ಕರ್ನಾಟಕ ಭಾರತ್ ಗೌರವ್ ದಕ್ಷಿಣ ಯಾತ್ರೆ ಪ್ಯಾಕೇಜ್: ದರ, ಸ್ಥಳಗಳು
ಬೆಂಗಳೂರು, ಜೂನ್ 11; ಕರ್ನಾಟಕದ ಧಾರ್ಮಿಕ ದತ್ತಿ ಇಲಾಖೆ 'ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ' ಪ್ಯಾಕೇಜ್ ಘೋಷಣೆ ಮಾಡಿದೆ. ಈ ಪ್ಯಾಕೇಜ್ ಅಡಿ ಪ್ರತಿ ಯಾತ್ರಾರ್ಥಿಗಳಿಗೆ 5 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ.
ಭಾರತ್ ಗೌರವ್ ದಕ್ಷಿಣ ಕ್ಷೇತ್ರ ಯಾತ್ರೆ ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಒಳಗೊಂಡಿದೆ. ವಿಶೇಷ ರೈಲುಗಳು 23/6/2024ರಂದು ಹೊರಟು 28/6/2024ಕ್ಕೆ ವಾಪಸ್ ಆಗಲಿವೆ. 1/7/2024ರಂದು ಹೊರಟು, 6/7/2024ಕ್ಕೆ ವಾಪಸ್ ಆಗಲಿವೆ.

ಈ ರೈಲುಗಳನ್ನು ಬೆಳಗಾವಿ, ಹುಬ್ಬಳ್ಳಿ, ಬೀರೂರು, ತುಮಕೂರು, ಹಾವೇರಿ, ದಾವಣಗೆರೆ ಮತ್ತು ಬೆಂಗಳೂರು ನಗರದ ಯಶವಂತಪುರದಲ್ಲಿ ಹತ್ತಬಹುದು/ ಇಳಿಯಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ಯಾಕೇಜ್ ಮೊತ್ತ: 'ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ' ಪ್ಯಾಕೇಜ್ ಒಟ್ಟು ಮೊತ್ತ 15,000 ರೂ.ಗಳು. ಕರ್ನಾಟಕ ಸರ್ಕಾರದಿಂದ ಸಹಾಯಧನ 5 ಸಾವಿರ ರೂ.ಗಳು. ಯಾತ್ರಿಕರು ಪಾವತಿ ಮಾಡಬೇಕಾದ ಮೊತ್ತ 10,000 ರೂ.ಗಳು. ಯಾತ್ರಾರ್ಥಿಗಳ ಆರೋಗ್ಯ ಹಾಗೂ ಕ್ಷೇಮದ ದೃಷ್ಟಿಯಿಂದ ವೈದ್ಯಕೀಯ ವ್ಯವಸ್ಥೆಯನ್ನು ಒದಗಿಸಲಾಗಿದೆ.
ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಪ್ರವರ್ಗ 'ಸಿ' ಅಧಿಸೂಚಿತ ದೇವಾಲಯ/ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು/ ನೌಕರರು ಮತ್ತು ಅವರ ಕುಟುಂಬದ ಒಬ್ಬ ಸದಸ್ಯರನ್ನು ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ ಯೋಜನೆಯಡಿ ಉಚಿತವಾಗಿ ಯಾತ್ರೆಗೆ ಕಳುಹಿಸಲಾಗುತ್ತದೆ.
ಈ ಯಾತ್ರೆಯಲ್ಲಿ ಸಂಚಾರ ನಡೆಸಲು ಜನರು ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಬುಕ್ಕಿಂಗ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 8595931291, 8595931292, 8595931294 ಸಂಖ್ಯೆಗೆ ಸಂಪರ್ಕಿಸಬಹುದು.
ದಕ್ಷಿಣ ಕ್ಷೇತ್ರಗಳ ಯಾತ್ರೆ ಪ್ಯಾಕೇಜ್ ವಿಶೇಷತೆಗಳು
* ರಾಮೇಶ್ವರ- ರಾಮೇಶ್ವರ ದೇವಾಲಯ
* ಕನ್ಯಾಕುಮಾರಿ - ಭಗವತಿ ದೇವಾಲಯ
* ಮದು ರೈ- ಶ್ರೀ ಮೀನಾಕ್ಷಿ ದೇವಾಲಯ
* ತಿರುವನಂತಪುರಂ - ಶ್ರೀ ಅನಂತಪದ್ಮನಾಭ ಸ್ವಾಮಿ ದೇವಾಲಯ ದರ್ಶನ
2022ರ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದರು. ಈ ಸೌಲಭ್ಯವನ್ನು ಪಡೆದ ಮೊದಲ ರಾಜ್ಯ ಕರ್ನಾಟಕವಾಗಿತ್ತು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗು ಪ್ರಯಾಗ್ ರಾಜ್‌ಗೆ ಭೇಟಿ ನೀಡುವುದು ಸುಲಭವಾಗುತ್ತದೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು.
ಈ ಯಾತ್ರೆ ಯಶಸ್ಸಿನ ಬಳಿಕ ಕರ್ನಾಟಕದ ಧಾರ್ಮಿಕ ದತ್ತಿ ಇಲಾಖೆ 'ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ'ಯ ವಿವಿಧ ಪ್ಯಾಕೇಜ್ ಘೋಷಣೆ ಮಾಡಿತು. ಪ್ಯಾಕೇಜ್ ಅಡಿ ಯಾತ್ರಾರ್ಥಿಗಳಿಗೆ ಸಹಾಯಧನ ಘೋಷಣೆ ಮಾಡಲಾಗಿದೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
BMTC ಬಸ್ಗಳಲ್ಲಿ ಟಿಕೆಟ್ ಇಲ್ಲದೆ ಓಡಾಡುವವರೇ ಎಚ್ಚರ! ಫೆಬ್ರವರಿಯಲ್ಲೇ 5 ಲಕ್ಷ ರೂ.ದಂಡ ವಸೂಲಿ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications