕ್ಷೇಪಣಾ ಪತ್ರ, ಸ್ಥಳೀಯ ಸಂಸ್ಥೆಯವರುಗಳು ನೀಡಿರುವ ನಿರಾಕ್ಷೇಪಣಾ ಪತ್ರ. ವಾಸಸ್ಥಳ ದೃಢೀಕರಣ ಪತ್ರ, ನೋಂದಣಿ ಶುಲ್ಕ ರೂ. 500 ಪಾವತಿ ಮಾಡಬೇಕು. ಸ್ಕ್ಯಾನ್ ಮಾಡಿದ ದಾಖಲಾತಿಗಳನ್ನು ಅಂತರ್ಜಾಲದಲ್ಲಿ ಅಪ್‍ಲೋಡ್ ಮಾಡಬೇಕು.

ಹೋಂ-ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿ ಹಾಜರುಪಡಿಸುವುದು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ ಕ್ರಮ ಜರುಗಿಸಲಾಗುವುದು ಎಚ್ಚರಿಸಿದ್ದಾರೆ.

ಈಗಾಗಲೇ ಪರವಾನಿಗೆ ಪಡೆದು ಹೋಂ-ಸ್ಟೇ ನಡೆಸುತ್ತಿರುವ ಮಾಲೀಕರು ಬರುವಂತಹ ಅತಿಥಿಗಳ ವಾಹನ ಸಂಖ್ಯೆ, ಗುರುತಿನ ಚೀಟಿಯ ವಿವರಗಳನ್ನು ನೋಂದಣಿ ಪುಸ್ತಕದಲ್ಲಿ ಕಡ್ಡಾಯವಾಗಿ ನಮೂದಿಸುವುದು. ಹೋಂ-ಸ್ಟೇಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಅನಧಿಕೃತ ಚಟುವಟಿಕೆಗಳನ್ನು ನಡೆಸಬಾರದು ಎಂದು ಸೂಚಿಸಲಾಗಿದೆ.

ಹೋಂ-ಸ್ಟೇಗಳಲ್ಲಿ ಬಳಸುವಂತಹ ಗ್ಯಾಸ್ ಗೀಸರ್/ ಕರೆಂಟ್ ಗೀಸರ್‌ಗಳನ್ನು ಕಾಲಕಾಲಕ್ಕೆ ಸರಿಯಾಗಿ ನಿರ್ವಹಿಸುವುದು. ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಬೆಂಕಿ ನಂದಕವನ್ನು ಕಡ್ಡಾಯವಾಗಿ ಹೋಂ-ಸ್ಟೇನಲ್ಲಿ ಅಳವಡಿಸುವುದು. ಹೋಂ-ಸ್ಟೇ ಸಿಸಿಟಿವಿಯ 45 ದಿನಗಳ ಪುಟೇಜ್‍ಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು ಹಾಗೂ ಸಿಸಿ ಟಿವಿಯನ್ನು ಸರಿಯಾಗಿ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ಹಾರಂಗಿ ಹಿನ್ನೀರಿನ ಹಾಗೂ ಕಾವೇರಿ ನದಿ ದಂಡೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಮಳೆಗಾಲ ಸಮಯದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವುದು. ಈ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ಕೊಡಲಾಗಿದೆ.

ಅನಧಿಕೃತವಾಗಿ ನಡೆಸುತ್ತಿರುವಂತಹ ಹೋಂ-ಸ್ಟೇಗಳ ಬಗ್ಗೆ ಸಾರ್ವಜನಿಕರು ದೂರು/ ಮಾಹಿತಿ ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರ ಮುಖೇನ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇವರಿಗೆ ಸಲ್ಲಿಕೆ ಮಾಡಬಹುದು.

ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ವೆಬ್‌ ಸೈಟ್ http://karnatakatourism.org/ ಅಥವಾ https://kttf.karnatakatourism.org/. ನೋಂದಣಿಗೆ ಜುಲೈ 30 ಕೊನೆಯ ದಿನವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+