Namma metro: ಡಿಸೆಂಬರ್‌ 31ರ ರಾತ್ರಿ ನಮ್ಮ ಮೆಟ್ರೋ ಸಂಚಾರ ಸಮಯ ವಿಸ್ತರಣೆ-ಮಾಹಿತಿ ತಿಳಿಯಿರಿ

ಬೆಂಗಳೂರು, ಡಿಸೆಂಬರ್‌, 28: ಹೊಸವರ್ಷಕ್ಕೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿಯಿವೆ. ಅದರಲ್ಲೂ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್‌ ರೋಡ್‌ ಚರ್ಚ್‌ ಸ್ಟ್ರೀಟ್‌ ಸೇರಿದಂತೆ ಇನ್ನು ಹಲವೆಡೆ ಡಿಸೆಂಬರ್‌ 31ರ ರಾತ್ರಿ ತುಂಬಾ ಸಂಭ್ರಾಮಾಚರಣೆ ಮಾಡುತ್ತಾರೆ. ಆದ್ದರಿಂದ ಈ ಮಾರ್ಗಗಳಲ್ಲಿ ಮೆಟ್ರೋ, ಹೆಚ್ಚುವರಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಹಾಗೆಯೇ ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ಡಿಸೆಂಬರ್‌ 31ರ ರಾತ್ರಿ ಮೆಟ್ರೋ ರೈಲು ಸಂಚಾರವನ್ನು ರಾತ್ರಿ 2 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ.

ಆದರೆ ಈ ಹೆಚ್ಚುವರಿ ಅವಧಿಯಲ್ಲಿ ಎಂ.ಜಿ. ರಸ್ತೆ ನಿಲ್ದಾಣವನ್ನು ತೆರೆಯದಂತೆ ಪೊಲೀಸ್‌ ಇಲಾಖೆ ಸೂಚನೆ ನೀಡಿದೆ. ಪ್ರತಿ ದಿನ ರಾತ್ರಿ 11:30ಕ್ಕೆ ಇದ್ದ ಕೊನೆಯ ರೈಲು ಸೇವೆಯನ್ನು ಡಿಸೆಂಬರ್‌ 31ರಂದು ರಾತ್ರಿ 2 ಗಂಟೆವರೆಗೂ ವಿಸ್ತರಣೆ ಮಾಡಲಾಗಿದೆ. ಈ ಸಮಯದಲ್ಲಿ ಪ್ರತಿ 15 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚಾರ ಮಾಡಲಿದೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.

Namma metro service will be extended On night of December 31, 2024

ಸುರಕ್ಷತೆ ದೃಷ್ಟಿಯಿಂದ ರಾತ್ರಿ 11:30ರ ನಂತರ ಎಂ.ಜಿ.ರಸ್ತೆಯ ಮೆಟ್ರೋ ನಿಲ್ದಾಣ ಪ್ರವೇಶ ನಿರ್ಬಂಧಿಸಬೇಕು ಎಂದು ಪೊಲೀಸ್‌ ಇಲಾಖೆ ಸೂಚಿಸಿರುವುದರಿಂದ ಅಂದು ಹೆಚ್ಚುವರಿ ಅವಧಿಯಲ್ಲಿ ಎಂ.ಜಿ.ರಸ್ತೆಯಿಂದ ಪ್ರಯಾಣ ಬೆಳೆಸುವ ಮೆಟ್ರೋ ಪ್ರಯಾಣಿಕರು ಟ್ರಿನಿಟಿ ಅಥವಾ ಕಬ್ಬನ್‌ ಪಾರ್ಕ್‌ ಮೆಟ್ರೋ ನಿಲ್ದಾಣಗಳಿಗೆ ತೆರಳಿ ಸಂಚಾರ ಮಾಡಬಹುದು ಎಂದು ಸೂಚನೆ ನೀಡಿದೆ.

ಟ್ರಿನಿಟಿ ಮತ್ತು ಕಬ್ಬನ್‌ ಪಾರ್ಕ್‌ ನಿಲ್ದಾಣಗಳಿಂದ ಪ್ರಯಾಣಿಸುವವರಿಗೆ 50 ರೂಪಾಯಿ ಮತ್ತು ಕಾಗದದ ಟಿಕೆಟ್‌ ವಿತರಣೆ ಮಾಡಲಾಗುವುದು. ಕಾಗದದ ಟಿಕೆಟ್‌ಗಳನ್ನು ಅಂದು ಮುಂಚಿತವಾಗಿಯೇ ಪಡೆಯಬೇಕು. ಮಧ್ಯರಾತ್ರಿ ಟಿಕೆಟ್‌ ವಿತರಣೆ ಇರುವುದಿಲ್ಲ. ಸ್ಮಾರ್ಟ್‌ ಕಾರ್ಡ್‌ ಮತ್ತು ಕ್ಯೂಆರ್‌ ಕೋಡ್‌ ಟಿಕೆಟ್‌ ಹೊಂದಿರುವ ಪ್ರಯಾಣಿಕರು ಎಂದಿನಂತೆ ರಿಯಾಯಿತಿ ದರದಲ್ಲಿ ಪ್ರಯಾಣಿಸಬಹುದಾಗುದೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಸಂದರ್ಭದಲ್ಲಿ ಎಂ.ಜಿ.ರಸ್ತೆಗೆ ಹೊಂದಿಕಂಡಿರುವ ಬ್ರಿಗೇಡ್‌ ರಸ್ತೆ, ಚರ್ಚ್‌ ಸ್ಟ್ರೀಟ್‌ಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರುತ್ತಾರೆ. ಪಕ್ಕದಲ್ಲೇ ಇರುವ ಮೆಟ್ರೋ ನಿಲ್ದಾಣದಲ್ಲಿ ಜನರನ್ನು ನಿಯಂತ್ರಿಸುವುದು ಕಷ್ಟ ಆಗುತ್ತದೆ. ಈ ಸಮಸ್ಯೆ ಆಗದಂತೆ ಪೊಲೀಸ್‌ ಇಲಾಳೆ ಈ ಕ್ರಮ ತೆಗೆದುಕೊಂಡಿದೆ ಎನ್ನಲಾಗಿದೆ.

ಕೆಲ ಗಂಟೆಗಳ ಕಾಲ ಈ ಮೆಟ್ರೋ ನಿಲ್ದಾಣ ಬಂದ್‌

ಡಿಸೆಂಬರ್ 31 ಇದ್ದು, ಈ ದಿನದ ರಾತ್ರಿ ಕೆಲ ಗಂಟೆಗಳ ಕಾಲ ಬೆಂಗಳೂರಿನ ಈ ಮೆಟ್ರೋ ನಿಲ್ದಾಣವನ್ನು ಬಂದ್‌ ಮಾಡಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಇದಕ್ಕೆ ಕಾರಣ ಏನು?, ಎಷ್ಟು ಗಂಟೆಗಳ ಕಾಳ ಬಂದ್‌ ಮಾಡಲಾಗುತ್ತದೆ? ಹಾಗೂ ಪರ್ಯಾಯ ಮಾರ್ಗಗಳೇನು ಎಂದು ಇಲ್ಲಿ ತಿಳಿಯಿರಿ.

ವರ್ಷದ ಕೊನೆಯ ದಿನ ಡಿಸೆಂಬರ್‌ 31ರಂದು ರಾತ್ರಿ ವೇಳೆ ಎಂಜಿ ರಸ್ತೆ ಮೆಟ್ರೋ ನಿಲ್ದಾಣವನ್ನು ಕೆಲ ಗಂಟೆಗಳ ಕಾಲ ಬಂದ್‌ ಮಾಡಲಾಗುತ್ತದೆ. ಆದ್ಧರಿಂದ ಪ್ರಯಾಣಿಕರು ಬದಲಿ ಮೆಟ್ರೋ ನಿಲ್ದಾಣ ಬಳಸಬೇಕಾಗಿದೆ. ಡಿಸೆಂಬರ್‌ 31 ರಾತ್ರಿ ಮೆಟ್ರೋ ರೈಲುಗಳ ಸಂಚಾರವನ್ನು ರಾತ್ರಿ 1 ಅಥವಾ 2 ಗಂಟೆಯವರೆಗೂ ವಿಸ್ತರಣೆ ಮಾಡಲಾಗುತ್ತದೆ.

ಬಂದ್‌ಗೆ ಕಾರಣ ಏನು?: ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಸುತ್ತಮುತ್ತಲೇ ಹೊಸ ವರ್ಷ ಸಂಭ್ರಮಾಚರಣೆಗಳು ಜೋರಾಗಿಯೇ ನಡೆಯುತ್ತವೆ. ಹೆಚ್ಚು ಜನದಟ್ಟಣೆ ಇರುತ್ತದೆ. ಭದ್ರತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಾಧ್ಯ ಆಗುವುದಿಲ್ಲ. ಕಳೆದ ವರ್ಷ ಎಂ.ಜಿ. ರಸ್ತೆ ಮತ್ತು ಬ್ರಿಗೇಡ್‌ ರಸ್ತೆಯಲ್ಲಿ ಸಂಭ್ರಮಾಚರಣೆ ಮುಗಿದ ಬಳಿಕ ಏಕಾಏಕಿ ಇಲ್ಲಿನ ಮೆಟ್ರೋ ನಿಲ್ದಾಣದಲ್ಲಿ ಭಾರೀ ದಟ್ಟಣೆ ಉಂಟಾಗಿತ್ತು.

ಈ ಸಂದರ್ಭದಲ್ಲಿ ಗಲಾಟೆಗಳು, ತಿಕ್ಕಾಟದಲ್ಲಿ ಹಿರಿಯ ನಾಗರಿಕರು, ಮಹಿಳೆಯರು ಸೇರಿದಂತೆ ಹಲವರಿಗೆ ಸಮಸ್ಯೆ ಉಂಟಾಯಾಯಿತು. ಅಲ್ಲದೆ ಸಾಕಷ್ಟು ಸಮಯಗಳ ಕಾಲ ಜನದಟ್ಟಣೆಯೂ ಇತ್ತು. ಆದ್ದರಿಂದ ಈ ಬಾರಿ ರಾತ್ರಿ 11 ರಿಂದ 2 ಗಂಟೆವರೆಗೆ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತರು ಮಾಹಿತಿ ತಿಳಿಸಿದ್ದಾರೆ ಎಂದಿ ವಿಜಯ ಕರ್ನಾಟಕ ವರದಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+