ರಾಜ್ಯದ ಈ ಮೂರು ಜಿಲ್ಲೆಗಳ ನಡುವೆ ಹೊಸ ರೈಲು ಮಾರ್ಗ-ವಿವರ ಇಲ್ಲಿದೆ

Indian Railways: ಭಾರತೀಯ ರೈಲ್ವೆ ಕ್ಷೇತ್ರದಲ್ಲಿ ದೊಡ್ಡ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು ಆಗುತ್ತಲೇ ಇವೆ. ಹಲವೆಡೆ ಹೊಸ ರೈಲು ಮಾರ್ಗಗಳು ಆಗಿದ್ದರೆ, ಇನ್ನೂ ಹಲವೆಡೆ ಕಾಮಗಾರಿಗಳು ನಡೆಯುತ್ತಿವೆ. ಹಾಗೆಯೇ ಇದೀಗ ರಾಜ್ಯದ ಈ ಮೂರು ಜಿಲ್ಲೆಗಳ ಮಾರ್ಗಗಳ ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ ಸಲ್ಲಿಕೆ ಮಾಡಲಾಗಿದೆ.

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ನದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿಯಾಗಿದ್ದು, ಈ ವೇಳೆ ಶಿವಮೊಗ್ಗ-ಶೃಂಗೇರಿ-ಮಂಗಳೂರು ನಡುವೆ ಹೊಸ ರೈಲು ಮಾರ್ಗ ಮಂಜೂರಾತಿ ಮಾಡುವಂತೆ ಮನವಿ ಸಲ್ಲಿಕೆ ಮಾಡಿದರು.

New railway line between these three districts of Karnataka state

ಒಂದು ದಶಕದ ಹಿಂದೆ ಮಲೆನಾಡು ಕರಾವಳಿ ಸಂಪರ್ಕಿಸುವ ಈ ಯೋಜನೆಯ ಸಮೀಕ್ಷೆಗೆ ಮಂಜೂರಾತಿ ನೀಡಲಾಗಿದ್ದು, ನಂತರ ಈ ಯೋಜನೆಯನ್ನು ಸ್ಥಗಿತಗೊಳಿಸಲಾಯಿತು. ಈ ಉದ್ದೇಶಿತ ಯೋಜನೆಯು ಮಲೆನಾಡು ಪ್ರದೇಶದಿಂದ ಕರಾವಳಿ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಮುಂಬರುವ ಕೇಂದ್ರ ಬಜೆಟ್‌ನಲ್ಲಿಈ ಯೋಜನೆಗೆ ಮಂಜೂರಾತಿ ನೀಡುವಂತೆ ಸಂಸದರು ಮನವಿ ಮಾಡಿದ್ದಾರೆ.

ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣದಲ್ಲಿ ರೈಲು ಸಂಖ್ಯೆ 22629/22630 ದಾದರ್‌ ಸೆಂಟ್ರಲ್‌-ತಿರುನೆಲ್ವೇಲಿ-ದಾದರ್‌ ಸೆಂಟ್ರಲ್‌ ಎಕ್ಸಪ್ರೆಸ್‌ (ಸಾಪ್ತಾಹಿಕ) ಮತ್ತು ರೈಲು ಸಂಖ್ಯೆ 12617/12618 ಎರ್ನಾಕುಲಂ-ಹಜರತ್‌ ನಿಜಾಮುದ್ದೀನ್‌-ಎರ್ನಾಕುಲಂ ಮಂಗಳಾ ಲಕ್ಷದ್ವೀಪ್‌ ಎಕ್ಸ್‌ಪ್ರೆಸ್‌ (ಡೈಲಿ) ನಿಲುಗಡೆಯನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಈ ರೈಲುಗಳಿಗೂ ಮೂಕಾಂಬಿಕಾ ನಿಲ್ದಾಣದಲ್ಲಿ ನಿಲುಗಡೆ ನೀಡಲು ಕೊಂಕಣ ರೈಲ್ವೆ ಮಂಡಳಿಯು ರೈಲ್ವೆ ಮಂಡಳಿಗೆ ಶಿಫಾರಸು ಕೂಡ ಮಾಡಿದೆ.

ಸೇನಾಪುರ ರೈಲು ನಿಲ್ದಾಣದಲ್ಲಿ ಮಂಗಳೂರು-ಮುಂಬಯಿ ನಡುವೆ ಸಂಚಾರ ಮಾಡುವ ರೈಲು ಸಂಖ್ಯೆ 12619/20 ಮತ್ಸಗಂದ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ಗೆ ಮತ್ತು ಕಾರವಾರ-ಬೆಂಗಳೂರು ನಡುವೆ ಸಂಚಾರ ಮಾಡುವ ರೈಲು ಸಂಖ್ಯೆ 16595/96 ಪಂಚಗಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಸೇನಾಪುರದಲ್ಲಿ ನಿಲುಗಡೆಗೆ ಅವಕಾಶ ನೀಡುವಂತೆಯೂ ಮನವಿ ಮಾಡಿಕೊಂಡಿದ್ದು, ಇದಕ್ಕೆ ರೈಲ್ವೆ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿ ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ: ಭದ್ರಾ ಮೇಲ್ದಂಡೆ ಯೋಜನೆ ಹಾಗೂ ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.

ಹಿರಿಯೂರು ನಗರಸಭೆ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭದ್ರಾ ಮೇಲ್ದಂಡೆ ಯೋಜನೆ, ನೇರ ರೈಲ್ವೆ ಯೋಜನೆ ಹಾಗೂ ಕೆಐಡಿಬಿ ಇಲಾಖೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಭದ್ರಾ ಮೇಲ್ದಂಡೆ ಯೋಜನೆ, ನೇರ ರೈಲ್ವೆ ಯೋಜನೆ, ಕೈಗಾರಿಕಾ ಕಾರಿಡಾರ್ ಯೋಜನೆಗಳನ್ನು ನಿಗಧಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಚುನಾವಣಾ ನೀತಿ ಸಂಹಿತೆಯಿಂದಾಗಿ ಯೋಜನೆ ಕಾಮಗಾರಿಗಳು ಮಂದಗತಿಯಾಗಿದ್ದು, ಇದೀಗ ಯೋಜನೆಗಳ ಪೂರ್ಣಗೊಳಿಸಲು ವೇಗ ನೀಡಲಾಗುವುದು ಎಂದರು.

ಬೋರನಕಣಿವೆ ಜಲಾಶಯದ ವಿವರ ಪರಿಶೀಲಿಸಿ ಹೆಚ್ಚಿನ ನೀರಿನ ಅಲೋಕೇಶನ್ ತಂದು ಅಲ್ಲಿಂದ ಗಾಯಿತ್ರಿ ಜಲಾಶಯಕ್ಕೆ ತರಲು ಕ್ರಮವಹಿಸಲಾಗುವುದು. ಹೊಸಹಳ್ಳಿ ಬ್ಯಾರೇಜ್‍ನ ವಿದ್ಯುತ್ ಸಮಸ್ಯೆಯನ್ನು ಆ ಭಾಗದ ರೈತರೊಂದಿಗೆ ಚರ್ಚಿಸಿ ಶೀಘ್ರ ಬಗೆಹರಿಸಿ ಬಹುದೊಡ್ಡ ಈ ಯೋಜನೆಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕಿದೆ ಎಂದರು.

ಕೆಐಡಿಬಿ ಅಧಿಕಾರಿ ಲಕ್ಷ್ಮೀಶ್ ಮಾತನಾಡಿ, ಮೇಟಿಕುರ್ಕೆ ಕೈಗಾರಿಕಾ ಕಾರಿಡಾರ್ ಯೋಜನೆಯ 1,156 ಹೆಕ್ಟೇರ್‌ ಪ್ರದೇಶದಲ್ಲಿ 920 ಹೆಕ್ಟೇರ್‌ ಪ್ರದೇಶದ ರೈತರಿಗೆ ಪರಿಹಾರ ನೀಡಲಾಗಿದೆ. ಇನ್ನೂ 336 ಹೆಕ್ಟೇರ್‌ಗೆ ಪರಿಹಾರ ಕೊಡಬೇಕು. ಇಲ್ಲಿಯವರೆಗೆ 380 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಅದರಲ್ಲಿ 312 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದರು.

ಮೇಟಿಕುರ್ಕೆ ಕರಿಯೋಬನಹಳ್ಳಿಯಲ್ಲಿ ಲೇಔಟ್ ಅನುಮೋದನೆ ಆಗಿದೆ. ನಾಲ್ಕರಲ್ಲಿ ಮೂರು ಪ್ಯಾಕೇಜ್ ವರ್ಕ್ ಅವಾರ್ಡ್ ಆಗಿದ್ದು, ಕೆಲಸ ನಡೆಯುತ್ತಿದೆ. ಒಂದರಲ್ಲಿ ಕೆಲಸ ಶುರು ಆಗಬೇಕಿದೆ. 1,156 ಹೆಕ್ಟೇರ್‌ ಪ್ರದೇಶದಲ್ಲಿ 764 ಹೆಕ್ಟೇರ್‌ ಕೈಗಾರಿಕಾ ಪ್ರದೇಶವಾಗಿದ್ದು, ಉಳಿದ ಪ್ರದೇಶದಲ್ಲಿ ಉದ್ಯಾನವನ, ಆಸ್ಪತ್ರೆ, ವಸತಿ ಗೃಹಗಳಿಗೆ ಮೀಸಲಿರಿಸಲಾಗಿದೆ ಎಂದರು.

ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆಗೆ 1,210 ಹೆಕ್ಟೇರ್‌ ಬೇಕಾಗಿದ್ದು, ಹಿರಿಯೂರಿನಲ್ಲಿ 55 ಕಿಲೋ ಮೀಟರ್‌ ಹಾದು ಹೋಗಲಿದೆ. ತಾಲ್ಲೂಕಿನಲ್ಲಿ 113 ಹೆಕ್ಟೇರ್‌ ಭೂ ಸ್ವಾಧೀನ ಬಾಕಿಯಿದೆ. ಎರಡು ತಿಂಗಳಲ್ಲಿ 70 ಹೆಕ್ಟೇರ್‌ ಭೂ ಸ್ವಾಧೀನಪಡಿಸಿಕೊಂಡು ಕೆಲಸ ಪ್ರಾರಂಭ ಮಾಡಲಾಗುವುದು ಎಂದು ವಿಶೇಷ ಭೂಸ್ವಾಧೀನಾಧಿಕಾರಿ ವಿವೇಕ್ ಸಭೆಗೆ ಮಾಹಿತಿ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+