ಈ ಐದು ದಿನ ಕಾರವಾರ-ಮಡಂಗಾವ ರೈಲು ಸಂಚಾರ ರದ್ದು-ಮಾಹಿತಿ ತಿಳಿಯಿರಿ
ಕಾರವಾರ, ಡಿಸೆಂಬರ್, 15: ಹಳಿ ಸೇರಿದಂತೆ ಇನ್ನಿತರೆ ಕಾಮಗಾರಿ ಇರುವಂತಹ ಸಂದರ್ಭದಲ್ಲಿ ತಾತ್ಕಾಲಿಕವಾಗಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತದೆ. ಹಾಗೆಯೇ ಇದೀಗ ಕಾರವಾರ ಮತ್ತು ಮಡಗಾಂವ ಸಂಪರ್ಕಿಸುವ ವಿಶೇಷ ರೈಲಿನ ಸಂಚಾರವನ್ನು ತಾತ್ಕಾಲಿಕವಾಗಿದೆ ಸ್ಥಗಿತಗೊಳಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗದರೆ ಈ ರೈಲು ಸಂಚಾರ ಎಲ್ಲಿದ ಎಲ್ಲಿಯವರೆಗೂ ಓಡಾಟ ನಿಲ್ಲಿಸಲಿದೆ ಎಂದು ಇಲ್ಲಿ ಗಮನಿಸಿ.
ಡಿಸೆಂಬರ್ 17ರಿಂದ ರೈಲು ಸಂಚಾರ ರದ್ದು
ಕಾರವಾರ ಮತ್ತು ಮಡಗಾಂವ ಸಂಪರ್ಕಿಸುವ ವಿಶೇಷ ರೈಲು ಸಂಚಾರವನ್ನು ಡಿಸೆಂಬರ್ 17ರಿಂದ 21ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಕೊಂಕಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಕಾರವಾರದಿಂದ ಮಡಂಗಾವ ಜಂಕ್ಷನ್‌ಗೆ ಹೋಗುವ (01595) ಮತ್ತು ಮಡಗಾಂವದಿಂದ ಕಾರವಾರ ಜಂಕ್ಷನ್‌ಗೆ ಆಗಮಿಸುವ (01596) ರೈಲನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಯಾಕೆ ರೈಲು ಸಂಚಾರ ರದ್ದು?
ಬೆಂಗಳೂರಿನಿಂದ ಕಾರವಾರಕ್ಕೆ ಬರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಕ್ಸ್‌ಪ್ರೆಸ್ ಮತ್ತು ಚಂಚಗಂಗಾ ಎಕ್ಸ್‌ಪ್ರೆಸ್ ರೈಲುಗಳು ಹಾಸನ ಬಳಿಯ ರೈಲು ಹಳಿ ದುರಸ್ತಿ ಹಿನ್ನೆಲೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.ಈ ರೈಲುಗಳ ಸಂಚಾರ ವಿಳಂಬ- ಎಷ್ಟು ದಿನ, ಏಕೆ?
ಈ 3 ರೈಲುಗಳ ಸಂಚಾರ ವಿಳಂಬ
ಕಾಮಗಾರಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರೈಲುಗಳ ಸಂಚಾರವನ್ನು ರದ್ದು ಮಾಡಲಾಗುತ್ತದೆ ಅಥವಾ ಸಮಯ ಬದಲಾವಣೆ ಮಾಡಲಾಗುತ್ತದೆ. ಹಾಗೆಯೆ ಇದೀಗ ರೈಲ್ವೆ ಕಾಮಗಾರಿ ಹಿನ್ನೆಲೆ ಬೆಳಗಾವಿ ಸೂಪರ್‌ಫಾಸ್ಟ್, ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ಸೇರಿ 3 ರೈಲುಗಳು ವಿಳಂಬವಾಗಿ ಸಂಚರಿಸಲಿವೆ ಎಂದು ನೈರುತ್ಯ ರೈಲ್ವೆ ಮಾಹಿತಿ ನೀಡಿದೆ. ಹಾಗಾದರೆ ಈ ರೈಲುಗಳ ಸಂಚಾರ ಯಾವಾಗಿನಿಂದ ಹಾಗೂ ಎಲ್ಲಿಯವರೆಗೂ ವಿಳಂಬವಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಹುಬ್ಬಳ್ಳಿ ರೈಲ್ವೆ ಯಾರ್ಡ್‌ದಲ್ಲಿನ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ರಾಜ್ಯದ ಪ್ರಮುಖ ಮೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳನ್ನು ಮಾರ್ಗ ಮಧ್ಯದಲ್ಲಿ 60 ನಿಮಿಷಗಳ ಕಾಲ ನಿಯಂತ್ರಣ ಮಾಡಲಾಗುತ್ತದೆ. ಈ ರೈಲು ಹೊರಡುವ ನಿಲ್ದಾಣದಿಂದ ಕೊನೆಯ ನಿಲ್ದಾಣದ ಮಧ್ಯೆ 60 ನಿಮಿಷ ತಡವಾಗಿ ಸಂಚರಿಸಲಿದೆ.
ಬೆಂಗಳೂರು-ಬೆಳಗಾವಿ ಸೂಪರ್‌ಫಾಸ್ಟ್
ಡಿಸೆಂಬರ್ 17 ಮತ್ತು 20, 2023ರಂದು ಬೆಂಗಳೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 20653 ಕೆ.ಎಸ್.ಆರ್ ಬೆಂಗಳೂರು-ಬೆಳಗಾವಿ ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯದಲ್ಲಿ 60 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
ಮೈಸೂರು-ಪಂಢರಪುರ ಗೋಲ್ ಗುಂಬಜ್ ಎಕ್ಸ್‌ಪ್ರೆಸ್
ಜನವರಿ 4, 7 ಮತ್ತು 10, 2024ರಂದು ಮೈಸೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16535 ಮೈಸೂರು-ಪಂಢರಪುರ ಗೋಲ್ ಗುಂಬಜ್ ದೈನಂದಿನ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯದಲ್ಲಿ 60 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
ಮಂಗಳೂರು ಜಂಕ್ಷನ್-ವಿಜಯಪುರ ಎಕ್ಸ್‌ಪ್ರೆಸ್
ಜನವರಿ 4, 7 ಮತ್ತು 10, 2024 ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 07378 ಮಂಗಳೂರು ಜಂಕ್ಷನ್-ವಿಜಯಪುರ ದೈನಂದಿನ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲನ್ನು ಮಾರ್ಗ ಮಧ್ಯದಲ್ಲಿ 60 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.












Click it and Unblock the Notifications