ಹಬ್ಬದ ಪ್ರಯುಕ್ತ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ

ಬೆಂಗಳೂರು, ಸೆ. 2 : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಂಚಾರ ಒತ್ತಡ ಹೆಚ್ಚುವುದರಿಂದ ಮಂಗಳವಾರ ಮತ್ತು ಬುಧವಾರ (ಸೆ.2 ಮತ್ತು 3 ) ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 500ಕ್ಕೂ ಹೆಚ್ಚುವರಿ ಬಸ್ ಗಳನ್ನು ವ್ಯವಸ್ಥೆ ಮಾಡಿದೆ.

ಮಂಗಳವಾರ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ದಾವಣಗೆರೆ, ರಾಯಚೂರು, ಗುಲ್ಬರ್ಗಾ, ಬಳ್ಳಾರಿ ಮುಂತಾದ ಪ್ರದೇಶಗಳಿಗೆ ಹೆಚ್ಚುವರಿ 300 ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರು ರಸ್ತೆಯ ಸೆಟಲೈಟ್ ಬಸ್ ನಿಲ್ದಾಣದಿಂದ ಮೈಸೂರು ಮಾರ್ಗದ ಕಡೆಹೆಚ್ಚುವರಿ 100 ಬಸ್, ಶಾತಿ ನಗರ ಬಸ್ ನಿಲ್ದಾಣದಿಂದ ತಮಿಳುನಾಡಿನ ಮಧುರೈ, ಕುಂಭಕೋಣಂ, ತಿರುಚಿ, ಕೊಯಮತ್ತೂರು, ಆಂಧ್ರದ ಕಡೆ ಹೆಚ್ಚುವರಿಯಾಗಿ 100 ಬಸ್ ವ್ಯವಸ್ಥೆ ಮಾಡಲಾಗಿದೆ.

ಅದೇ ರೀತಿ ಸೆ. 3 ರ ಬುಧವಾರ ಕೆಂಪೇಗೌಡ ಬಸ್ ನಿಲ್ದಾಣದಿಂದ ಸಂಚಾರ ಒತ್ತಡಕ್ಕೆ ಅನುಗುಣವಾಗಿ ವಿವಿಧ ಪ್ರದೇಶಗಳಿಗೆ 100 ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಇದರ ಜತೆಗೆ ದಿನವಹಿ ಪ್ರಯಾಣಿಸುವ ಬಸ್ ಗಳ ಸಂಚಾರ ಎಂದಿನಂತೆ ಇರುತ್ತದೆ. ಜತೆಗೆ ಹೆಚ್ಚುವರಿ ಬಸ್ ಗಳಿಗೂ ಮುಂಗಡ ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+