Mangaluru Airport: ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹೆಸರಿಡಲು ಒತ್ತಾಯ

ಮಂಗಳೂರು, ಡಿಸೆಂಬರ್‌, 17: ಈಗಾಗಲೇ ಮಲೆನಾಡಿನ ಹೆಬ್ಬಾಗಿಲು ಅಂತಲೇ ಕರೆಸಿಕೊಳ್ಳುವ ಶಿವಮೊಗ್ಗ ಜಿಲ್ಲೆಯ ಸೋಗಾನೆ ಬಳಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣಕ್ಕೆ ಕುವೆಂಪು ಅವರ ಹೆಸರು ಇಡಲು ನಿರ್ಧಾರ ಮಾಡಲಾಗಿದ್ದು, ಘೋಷಣೆಯೊಂದೆ ಬಾಕಿಯಿದೆ. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಮಾಜಿ ರಕ್ಷಣ ಸಚಿವ ಜಾರ್ಜ್‌ ಫೆರ್ನಾಂಡಿಸ್‌ ಅವರ ಹೆಸರು ಇಡಬೇಕು ಎಂದು ಜಯ ಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸ್ಥಾಪಕ ತೋನ್ಸೆ ಜಯಕೃಷ್ಣ ಶೆಟ್ಟಿ ಆಗ್ರಹಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಇತ್ತೀಚೆಗಷ್ಟೇ ಬೆಳಗಾವಿ ವಿಧಾನಸಭೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ, ವಿಜಯಪುರ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣನವರ ಹೆಸರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ನಾಮಕರಣ ಮಾಡಲು ತೀರ್ಮಾನ ಮಾಡಲಾಗಿತ್ತು. ಹಾಗೆಯೇ ಈ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಬೇಕು ಅಂತಲೂ ರಾಜ್ಯದ ಸರ್ಕಾರ ಇದೇ ವೇಳೆ ಹೇಳಿತ್ತು.

Mangaluru Airport: Demand for George Fernandes name to Mangaluru airport

ಹಾಗೆಯೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಅವರು ತಮ್ಮದೇ ಕೊಡುಗೆಯನ್ನು ನೀಡಿದ್ದಾರೆ. ಮಂಗಳೂರು ಮತ್ತು ಮುಂಬೈ ನಡುವೆ ರೈಲು ಸಂಚಾರಕ್ಕೆ ವ್ಯವಸ್ಥೆ, ವಿಮಾನ ನಿಲ್ದಾಣದಲ್ಲಿ ನೈಟ್‌ ಲ್ಯಾಂಡಿಂಗ್‌ ವ್ಯವಸ್ಥೆ ಮಾಡುವ ಮೂಲಕ ಮೇಲ್ದರ್ಜೆಗೆ ಏರಿಸಲು ಸಹಕಾರ, ಕಾರವಾರದ ಸೀ ಬರ್ಡ್‌ ಯೋಜನೆ ರೂಪಿಸಿ ಗಮನ ಸೆಳೆದಿದ್ದಾರೆ. ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡುವುದು ಸೂಕ್ತ ಎಂದು ಅವರು ತಿಳಿಸಿದರು.

ಈ ಸಂಬಂಧ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌, ಕೇಂದ್ರ ಸಚಿವ ಅಮಿತ್‌ ಶಾ, ಸಿಎಂ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಇವರೆಲ್ಲರೂ ಒಪ್ಪಿದ್ದಾರೆ. ಆದರೆ ಸ್ಥಳೀಯ ರಾಜಕಾರಣಿಗಳು ಇದಕ್ಕೆ ಒಪ್ಪುತ್ತಿಲ್ಲ ಎಂದು ಹೇಳಿದರು.

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣಗಳ ಮರುನಾಮಕರಣಕ್ಕೆ ಚಿಂತನೆ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿಡಬೇಕು ಎಂಬ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಬೆಳಗಾವಿಯಲ್ಲಿ ಇತ್ತೀಚೆಗಷ್ಟೇ ಹೇಳಿದ್ದರು.

ವಿಮಾನ ನಿಲ್ದಾಣಗಳ ಮರುನಾಮಕರಣದ ಕುರಿತು ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಅಂಗೀಕರಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡುವುದಾಗಿ ತಿಳಿಸಿದ್ದರು.

ಬುಧವಾರ (ಡಿಸೆಂಬರ್‌ 13) ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ ಶಾಸಕ ಎನ್‌ಎಚ್‌ ಕೋನರೆಡ್ಡಿ ಮತ್ತು ಶ್ರೀನಿವಾಸ್ ಮಾನೆ ಅವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿಡಬೇಕು ಎಂದು ಹಲವು ದಿನಗಳಿಂದ ಬೇಡಿಕೆಯಿದೆ. ಹಾಗೂ ಸರ್ಕಾರಕ್ಕೆ ವಿವಿಧ ಸಂಘಟನೆಗಳಿಂದ ಮನವಿ ಸಲ್ಲಿಕೆ ಆಗಿದೆ ಎಂದಿದ್ದರು.

ಯಾವ ನಗರದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುವುದೋ ಆ ನಗರದ ಹೆಸರನ್ನು ಇಡುವುದು ಅಭ್ಯಾಸ ಆಗಿದೆ. ಅಂತಹ ಹೆಸರನ್ನು ಬದಲಾಯಿಸುವುದು ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯದ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಹೇಳಿದರು.
ರಾಜ್ಯ ಸರ್ಕಾರವು ರಾಜ್ಯದ ಯಾವುದೇ ವಿಮಾನ ನಿಲ್ದಾಣವನ್ನು ಮರುನಾಮಕರಣ ಮಾಡಲು ಬಯಸಿದರೆ, ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಈ ಕುರಿತು ನಿರ್ಣಯವನ್ನು ಮಂಡಿಸಿ ಅಂಗೀಕರಿಸಬೇಕು ಮತ್ತು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಬೇಕು ಎಂದು ತಿಳಿಸಿದ್ದರು.

ಇನ್ನು ಈ ಕುರಿತು ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರಸ್ತಾವನೆ ಮಂಡಿಸಿ ಮುಂದಿನ ಕ್ರಮಕೈಗೊಳ್ಳುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ ಎಂದರು. ಇನ್ನು ಇದೇ ವೇಳೆ ಈ ಕುರಿತು ನಿರ್ಣಣ ಕೈಗೊಳ್ಳುವಂತೆ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಮನವಿ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+