ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ರೈಲು ವಿಸ್ತರಣೆ, ವೇಳಾಪಟ್ಟಿ

ಬೆಂಗಳೂರು, ಅಕ್ಟೋಬರ್ 30: ನೈಋತ್ಯ ರೈಲ್ವೆ ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಪ್ರಯಾಣಿಕರ ಬೇಡಿಕೆ ಹಿನ್ನಲೆಯಲ್ಲಿ ಎರಡು ತಿಂಗಳ ಕಾಲ ರೈಲು ಸೇವೆಯನ್ನು ವಿಸ್ತರಣೆ ಮಾಡಲಾಗಿದೆ.

ರೈಲು ನಂಬರ್ 07339/ 07340 ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ವಿಸ್ತರಣೆ ಮಾಡಲಾಗಿದೆ. ಈ ಮೊದಲು ಅಕ್ಟೋಬರ್ 31ರ ತನಕ ರೈಲು ಓಡಿಸಲು ಆದೇಶಿಸಲಾಗಿತ್ತು.

ksr-bengaluru-sss-hubballi-super-fast-train

ಈ ರೈಲು ಸೇವೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನಲೆಯಲ್ಲಿ ರೈಲು ಸೇವೆಯನ್ನು ವಿಸ್ತರಣೆ ಮಾಡಲಾಗಿದೆ. ರೈಲಿನ ವೇಳಾಪಟ್ಟಿ, ನಿಲ್ದಾಣದಲ್ಲಿ ಯಾವುದೇ ಬದಲಾವಣೆ ಇಲ್ಲದಂತೆ ರೈಲು ಸೇವೆಯನ್ನು ವಿಸ್ತರಿಸಲಾಗಿದೆ.

ವೇಳಾಪಟ್ಟಿ, ನಿಲ್ದಾಣಗಳು; ರೈಲು ನಂಬರ್ 07339 ಎಸ್ಎಸ್‌ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಸೂಪರ್ ಫಾಸ್ಟ್ ರೈಲು ನವೆಂಬರ್ 1 ರಿಂದ ಡಿಸೆಂಬರ್ 31ರ ತನಕ ಹುಬ್ಬಳ್ಳಿಯಿಂದ ಸಂಚಾರ ನಡೆಸಲಿದೆ ಎಂದು ಹೊಸ ಆದೇಶ ತಿಳಿಸಿದೆ.

ಈ ರೈಲು ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣದಿಂದ ರಾತ್ರಿ 11.15ಕ್ಕೆ ಹೊರಡಲಿದೆ. ಕೆಎಸ್ಆರ್ ಬೆಂಗಳೂರು ನಿಲ್ದಾಣವನ್ನು ಮರುದಿನ ಬೆಳಗ್ಗೆ 6.50ಕ್ಕೆ ತಲುಪಲಿದೆ.

ಹುಬ್ಬಳ್ಳಿ-ಬೆಂಗಳೂರು ಮಾರ್ಗದಲ್ಲಿ ರೈಲು ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ ನಿಲ್ದಾಣದಲ್ಲಿ ನಿಲುಗಡೆಗೊಂಡು ಕೆಎಸ್‌ಆರ್ ಬೆಂಗಳೂರು ನಿಲ್ದಾಣಕ್ಕೆ ತಲುಪಲಿದೆ.

ರೈಲು ನಂಬರ್ 07340 ಕೆಎಸ್ಆರ್ ಬೆಂಗಳೂರು-ಎಸ್ಎಸ್‌ಎಸ್ ಹುಬ್ಬಳ್ಳಿ ರೈಲು ಸೇವೆಯನ್ನು ನವೆಂಬರ್ 2ರಿಂದ 2024ರ ಜನವರಿ 1ರ ತನಕ ವಿಸ್ತರಣೆ ಮಾಡಲಾಗಿದೆ.

ಕೆಎಸ್ಆರ್‌ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ರೈಲು ಬೆಂಗಳೂರು ನಗರದಿಂದ ರಾತ್ರಿ 11.55ಕ್ಕೆ ಹೊರಡಲಿದೆ. ಮುರುದಿನ ಬೆಳಗ್ಗೆ 7.30ಕ್ಕೆ ಎಸ್ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣವನ್ನು ತಲುಪಲಿದೆ.

ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು 16 ಕೋಚ್‌ಗಳನ್ನು ಒಳಗೊಂಡಿದೆ. 1 ಎಸಿ 2 ಟೈರ್, 2 ಎಸಿ 3 ಟೈರ್, 7 ಸ್ಲೀಪರ್ ಕೋಚ್, 4 ಸೆಕೆಂಡ್ ಕ್ಲಾಸ್ ಕೋಚ್, 2 ಲಗೇಜ್ ಕಮ್ ಬ್ರೇಕ್ ವ್ಯಾನ್ ವಿತ್ ದಿವ್ಯಾಂಗ ಬೋಗಿಯನ್ನು ಒಳಗೊಂಡಿದೆ.

ಬೆಂಗಳೂರು-ಧಾರವಾಡ ನಡುವೆ ವಯಾ ಹುಬ್ಬಳ್ಳಿ ವಂದೇ ಭಾರತ್ ರೈಲು ಸಂಚಾರವಿದೆ. ಅಲ್ಲದೇ ಬೆಂಗಳೂರು-ಹುಬ್ಬಳ್ಳಿ ನಡುವೆ ಶತಾಬ್ದಿ ರೈಲು ಸಹ ಸಂಚಾರ ನಡೆಸುತ್ತದೆ. ಈ ಮಾರ್ಗದಲ್ಲಿ ಪ್ರಯಾಣಿಕರ ಬೇಡಿಕೆ ಹೆಚ್ಚಿರುವ ಕಾರಣ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಸಹ ಮುಂದುವರೆಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+