ಮಳೆಗಾಲ; ಶಿವಮೊಗ್ಗ ಜಿಲ್ಲೆಗೆ ಪ್ರವಾಸ ಹೋಗುವವರ ಗಮನಕ್ಕೆ

ಶಿವಮೊಗ್ಗ, ಜುಲೈ 26; ನೈಋತ್ಯ ಮುಂಗಾರು ಮಳೆ ಶಿವಮೊಗ್ಗ ಜಿಲ್ಲೆಯಲ್ಲಿಯೂ ತಡವಾಗಿ ಆರಂಭವಾಗಿದೆ. ಆದರೆ ಜುಲೈನಲ್ಲಿ ಉತ್ತಮ ಮಳೆಯಾಗುತ್ತಿದೆ. ಜಿಲ್ಲೆಯ ನದಿ, ಹಳ್ಳಗಳು ತುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರಕೃತಿ ಸೌಂದರ್ಯ ಇಮ್ಮಡಿಯಾಗಿದೆ. ಮಳೆ ಹಲವು ಪ್ರದೇಶಗಳಲ್ಲಿ ಹಾನಿಯನ್ನು ಸಹ ಉಂಟು ಮಾಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಶಿವಮೊಗ್ಗದ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ.

Monsoon Rain Shivamogga Police Direction For Tourists

ಭಾರೀ ಮಳೆ ಹಿನ್ನಲೆಯಲ್ಲಿ ಶಿವಮೊಗ್ಗದ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸರು ಮನವಿಯೊಂದನ್ನು ಮಾಡಿದ್ದಾರೆ. ಜಿಲ್ಲಾ ಪ್ರವಾಸಕ್ಕೆ ಯೋಜನೆ ರೂಪಿಸುತ್ತಿರುವ ಜನರು ಒಮ್ಮೆ ಈ ಬಗ್ಗೆ ಮಾಹಿತಿ ತಿಳಿಯುವುದು ಅಗತ್ಯವಾಗಿದೆ.

ಪೊಲೀಸರ ಪ್ರಕಟಣೆ; ಶಿವಮೊಗ್ಗ ಜಿಲ್ಲಾ ಪೊಲೀಸರು ಸಾರ್ವಜನಿಕರ ಗಮನಕ್ಕೆ ಎಂದು ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ನದಿ, ಹಳ್ಳಗಳು ತುಂಬಿ, ಅಪಾಯಮಟ್ಟವನ್ನು ತಲುಪಿ ಹರಿಯುತ್ತಿವೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಅಣೆಕಟ್ಟು, ಜಲಪಾತ ಮತ್ತು ನದಿ ನೀರಿಗೆ ಇಳಿಯುವುದು, ಈಜಾಡುವುದು ಮತ್ತು ಸೆಲ್ಪಿ ತೆಗೆದುಕೊಳ್ಳುವುದನ್ನು ಹಾಗೂ ಈ ರೀತಿಯ ಅಪಾಯಕಾರಿ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಭೇಟಿಯನ್ನು ನೀರಿನ ಹರಿವು ಕಡಿಮೆಯಾಗುವವರೆಗೆ ಸಂಭಂದಪಟ್ಟ ಇಲಾಖೆಗಳಿಂದ ನಿಷೇಧಿಸಲಾಗಿರುತ್ತದೆ ಎಂದು ಹೇಳಿದೆ.

ಈ ಬಗ್ಗೆ ಈಗಾಗಲೇ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸೂಚನಾ ಫಲಕಗಳನ್ನು ಅಳವಡಿಸಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿರುತ್ತದೆ. ಆದ್ದರಿಂದ ಸಾರ್ವಜನಿಕರು ನೀರಿನ ಹರಿವು ಕಡಿಮೆಯಾಗುವವರೆಗೆ ನಿಷೇಧಿತ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡದೇ ಸಹಕರಿಸಲು ಕೋರಿದೆ ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲಾಧಿಕಾರಿ ಮಾಹಿತಿ; ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ಶಿವಮೊಗ್ಗದಲ್ಲಿನ ಮಳೆಯ ಬಗ್ಗೆ ಹೇಳಿಕೆ ನೀಡಿದ್ದಾರೆ. "2023ರ ಮಾರ್ಚ್ 1 ರಿಂದ ಮೇ 31 ರವರೆಗೆ ಜಿಲ್ಲೆಯಲ್ಲಿ 82 ಮಿ.ಮೀ ಮಳೆಯಾಗಿದೆ. ವಾಡಿಕೆ ಮಳೆ 127 ಇದ್ದು ಶೇ.36 ಮಳೆ ಕೊರತೆ ಕಂಡು ಬಂದಿದೆ" ಎಂದರು.

"ಜೂನ್ ತಿಂಗಳಿನಲ್ಲಿ 472 ಮಿ.ಮೀ ವಾಡಿಕೆಗೆ 120 ಮಿ.ಮೀ ವಾಸ್ತವವಾಗಿ ಮಳೆಯಾಗಿದ್ದು ಶೇ.75 ಮಳೆ ಕೊರತೆ ಕಂಡುಬಂದಿದೆ. ಆದರೆ ಕಳೆದ 24 ಗಂಟೆಯಲ್ಲಿ 22.3 ಮಿ.ಮೀ ವಾಡಿಕೆಗೆ 58.4 ಮಿ.ಮೀ ಮಳೆಯಾಗಿದ್ದು ಜಿಲ್ಲೆಯಲ್ಲಿ ಸರಾಸರಿ 162 ಮಿ.ಮೀ ಮಳೆಯಾಗಿದೆ" ಎಂದು ಬುಧವಾರ ಮಾಹಿತಿ ನೀಡಿದರು.

ಜನವರಿಯಿಂದ ಇಲ್ಲಿಯವರೆಗೆ 1223.5 ಮಿ.ಮೀ ವಾಡಿಕೆ ಮಳೆಗೆ 949.5 ಮಿ.ಮೀ ವಾಸ್ತವ ಮಳೆಯಾಗಿದ್ದು ಶೇ.22 ಮಳೆ ಕೊರತೆಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಶಿವಮೊಗ್ಗದಲ್ಲಿರುವ ಲಿಂಗನಮಕ್ಕಿ ಜಲಾಶಯದ ಗರಿಷ್ಟ ಮಟ್ಟ 1819 ಅಡಿ, ಕಳೆದ ವರ್ಷ 1798.1 ಅಡಿ ಭರ್ತಿಯಾಗಿದ್ದು ಹಾಲಿ 1778.9 ಅಡಿ ಭರ್ತಿಯಾಗಿದೆ. ಭದ್ರಾ ಜಲಾಶಯದ ಗರಿಷ್ಠ ಮಟ್ಟ 186 ಅಡಿ ಇದ್ದು ಕಳೆದ ವರ್ಷ ಈ ವೇಳೆಗೆ 181.95 ಅಡಿ ಭರ್ತಿಯಾಗಿತ್ತು. ಹಾಲಿ 152.9 ಅಡಿ ನೀರಿದೆ.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ಮತ್ತು ಅಡಿಕೆ ಬೆಳೆಯ ಎಲೆಚುಕ್ಕಿ ರೋಗದ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡರು. "ಪ್ರಸಕ್ತ ವಾರದಲ್ಲಿ ಜಿಲ್ಲೆಯಲ್ಲಿ ಮಳೆ ತೀವ್ರತೆ ಹೆಚ್ಚಿದ್ದು, ಅಧಿಕಾರಿಗಳು ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ಶೀಘ್ರವಾಗಿ ಮತ್ತು ಉದಾರವಾಗಿ ಸ್ಪಂದಿಸಿ ನಿಯಮಾನುಸಾರ ಪರಿಹಾರಗಳನ್ನು ಒದಗಿಸಬೇಕೆಂದು" ಎಂದು ಸೂಚನೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+