Railway platforms: ದೇಶದಲ್ಲಿ ಅತೀ ಹೆಚ್ಚು ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿರುವ ರೈಲ್ವೆ ನಿಲ್ದಾಣಗಳಿವು-ಮಾಹಿತಿ, ವಿವರ
ಬೆಂಗಳೂರು, ಏಪ್ರಿಲ್, 07: ಭಾರತದಲ್ಲಿ ರೈಲ್ವೆ ಕ್ಷೇತ್ರವು ಭಾರೀ ಅಭಿವೃದ್ಧಿಯನ್ನು ಕಾಣುತ್ತಿದೆ. ಕಾರಣ ಅತೀ ಹೆಚ್ಚು ಜನ ರೈಲು ಪ್ರಯಾಣವನ್ನೇ ಅವಲಂಬಿಸಿರುವವರಿದ್ದಾರೆ. ಅಲ್ಲದೆ ಟಿಕೆಟ್ ದರ ಕಡಿಮೆ, ಆರಾಮದಾಯಕ ಪ್ರಯಾಣಕ್ಕೆ ಅವಕಾಶ ಇರುವುದರಿಂದ ಹೆಚ್ಚು ಪ್ರಯಾಣಿಕರು ಈ ಸಾರಿಗೆಯನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ಇನ್ನು ದೇಶದ ಹಲವು ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ಲಾಟ್‌ಫಾರ್ಮ್‌ಗಳಿವೆ. ಹಾಗಾದರೆ ಅವು ಯಾವುವು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
* ಭಾರತದಲ್ಲಿ ಅತಿ ಹೆಚ್ಚು ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿರುವ ರೈಲು ನಿಲ್ದಾಣ ಕೋಲ್ಕತ್ತಾದ ಹೌರಾ ನಿಲ್ದಾಣ ಆಗಿದ್ದು, ಇದು ಅತಿ ಹೆಚ್ಚು ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿರುವ ನಿಲ್ದಾಣವಾಗಿದೆ. ಈ ನಿಲ್ದಾಣದಲ್ಲಿ 23 ಪ್ಲಾಟ್‌ಫಾರ್ಮ್‌ಗಳಿದ್ದು, ಈ ನಿಲ್ದಾಣವು 26 ಹಳಿಗಳ ರೈಲು ಮಾರ್ಗವನ್ನು ಹೊಂದಿದೆ.

* ಅಲ್ಲದೆ, ಸೀಲ್ದಾಹ್ ರೈಲ್ವೆ ನಿಲ್ದಾಣವು ಕೂಡ ಅನೇಕ ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿದ್ದು, ಅತಿ ಹೆಚ್ಚು ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿರುವ ದೇಶದ ಎರಡನೇ ಅತಿದೊಡ್ಡ ರೈಲು ನಿಲ್ದಾಣ ಆಗಿದೆ. ಇದು ದೇಶದ ಅತ್ಯಂತ ಜನನಿಬಿಡ ರೈಲು ನಿಲ್ದಾಣಗಳಲ್ಲೊಂದಾಗಿದ್ದು, ಒಟ್ಟು 20 ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿದೆ.
* ವಾಣಿಜ್ಯ ನಗರಿ ಅಂತಲೇ ಹೆಸರುವಾಸಿಯಾಗಿರುವ ಮುಂಬೈಲ್ಲಿರುವ ಛತ್ರಪತಿ ಶಿವಜಿ ಟರ್ಮಿನಲ್ ಹೆಚ್ಚು ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿದ್ದು, ದೇಶದ ಅತೀ ಹೆಚ್ಚು ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿರುವ ಮೂರನೇ ರೈಲು ನಿಲ್ದಾಣವಾಗಿದೆ. ಇದು ಒಟ್ಟು 18 ಪ್ಲಾಟ್‌ಫಾರ್ಮ್‌ಗಳನ್ನು ಒಳಗೊಂಡಿದೆ.
* ದೇಶದ ರಾಜಧಾನಿ ನವದೆಹಲಿಯಲ್ಲಿನ ರೈಲು ನಿಲ್ದಾಣವು ದೇಶದ ಹೆಚ್ಚು ಸಂಖ್ಯೆಯ ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿರುವ ರೈಲು ನಿಲ್ದಾಣಗಳಲ್ಲೊಂದಾಗಿದೆ. ಈ ರೈಲು ನಿಲ್ದಾಣವು ಒಟ್ಟು 16 ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿದ್ದು, ಹಬ್ಬ ಅಥವಾ ರಜಾದಿನಗಳಲ್ಲಿ ಸುಮಾರು 400 ರೈಲುಗಳು ಈ ನಿಲ್ದಾಣದಲ್ಲಿ ಸಂಚಾರ ಮಾಡುತ್ತವೆ ಎಂದು ತಿಳಿದುಬಂದಿದೆ.
* ಇನ್ನು ದೇಶದಲ್ಲಿ ಹೆಚ್ಚು ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿರುವ 5ನೇ ರೈಲು ನಿಲ್ದಾಣ ಚೆನ್ನೈ ರೈಲು ನಿಲ್ದಾಣ ಆಗಿದೆ. ಈ ನಿಲ್ದಾಣದ ಹೆಸರು ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣ ಆಗಿದ್ದು, ಇದು ಒಟ್ಟು 15 ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿದೆ ಎನ್ನುವ ಮಾಹಿತಿ ಇದೆ.
World Highest Railway Bridge: ಭಾರತೀಯ ರೈಲ್ವೆಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗುತ್ತಲೇ ಇವೆ. ಹಾಗೆಯೇ ದೇಶದ ಈ ಭಾಗದಲ್ಲಿ ನಿರ್ಮಾಣ ಆಗಿರುವ ವಿಶ್ವದ ಅತೀ ಎತ್ತರದ ರೈಲ್ವೇ ಸೇತುವೆ ಉದ್ಘಾಟನೆಗೆ ಸಜ್ಜಾಗಿದ್ದು, ಇದರ ಮೇಲೆ ವಂದೇ ಭಾರತ್ ರೈಲು ಸಂಚಾರ ಯಾವಾಗ ಆಗಲಿದೆ ಎಂದು ಇಲ್ಲಿ ತಿಳಿಯಿರಿ. ಹಾಗೂ ಇದಕ್ಕೆ ತಗುಲಿದ ವೆಚ್ಚ ಹಾಗೂ ವಿಶೇಷತೆ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಪ್ಯಾರೀಸ್‌ನಲ್ಲಿನ ಎಫಿಲ್ ಟವರ್‌ಗಿಂತ ಹೆಚ್ಚು ಎತ್ತರದ ರೈಲ್ವೇ ಸೇತುವೆ ಭಾರತದ ಈ ಭಾಗದಲ್ಲಿ ನಿರ್ಮಾಣವಾಗಿದ್ದು, ಇದೇ ವರ್ಷವೇ ಈ ಸೇತುವೆ ಮೇಲೆ ರೈಲು ಸಂಚಾರ ಮಾಡಲಿದೆ ಎನ್ನವ ಮಾಹಿತಿ ಲಭ್ಯವಾಗಿದೆ.
ಈ ಸೇತುವೆಯನ್ನು 2024ರೊಳಗೆ ಉದ್ಘಾಟನೆ ಮಾಡಲಾಗುತ್ತದೆ ಎಂದು ಈ ಹಿಂದೆ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಇದರ ವಿಡಿಯೋ ಹಂಚಿಕೊಳ್ಳುವ ಮೂಲಕ ಹೇಳಿದ್ದರು. ಅದರಂತೆಯೇ ಇದೀಗ ಈ ಸೇತುವೆ ಉದ್ಘಾಟನೆಗೆ ಸಜ್ಜಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಈ ಸೇತುವೆ ಮೇಲೆ ರೈಲುಗಳು ಸಂಚಾರ ಮಾಡಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತೀಯ ರೈಲ್ವೆ ನಿರ್ಮಾಣ ಮಾಡಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಈ ವರ್ಷವೇ ತೆರೆಯಲಿದೆ ಎಂದು ತಿಳಿದುಬಂದಿದೆ.
ಚೆನಾಬ್ ನದಿಗೆ ಅಡ್ಡಲಾಗಿ ಕಟ್ಟಲಾದ ಈ ಸೇತುವೆಯನ್ನು ಹೊಸ ಸರ್ಕಾರದ 100 ದಿನಗಳ ಕ್ರಿಯಾ ಯೋಜನೆಯಡಿ ಉದ್ಘಾಟನೆ ಮಾಡಲು ಸಿದ್ಧತೆ ನಡೆದಿದೆ. ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ ಯೋಜನೆಯ ಕಾಟ್ರಾ-ಬನಿಹಾಳ್ ಸೆಕ್ಷನ್‌ನಲ್ಲಿ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ಇನ್ನು ಇದೇ ವರ್ಷ ಈ ಸೇತುವೆ ಮೂಲಕ ರೈಲು ಸಂಚಾರ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈ ಸೇತುವೆ ಜಾಗತಿಕವಾಗಿ ಅತಿ ಎತ್ತರದ ರೈಲ್ವೆ ಸೇತುವೆ ಎಂಬ ಹೆಗ್ಗಳಿಕೆಯನ್ನಯ ಹೊಂದಿದೆ. ನದಿಯ ತಳಮಟ್ಟದಿಂದ 359 ಮೀಟರ್ ಎತ್ತರದಲ್ಲಿ ಇದನ್ನು ನಿರ್ಮಾಣ ಮಾಡಲಾಗಿದ್ದು, ಪ್ಯಾರೀಸ್‌ನ ಎಫಿಲ್ ಟವರ್‌ಗಿಂತಲೂ ಎತ್ತರದಲ್ಲಿದೆ ಎಂದು ಹೇಳಲಾಗುತ್ತಿದೆ. ಇದು ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಇತರ ಪ್ರದೇಶಗಳ ಜೊತೆ ಸಂಪರ್ಕ ಕಲ್ಪಿಸುವ ಸೇತುವೆ ಆಗಿದೆ.
ಇನ್ನು ಇದು 93 ಡೆಕ್ ವಿಭಾಗಗಳನ್ನು ಹೊಂದಿದ್ದು, ಪ್ರತಿಯೊಂದರ ತೂಕ 85 ಟನ್ ಆಗಿದೆ. ಸೇತುವೆಯ ಎರಡೂ ಕಡೆಯಲ್ಲೂ ಬೃಹತ್ ಗಾತ್ರದ ಉಕ್ಕಿನ ಕಮಾನುಗಳ ಮೂಲಕ ಇದನ್ನು ಏಕಕಾಲಕ್ಕೆ ಅಳವಡಿಕೆ ಮಾಡಲಾಗಿದೆ. ಇದರ ಮುಖ್ಯ ಕಮಾನಿನ ಉದ್ದ 467 ಮೀಟರ್ ಆಗಿದ್ದು, ಇದು ಅತಿ ಉದ್ದದ ಕಮಾನು ಎನ್ನುವ ಹೆಗ್ಗಳಿಗೆ ಪಾತ್ರವಾಗಿದೆ.
ಚೆನಾಬ್ ಸೇತುವೆ ಯೋಜನೆಗಳನ್ನು ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ಅಂದಾಜು 1,486 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿದೆ. ಮತ್ತು 266 ಕಿಲೋ ಮೀಟರ್ ಗಾಳಿಯ ವೇಗವನ್ನು ತಡೆದುಕೊಳ್ಳಲು ಸ್ಫೋಟ ನಿರೋಧಕವನ್ನು ನಿರ್ಮಾಣ ಮಾಡಲಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications