ಕರಾವಳಿ ಭಾಗದ ಜನರ ಬಹುದಿನದ ಬೇಡಿಕೆ ಈಡೇರಿಸಿದ ಭಾರತೀಯ ರೈಲ್ವೆ
ಮಂಗಳೂರು, ಮಾರ್ಚ್ 28; ಭಾರತೀಯ ರೈಲ್ವೆ ಕರ್ನಾಟಕದ ಕರಾವಳಿ ಭಾಗದ ಜನರ ಬಹುದಿನದ ಬೇಡಿಕೆಯನ್ನು ಈಡೇರಿಸಿದೆ. ರಾಜಧಾನಿ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚಾರ ನಡೆಸುವ ಜನರು ಹಲವು ದಿನಗಳಿಂದ ರೈಲಿನ ವೇಳಾಪಟ್ಟಿ ಬದಲಾವಣೆ ಮಾಡಲು ಬೇಡಿಕೆ ಇಟ್ಟಿದ್ದರು. ಈಗ ಇದಕ್ಕೆ ಇಲಾಖೆ ಒಪ್ಪಿದ್ದು, ದಕ್ಷಿಣ ಕನ್ನಡ ಜಿಲ್ಲಾ ರೈಲು ಯಾತ್ರಿಕರ ಸಂಘ ಇಲಾಖೆಗೆ ಧನ್ಯವಾದಗಳನ್ನು ಸಲ್ಲಿಕೆ ಮಾಡಿದೆ.
ಕರ್ನಾಟಕದ ಪ್ರಮುಖ ನಗರಗಳಾಗಿರುವ ಬೆಂಗಳೂರು, ಮಂಗಳೂರು ನಡುವೆ ಅವಿನಾಭಾವ ಸಂಬಂಧವಿದೆ. ಆದರೆ, ರಸ್ತೆ ಮಾರ್ಗದಲ್ಲಿ ಉಭಯ ನಗರಗಳ ನಡುವೆ ಸಂಚಾರ ನಡೆಸುವುದು ಎಷ್ಟು ತ್ರಾಸದಾಯಕ ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಾಗಿ ಬಹಳಷ್ಟು ಜನರು ರೈಲು ಸೇವೆಯನ್ನು ಅವಲಂಬಿಸಿದ್ದಾರೆ. ವಾಣಿಜ್ಯ, ಶೈಕ್ಷಣಿಕ, ಉದ್ಯೋಗ ಹೀಗೆ ಹಲವಾರು ವಿಷಯಗಳಿಗೆ ಜನರು ಈ ಎರಡು ನಗರಗಳಿಗೆ ಜನರು ಪ್ರಯಾಣ ಮಾಡುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ ಸೇರಿದಂತೆ ಹಲವಾರು ಧಾರ್ಮಿಕ ಕೇಂದ್ರಗಳಿವೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಇವರಿಗೆಲ್ಲ ಅನುಕೂಲವಾಗುವಂತೆ ಹಗಲು ಹೊತ್ತಿನಲ್ಲಿ ರೈಲು ಸಂಖ್ಯೆ 16575/16576 ಮಂಗಳೂರು ಜಂಕ್ಷನ್-ಯಶವಂತಪುರ ಜಂಕ್ಷನ್ ನಡುವೆ ಗೋಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು ಆರಂಭಿಸಲಾಗಿತ್ತು. ಮೊದಲು ಈ ರೈಲು ಮಂಗಳೂರಿನಿಂದ ಬೆಳಗ್ಗೆ 11.30ಕ್ಕೆ ಹೊರಟು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣವನ್ನು ರಾತ್ರಿ 8.45ಕ್ಕೆ ತಲುಪುತ್ತಿತ್ತು. ಈ ರೈಲಿನ ವೇಳಾಪಟ್ಟಿ ಪರಿಷ್ಕರಣೆ ಮಾಡಬೇಕು ಎಂದು ಬೇಡಿಕೆ ಇಡಲಾಗಿತ್ತು.
ರೈಲ್ವೆ ಇಲಾಖೆ ಒಪ್ಪಿಗೆ; ಈಗ ನೈಋತ್ಯ ರೈಲ್ವೆ ಮಂಗಳೂರು-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಜುಲೈ 16ರಿಂದ ಅನ್ವಯವಾಗುವಂತೆ ರೈಲು ಹೊಸ ವೇಳಾಪಟ್ಟಿಯಲ್ಲಿ ಸಂಚಾರ ನಡೆಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ರೈಲು ಸಂಖ್ಯೆ 16540 ಭಾನುವಾರ ಬೆಳಗ್ಗೆ 7ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಯಶವಂತಪುರಕ್ಕೆ ಸಂಜೆ 4.30ಕ್ಕೆ ತಲುಪಲಿದೆ.

ಮಂಗಳೂರು-ಯಶವಂತಪುರ ರೈಲು ಭಾನುವಾರ ಬೆಳಗ್ಗೆ 9.15ಕ್ಕೆ ಹೊರಟು ಯಶವಂತಪುರಕ್ಕೆ ರಾತ್ರಿ 8.20ಕ್ಕೆ ತಲುಪುತ್ತಿದೆ. ಆದರೆ ಈ ಸಾಪ್ತಾಹಿಕ ರೈಲಿನ ಪ್ರಯಾಣವು ಬಹಳ ಸುದೀರ್ಘ ಪ್ರಯಾಣವಾಗಿದೆ. ಜೊತೆಗೆ ವಾರದ ಮೂರು ದಿನ ಸಂಚರಿಸುವ ಗೋಮ್ಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರಿನಿಂದ ಮಧ್ಯಾಹ್ನ ಹೊರಟು ಬೆಂಗಳೂರಿಗೆ ರಾತ್ರಿ ತಲುಪುವ ಕಾರಣ ಅಲ್ಲಿಂದ ಮುಂದೆ ತಮ್ಮ ತಮ್ಮ ಸ್ಥಳಕ್ಕೆ ಹೋಗುವವರಿಗೆ ಕಷ್ಟವಾಗುತ್ತಿದೆ. ಇದರಿಂದ ಪ್ರಯಾಣಿಕರು ಈ ಎರಡು ರೈಲುಗಳನ್ನು ಮಂಗಳೂರಿನಿಂದ ಬೆಳಗ್ಗೆ 7 ಗಂಟೆಗೆ ಹೊರಟು ಬೆಂಗಳೂರಿಗೆ ಸಂಜೆ ಬೇಗ ತಲುಪುವಂತೆ ಬದಲಾವಣೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು.
ಪಶ್ಚಿಮ ಕರಾವಳಿ ರೈಲು ಯಾತ್ರಿಕರ ಸಂಘ ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಮನವಿ ಮಾಡಿತ್ತು. ಸಂಸದರು ವೇಳಾಪಟ್ಟಿ ಬದಲಿಸುವಂತೆ ನೈರುತ್ಯ ರೈಲ್ವೆ ವಲಯ ಹಾಗು ದಕ್ಷಿಣ ರೈಲ್ವೆ ವಲಯಕ್ಕೆ ಪತ್ರವನ್ನು ಬರೆದಿದ್ದರು. ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿಯ ಸದಸ್ಯರು ಹುಬ್ಬಳ್ಳಿಯ ನೈರುತ್ಯ ರೈಲ್ವೆ ಕಚೇರಿಗೆ ಫೆಬ್ರುವರಿ ತಿಂಗಳಿನಲ್ಲಿ ಭೇಟಿ ನೀಡಿ ಅಧಿಕಾರಿಗಳಿಗೂ ಈ ಕುರಿತು ಲಿಖಿತ ಮನವಿ ಸಹ ಸಲ್ಲಿಕೆ ಮಾಡಿದ್ದರು.
ಈಗಿರುವ ವೇಳಾಪಟ್ಟಿ ಪ್ರಕಾರ ರೈಲು ಸಂಚಾರ ನಡೆಸಿದರೆ ಮಂಗಳೂರು ಜಂಕ್ಷನ್-ಬೆಂಗಳೂರಿನ ಯಶವಂತಪುರ ನಡವಿನ 357 ಕಿ. ಮೀ. ಕ್ರಮಿಸಲು ರೈಲು 11 ಗಂಟೆ 5 ನಿಮಿಷ ತೆಗೆದುಕೊಳ್ಳುತ್ತಿದೆ. ಸುಬ್ರಹ್ಮಣ್ಯ-ಸಕಲೇಶಪುರ ಘಟ್ಟ ಪ್ರದೇಶದಲ್ಲಿ ಸಕಲೇಶಪುರ ಕಡೆಯಿಂದ ಬರುವ ರೈಲುಗಳ ಜೊತೆಗೆ ಕ್ರಾಸಿಂಗ್ ಮಾಡಲು ಒಂದು ಗಂಟೆ ನಿಲ್ಲಿಸಲಾಗುತ್ತಿದೆ. ಇದರಿಂದ ಪ್ರಯಾಣಿಕರ ಅಮೂಲ್ಯ ಸಮಯ ವ್ಯರ್ಥವಾಗುತ್ತಿದೆ ಎಂದು ಇಲಾಖೆಗೆ ಮಾಡಿದ ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.
-
Indian Railway: ಬಣ್ಣದಿಂದಲೇ ರೈಲುಗಳ ವ್ಯತ್ಯಾಸ ಗುರುತಿಸುವುದು ಹೇಗೆ? -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಹಿರಿಯ ನಾಗರಿಕರಿಗೆ ರೈಲ್ವೇ ನಿಯಮಗಳು 2026: ರಿಯಾಯಿತಿ ಇಲ್ಲದಿದ್ದರೂ ಸೌಲಭ್ಯಗಳು ಮುಂದುವರಿಕೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications