Namma metro: ಬೆಂಗಳೂರು ಹೊರವಲಯದ ಈ ಭಾಗದವರೆಗೂ ಮೆಟ್ರೋ ವಿಸ್ತರಣೆ
ದೇವನಹಳ್ಳಿ, ನವೆಂಬರ್, 13: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಲೇ ಇದೆ. ಅಲ್ಲದೆ ಐಟಿ ಉದ್ಯೋಗಿಗಳು ಸರಿದಂತೆ ಸಾರ್ವಜನಿಕರ ಒತ್ತಾಯದ ಮೇರೆಗೆ ಇಲ್ಲಿನ ಸುತ್ತಲಿನ ವಿವಿಧ ನಗರಗಳಿಗೂ ವಿಸ್ತರಣೆ ಆಗುತ್ತಲೇ ಇದೆ. ಇದೀಗ ನಗರದ ಹೊರವಯಲ್ಲಿರುವ ಈ ರ್ಮಾಗಕ್ಕೂ ಮೆಟ್ರೋ ವಿಸ್ತರಣೆ ಮಾಡಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ಮಾಹಿತಿ ನೀಡಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಹೊರ ವಲಯದಲ್ಲಿರುವ ದೇವನಹಳ್ಳಿ ಪಟ್ಟಣಕ್ಕೆ ಮೆಟ್ರೋ ರೈಲು & ಕಾವೇರಿ ನೀರು ಒದಗಿಸಲು ಪ್ರಯತ್ನ ಮಾಡುತ್ತೇನೆ. ಸರ್ಕಾರದ ಹಂತದಲ್ಲೂ ಈ ಕುರಿತು ಚರ್ಚೆ ಮಾಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮಾಹಿತಿ ನೀಡಿದ್ದಾರೆ.
ತಾಲ್ಲೂಕು ವಕೀಲ ಸಂಘ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ದೇವನಹಳ್ಳಿ ಜಿಲ್ಲಾ ಕೇಂದ್ರ ಕುರಿತು ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕಂದಾಯ ಸಚಿವರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡರು ದೇವನಹಳ್ಳಿ ಬೀರಸಂದ್ರ ಬಳಿ ಜಿಲ್ಲಾಡಳಿತ ಭವನ ನಿರ್ಮಿಸಿ, ಬೆಂಗಳೂರಿನಲ್ಲಿದ್ದ ಕಚೇರಿಗಳನ್ನು ಸ್ಥಳಾಂತರ ಮಾಡಿಸಿದ್ದಾರೆ. ಈ ಕುರಿತು ಮಹತ್ವದ ಸಭೆ ನಡೆಸಿ ಮಾರ್ಗದರ್ಶನ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು. ಇನ್ನು ನಾನು ನ್ಯಾಯವಾದಿಯಾಗಿದ್ದಾಗ ಅಂದಿನ ವಕೀಲರ ಪ್ರಯತ್ನದಿಂದ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದೇನೆ ಎಂದರು.

ನ್ಯಾಯಾಲಯ ಸಂಕೀರ್ಣ ಸ್ಥಾಪನೆ ಇರುವ ತೊಡಕು ನಿವಾರಿಸಿಕೊಂಡರೇ 15 ಲಕ್ಷ ರೂಪಾಯಿ ಅನುದಾನವನ್ನು ಕಟ್ಟಡ ನಿರ್ಮಾಣಕ್ಕೆ ನೀಡಲಾಗುವುದು. ಹಾಗೆಯೇ ಇಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಕುರಿತು ಸಿಎಸ್‌ಆರ್ ನಿಧಿಯಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಮಾಡಲಾಗುತ್ತದೆ. ಇದರಿಂದ ಭವಿಷ್ಯದಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರಿ ಆಗಲಿದೆ ಎಂದು ತಿಳಿಸಿದರು.
ಮೊಬೈಲ್ ಕ್ಯೂಆರ್ ಕೋಡ್ ಗ್ರೂಪ್ ಟಿಕೆಟ್ ಸೌಲಭ್ಯ
ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಮೆಟ್ರೋ ನಿಲ್ದಾಣದ ಒಳಗೆ ಪ್ರತಿನಿತ್ಯವೂ ಟಿಕೆಟ್ ಪಡೆಯಲು ಸರತಿ ಸಾಲಿನಲ್ಲಿ ನಿಲ್ಲಬೇಕಾಗಿದ್ದು, ಇದರಿಂದ ಪ್ರಯಾಣಿಕರು ತುಂಬಾ ಕಿರಿಕಿರಿ ಅನುಭವಿಸುವಂತಾಗಿತ್ತು. ಆದ್ದರಿಂದ ಇದೀಗ ಟಿಕೆಟ್ ಕೌಂಟರ್‌ಗಳಲ್ಲಿ ಟೋಕನ್ ಖರೀದಿಸಲು ಸರತಿ ನಿಲ್ಲುವುದನ್ನು ತಪ್ಪಿಸಲು ಬಿಎಂಆರ್‌ಸಿಎಲ್ ಇದೇ ನವೆಂಬರ್ 16ರಿಂದ ಹೊಸ ಸೌಲಭ್ಯ ಕಲ್ಪಿಸಲು ಮುಂದಾಗಿದೆ.
ಸರತಿ ಸಾಲಿನಲ್ಲಿ ನಿಲ್ಲುವ ಬದಲು ಪ್ರಯಾಣಿಕರು ಮನೆ ಕಚೇರಿ ಹಾಗೂ ತಾವಿರುವ ಸ್ಥಳದಿಂದಲೇ ಮುಂಗಡವಾಗಿ ಮೊಬೈಲ್ ಕ್ಯೂಆರ್ ಟಿಕೆಟ್ ಪಡೆಯಬುದು. ಇದರಿಂದ ಸಮಯವೂ ಉಳಿತಾಯವಾಗಲಿದೆ ಹಾಗೂ ಟೋಕನ್ ದರಕ್ಕಿಂತ ಶೇಕಡಾ 5ರಷ್ಟು ರಿಯಾಯಿತಿ ಪಡೆಯಬಹುದಾಗಿದೆ ಎಂದು BMRCL ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಮ್ಮ ಮೆಟ್ರೋ ನವೆಂಬರ್ 16ರಿಂದಲೇ ಮೊಬೈಲ್ ಕ್ಯೂಆರ್ ಕೋಡ್ ಗ್ರೂಪ್ ಟಿಕೆಟ್‌ಗಳನ್ನು ಪರಿಚಯಿಸಲು ಮುಂದಾಗಿದೆ. ಪ್ರಸ್ತುತ ಮೊಬೈಲ್ ಕ್ಯೂಆರ್ ಟಿಕೆಟ್‌ಗಳನ್ನು ಮೊಬೈಲ್ ಅಪ್ಲಿಕೇಷನ್‌ಗಳ ಮೂಲಕ ಒಬ್ಬ ಪ್ರಯಾಣಿಕನಿಗೆ ಒಂದು ಟಿಕೆಟ್ ನೀಡಲಾಗುತ್ತಿದೆ. ಗುಂಪು ಟಿಕೆಟ್‌ಗಳನ್ನೂ ಕ್ಯೂಆರ್ ಕೋಡ್ ಮೂಲಕ ನೀಡಬೇಕು ಎಂದು ಪ್ರಯಾಣಿಕರಿಂದ ಬೇಡಿಕೆಗಳು ಬಂದಿದ್ದವು. ಈ ಹಿನ್ನೆಲೆ ಮೊಬೈಲ್ ಕ್ಯೂಆರ್ ಗ್ರೂಪ್ ಟಿಕೆಟ್ ಜಾರಿಗೆ ತರಲಾಗಿದೆ. ಈ ಟಿಕೆಟ್‌ಗಳು ಟೋಕನ್ ದರಕ್ಕಿಂತ ಶೇಕಡಾ 5ರಷ್ಟು ರಿಯಾಯಿತಿಯನ್ನು ಹೊಂದಿರುತ್ತವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಮುಂದೆ ಒಂದೇ ಕ್ಯೂಆರ್ ಕೋಡ್‌ನಲ್ಲಿ 6 ಜನರು ಪ್ರಯಾಣ ಮಾಡಬಹುದಾಗಿದೆ. ಇದರಿಂದ ಟಿಕೆಟ್ ಕೌಂಟರ್ ಮುಂದೆ ನಿಲ್ಲುವ ಸಮಯ ಉಳಿತಾಯವಾಗಲಿದೆ. ಕುಟುಂಬ ಸಮೇತ ಪ್ರಯಾಣಿಸುವ ಪ್ರಯಾಣಿಕರಿಗೆ ಈ ಸೌಲಭ್ಯ ಸಹಾಯಕಾರಿ ಆಗಲಿದ್ದು, ಟೋಕನ್ ದರಕ್ಕಿಂತ ಶೇಕಡಾ 5ರಷ್ಟು ರಿಯಾಯಿತಿ ಸಿಗಲಿದೆ.
ಪ್ರಯಾಣಿಕರ ಸಂಖ್ಯೆಯನ್ನು ಎನ್ಕ್ರಿಪ್ಟ್ ಮಾಡಿದ ಬಳಿಕ ನಿಮಗೆ ಒಂದು ಕ್ಯೂಆರ್ ಟಿಕೆಟ್ ಸಿಗುತ್ತದೆ. ಇದೇ ಟಿಕೆಟ್ ಅನ್ನು ಎಫ್ಸಿ ಗೇಟ್ನಲ್ಲಿ 6 ಬಾರಿ ಸ್ಕ್ಯಾನ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆಗಮನ ಮತ್ತು ನಿರ್ಗಮನ ದ್ವಾರದಲ್ಲಿ ಸ್ಕ್ಯಾನ್ ಮಾಡುವ ಸೌಲಭ್ಯವೂ ಇರಲಿದೆ. ಈ ಮೂಲಕ ಪ್ರಯಾಣಿಕರ ಬೇಡಿಕೆಗೆ ನಮ್ಮ ಮೆಟ್ರೋ ಸ್ಪಂದನೆ ನೀಡಿದೆ.












Click it and Unblock the Notifications