ಪ್ರವಾಸಿಗರಿಗೆ ‘ಮೈಸೂರು’ ಇಷ್ಟವಾಗೋದು ಇದೇ ಕಾರಣಕ್ಕೆ, ಇಲ್ಲಿವೆ ಇಂಟರೆಸ್ಟಿಂಗ್ ಸಂಗತಿಗಳು
ಮೈಸೂರು, ಅಕ್ಟೋಬರ್, 21: ಮೈಸೂರಿನಲ್ಲೀಗ ದಸರಾ ಸಂಭ್ರಮ ಮನೆ ಮಾಡಿದ್ದು, ಐತಿಹಾಸಿಕ ಜಂಬೂಸವಾರಿಗಾಗಿ ಕ್ಷಣಗಣನೆ ಆರಂಭವಾಗಿದೆ. ವರ್ಷದಿಂದ ವರ್ಷಕ್ಕೆ ದಸರಾ ರಂಗು ಇಮ್ಮಡಿಗೊಳ್ಳುತ್ತಿದ್ದು, ಪ್ರವಾಸಿಗರ ದಂಡು ಹೆಚ್ಚುತ್ತಲೇ ಹೋಗುತ್ತಿದೆ. ನಗರಕ್ಕೊಂದು ಸುತ್ತು ಹೊಡೆದರೆ ದಸರಾ ರಂಗು ಮೇಳೈಸುತ್ತಿರುವುದು ಎದ್ದು ಕಾಣಿಸುತ್ತಿದೆ.
ಮೈಸೂರು ನಗರ ಸದಾ ಪ್ರವಾಸಿಗರನ್ನು ಸೆಳೆಯುವ ಪ್ರವಾಸಿ ತಾಣವಾಗಿದ್ದು, ಅದರಲ್ಲೂ ದಸರಾ ಸಮಯದಲ್ಲಿ ದೇಶ ವಿದೇಶಗಳ ಪ್ರವಾಸಿಗರು ಇಲ್ಲಿ ಆಗಮಿಸಿ ಖುಷಿ ಪಡುತ್ತಾರೆ. ದಸರಾದ ಹತ್ತು ದಿನಗಳ ಕಾಲ ನಗರದಲ್ಲಿ ಜನಜಾತ್ರೆಯೇ ನೆರೆಯುತ್ತದೆ. ಈ ವೇಳೆ ಹಳ್ಳಿಯಲ್ಲಿನ ಜನ ನಗರದಲ್ಲಿರುವ ಸಂಬಂಧಿಕರ ಮನೆಗೆ ಧಾವಿಸಿ ಒಂದಷ್ಟು ದಿನವಿದ್ದು ದಸರಾ ಮುಗಿಸಿ ಊರಿಗೆ ತೆರಳುತ್ತಾರೆ.

ಈ ಬಾರಿ ಶಕ್ತಿಯೋಜನೆಯಡಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವ ಕಾರಣ ಸುತ್ತಮುತ್ತಲಿನ ಜಿಲ್ಲೆಗಳಿಂದ ಮಹಿಳೆಯರು ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ನಗರಕ್ಕೆ ಆಗಮಿಸಿ ದಸರಾ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆಹಾರ ಮೇಳ, ದಸರಾ ವಸ್ತುಪ್ರದರ್ಶನ, ಫಲಪುಷ್ಪ ಪ್ರದರ್ಶನ, ಚಲನಚಿತ್ರ ಪ್ರದರ್ಶನ, ಪುಸ್ತಕ ಮೇಳವಲ್ಲದೆ, ಸಂಜೆ ಹೊತ್ತು ನಗರದಲ್ಲಿ ಅಡ್ಡಾಡುತ್ತಾ ವಿದ್ಯುದ್ದೀಪದ ಅಲಂಕಾರವನ್ನು ಕಣ್ತುಂಬಿಸಿಕೊಳ್ಳುತ್ತಿದ್ದಾರೆ.
25 ರಾಜರಾಳಿದ ಮೈಸೂರು ಸಂಸ್ಥಾನ
ಹಾಗೆನೋಡಿದರೆ ಮೈಸೂರು ಜಗತ್ತಿನ ಸುಂದರ ನಗರಗಳಲ್ಲಿ ಒಂದು ಎಂಬ ಹೆಮ್ಮೆಯಿದೆ. ಹೀಗಾಗಿಯೇ ದೇಶ ವಿದೇಶಗಳ ಜನ ಹೆಚ್ಚಿನ ಪ್ರಮಾಣದಲ್ಲಿ ಇಲ್ಲಿಗೆ ಬರುತ್ತಾರೆ. ಜೊತೆಗೆ ಸಾಂಸ್ಕೃತಿಕ ನಗರಿ, ಅರಮನೆಗಳ ನಗರಿ, ಪಾರಂಪರಿಕ ನಗರಿ, ನಿವೃತ್ತರ ಸ್ವರ್ಗ ಹೀಗೆ ವಿವಿಧ ಹೆಸರುಗಳಿಂದಲೂ ಪ್ರಸಿದ್ಧವಾಗಿದೆ. ಜೊತೆಗೆ ವಿಶ್ವದ ಹಲವು ಪ್ರಥಮಗಳಿಗೂ ಇಲ್ಲಿ ಸಾಕ್ಷಿ ಸಿಗುತ್ತದೆ. ಮೈಸೂರು ಇಷ್ಟೆಲ್ಲ ಪ್ರಸಿದ್ಧಿ ಪಡೆಯಲು ಇಲ್ಲಿ ಆಳ್ವಿಕೆ ಮಾಡಿರುವ ಮಹಾರಾಜರೇ ಕಾರಣರಾಗಿದ್ದಾರೆ.
ಮೈಸೂರು ಸಂಸ್ಥಾನವನ್ನು ಆಳಿದ ಅರಸರು ಮೈಸೂರು ನಗರಕ್ಕೆ ನೀಡಿರುವ ಕೊಡುಗೆ ಅಪಾರ. 1399 ರಿಂದ 1950ರವರೆಗೆ ಸುಮಾರು 550 ವರ್ಷಗಳ ಕಾಲ 25ಮಂದಿ ಮಹಾರಾಜರು ಈ ಸಂಸ್ಥಾನವನ್ನು ಆಳಿದ್ದಾರೆ. ಇವರಲ್ಲಿ ಅನೇಕ ರಾಜರು ಮೇಧಾವಿಗಳೂ, ಶೂರರೂ, ಸ್ವತಃ ಸಾಹಿತಿಗಳೂ, ಕವಿಗಳು, ದೇಶಭಕ್ತರೂ, ಆಡಳಿತದಲ್ಲಿ ಮಹಾದಕ್ಷರೂ ಆಗಿದ್ದರಿಂದ ಕಲೆ, ಸಂಸ್ಕೃತಿ ಬೆಳೆಯಲು ಸಾಧ್ಯವಾಯಿತು.
70 ಹಳ್ಳಿಗಳ ಮೈಸೂರು ನಾಡು
ಕೇವಲ ಪಾಳೇಗಾರ ಮಟ್ಟದಲ್ಲಿದ್ದ ಮೈಸೂರನ್ನು ತಮ್ಮ ಧೈರ್ಯ ಪರಾಕ್ರಮಗಳಿಂದ ರಾಜ್ಯಮಟ್ಟಕ್ಕೆ ಕೊಂಡೊಯ್ದು ಇಡೀ ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಕೀರ್ತಿಯನ್ನು ಬೆಳಗಿಸಿದ್ದು ಇಲ್ಲಿನ ಮಹಾರಾಜರ ಸಾಧನೆಯಾಗಿದೆ. ಜೊತೆಗೆ ಇಲ್ಲಿನ ಮಹಾರಾಜರು ಆಚರಣೆಗೆ ತಂದ ದಸರಾ ಇವತ್ತು ವಿಶ್ವವಿಖ್ಯಾತಿಯಾಗಲು ಸಾಧ್ಯವಾಗಿದೆ. ಸುಮಾರು 70 ಹಳ್ಳಿಗಳಿಂದ ಕೂಡಿದ "ಮೈಸೂರು ನಾಡು" ಆಗಿದ್ದ ಮೈಸೂರು ಇವತ್ತು ಬೃಹತ್ ನಗರವಾಗಿ ಬೆಳೆದಿದ್ದರ ಹಿಂದೆ ಮಹಾರಾಜರ ಕೊಡುಗೆ ಜೊತೆಗೆ ಹಲವರ ಶ್ರಮವಿದೆ.
ಮೈಸೂರು ನಗರವು ಬೆಟ್ಟ, ಅರಮನೆ, ಸುಂದರ ಉದ್ಯಾನವನ, ಕೆರೆ, ಪಾರಂಪರಿಕ ಕಟ್ಟಡಗಳಿಂದ ಹಾಗೂ ದೊಡ್ಡ ದೊಡ್ಡ ರಸ್ತೆಗಳಿಂದ ಕೂಡಿದ ಸುಂದರ ನಗರವಾಗಿದೆ. ದೊಡ್ಡ ದೊಡ್ಡ ಕೈಗಾರಿಕೆಗಳು ಇಲ್ಲಿ ಇಲ್ಲವಾದರೂ ಉತ್ತಮ ವ್ಯಾಪಾರ ಕೇಂದ್ರವಾಗಿದೆ. ಜೊತೆಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಆಗುವಂತಹ ಎಲ್ಲಾ ರೀತಿಯ ಕಾಲೇಜುಗಳು ಇಲ್ಲಿವೆ. ಸಮುದ್ರಮಟ್ಟದಿಂದ ಸುಮಾರು 2,525 ಅಡಿ ಎತ್ತರದಲ್ಲಿದ್ದು, ಬೇಸಿಗೆಯಲ್ಲಿ ಹೆಚ್ಚು ಸೆಖೆಯೂ ಇಲ್ಲದೆ, ಚಳಿಗಾಲದಲ್ಲಿ ಹೆಚ್ಚು ಚಳಿಯೂ ಇಲ್ಲದೆ ಆಹ್ಲಾದಕರ ವಾತಾವರಣದಿಂದ ಕೂಡಿರುತ್ತದೆ.
ಐತಿಹಾಸಿಕ ಕ್ಷಣಗಳಿಗೆ ಕಾಯುವ ಜನ
ದೂರದಿಂದ ಬರುವ ಪ್ರವಾಸಿಗರನ್ನು ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆ, ಸುಂದರ ಬೃಂದಾವನದ ಕೃಷ್ಣರಾಜಸಾಗರ ಜಲಾಶಯ, ಮೃಗಾಲಯ, ಚಾಮುಂಡಿ ಬೆಟ್ಟ, ಸುಂದರ ಕೆರೆಗಳಲ್ಲದೆ, ವಿವಿಧ ಐತಿಹಾಸಿಕ ದೇವಾಲಯಗಳು, ಮಸೀದಿಗಳು, ಚರ್ಚ್‌ಗಳು ಪ್ರವಾಸಿ ತಾಣಗಳಾಗಿವೆ. ಇನ್ನು ಮೈಸೂರಿಗೆ ಹತ್ತಿರದಲ್ಲಿ ಹಲವು ಪ್ರವಾಸಿ ತಾಣಗಳು ಇರುವುದರಿಂದ ಪ್ರವಾಸಿಗರು ಮೈಸೂರನ್ನು ಕೇಂದ್ರವಾಗಿಟ್ಟುಕೊಂಡು ಎಲ್ಲೆಡೆ ಸುತ್ತಾಡಿ ಬರುತ್ತಾರೆ.
ಹೊರಗಿನಿಂದ ಬರುವವರಿಗೆ ಮೈಸೂರಿನ ವಿಶೇಷ ತಿನಿಸುಗಳಾದ ಮೈಸೂರು ಮಸಾಲೆ, ಮೈಸೂರು ಪಾಕ, ಮೈಸೂರು ಇಡ್ಲಿ, ಪಾರಂಪರಿಕವಾದ ಮೈಸೂರು ಮಲ್ಲಿಗೆ, ಮೈಸೂರು ಪೇಟ, ಮೈಸೂರು ವೀಳ್ಯದೆಲೆ, ಮೈಸೂರು ಸಿಲ್ಕ್ ಹೀಗೆ ಎಲ್ಲವೂ ಮೈಸೂರಿನ ವಿಶೇಷತೆಗೆ ಸಾಕ್ಷಿಯಾಗಿದ್ದು, ದೇಶ ವಿದೇಶಗಳಲ್ಲಿ ಮೈಸೂರಿನ ಹೆಸರು ಪ್ರಜ್ವಲಿಸುವಂತೆ ಮಾಡಿದೆ. ಈಗಂತು ದಸರಾ ಗುಂಗಿನಲ್ಲಿ ಮೈಸೂರು ನಗರ ತೇಲುತ್ತಿದ್ದು, ಜಂಬೂಸವಾರಿಯ ಸುಂದರ ಕ್ಷಣಗಳಿಗೆ ಜನ ಕಾತರದಿಂದ ಕಾಯುತ್ತಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications