ಉದ್ಘಾಟನೆಯಾಗಿ ಒಂದು ತಿಂಗಳು ಕಳೆದರೂ ಶಿವಮೊಗ್ಗದ ವಿಮಾಣ ನಿಲ್ದಾಣದಲ್ಲಿ ಯಾವುದೇ ಏರ್‌ಲೈನ್ ಸುಳಿವಿಲ್ಲ
ಶಿವಮೊಗ್ಗ, ಮಾರ್ಚ್, 28: ಶಿವಮೊಗ್ಗದ ಹೊರವಲಯದಲ್ಲಿರುವ ಸೋಗಾನೆ ಬಳಿ ನೂತನವಾಗಿ ನಿರ್ಮಾಣವಾದ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 27ರಂದು ಉದ್ಘಾಟನೆ ಮಾಡಿದ್ದರು. ಇದೀಗ ವಿಮಾನ ನಿಲ್ದಾಣ ಉದ್ಘಾಟನೆಗೊಂಡು ಒಂದು ತಿಂಗಳು ಕಳೆದಿದೆ. ಆದರೂ ಇಲ್ಲಿಗೆ ಇದುವರೆಗೂ ಯಾವುದೇ ಏರ್‌ಲೈನ್‌ನ ಸುಳಿವಿಲ್ಲದಂತಾಗಿದೆ.
ಹೆಚ್ಚುತ್ತಿರುವ ದಟ್ಟಣೆಯನ್ನು ಸರಿಹೊಂದಿಸಲು ಇದನ್ನು ನಿರ್ಮಾಣ ಮಾಡಲಾಗಿದೆ. ಆದರೆ ಇಲ್ಲಿಗೆ ಇದುವರೆಗೂ ಯಾವುದೇ ಏರ್‌ಲೈನ್ ಬಂದಿಲ್ಲ. ಆದ ಕಾರಣ ಪ್ರಯಾಣಿಕರಿಂದ ತುಂಬಿ ತುಳುಕಬೇಕಿದ್ದ ವಿಮಾಣ ನಿಲ್ದಾಣ ಬಿಕೋ ಎನ್ನುತ್ತಿದೆ.

ಯಾವುದೇ ಏರ್‌ಲೈನ್‌ನ ಸುಳಿವಿಲ್ಲ
ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಮಾಹಿತಿ ನೀಡಿದ್ದರು. ಆದರೆ ಉದ್ಘಟನೆಯಾಗಿ ಒಂದು ತಿಂಗಳೂ ಕಳೆದರೂ ಕೂಡ ಯಾವುದೇ ಏರ್‌ಲೈನ್ ಕೂಡ ವಿಮಾಣ ನಿಲ್ದಾಣಕ್ಕೆ ಬಂದಿಲ್ಲ.
ಇದು ರಾಜ್ಯದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ಅತಿ ದೊಡ್ಡ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಈ ವಿಮಾನ ನಿಲ್ದಾಣವನ್ನು ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣವು ಕನಿಷ್ಠ ವೆಚ್ಚದಲ್ಲಿ ನಿರ್ಮಿಸಿದ ದೇಶದ ಮೊದಲ ವಿಮಾನ ನಿಲ್ದಾಣವಾಗಿದೆ.
ಇಲ್ಲಿ ವಿಮಾನಗಳು ರಾತ್ರಿ ಇಳಿಯುವಂತಹ ಸುಧಾರಿತ ಸೌಲಭ್ಯಗಳನ್ನು ಹೊಂದಿರುತ್ತದೆ.
500 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಲ್ಲಿ 3.50 ಕಿಲೋ ಮೀಟರ್ ರನ್ ವೇ, ಕಾಂಪೌಂಡ್, ಕಾಂಪೌಂಡ್‌ಗೆ ಹೊಂದಿಕೊಂಡಂತೆ ರಸ್ತೆಗಳು, ನಿಲ್ದಾಣಕ್ಕೆ ಒಂದು ಕಿಲೋ ಮೀಟರ್ ಸಂಪರ್ಕ ರಸ್ತೆ, ವಿಮಾನಗಳು ನಿಲುಗಡೆ ಆಗುವಂತಹ ಏಪ್ರಾನ್, 100 ಕೆ.ವಿ. ಸಾಮರ್ಥ್ಯದ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ, ಉಪ ವಿದ್ಯುತ್ ಘಟಕ, ಕೊಳಚೆ ನೀರು ಶುದ್ಧೀಕರಣ ಘಟಕಗಳು ಕೂಡ ಇವೆ.

ರಾಜ್ಯದಲ್ಲಿ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿವೆ. ಮೈಸೂರು, ಬಳ್ಳಾರಿ, ಬೀದರ್, ಹುಬ್ಬಳ್ಳಿ, ಕಲಬುರಗಿ, ಬೆಳಗಾವಿ ಮತ್ತು ಶಿವಮೊಗ್ಗದಲ್ಲಿ ರಾಷ್ಟ್ರೀಯ ವಿಮಾನ ನಿಲ್ದಾಣಗಳಿವೆ. ಹಾಗೆಯೇ ಶಿವಮೊಗ್ಗ ಕುವೆಂಪು ವಿಮಾನ ನಿಲ್ದಾಣವು ಇನ್ನೆರಡು ವರ್ಷಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗಷ್ಟೇ ಹೇಳಿದ್ದರು.
ಬಿಜಾಪುರ ವಿಮಾನ ನಿಲ್ದಾಣ ಈಗಾಗಲೇ ಸಿದ್ದವಿದ್ದು, ಹಾಸನದಲ್ಲಿ ಪ್ರಗತಿಯಲ್ಲಿದೆ. ಕಾರವಾರದಲ್ಲಿ ಕಾಮಗಾರಿ ಪ್ರಾರಂಭವಾಗುತ್ತಿದ್ದು, ರಾಯಚೂರು, ಕೊಪ್ಪಳ ಮತ್ತು ದಾವಣಗೆರೆಯಲ್ಲಿ ಈ ವರ್ಷ ಕಾಮಗಾರಿಗಳು ಪ್ರಾರಂಭ ಆಗಲಿದೆ. ವಿಮಾನ ನಿಲ್ದಾಣದ ಜಾಲ ಹಾಗೂ ಪ್ರಧಾನಿಗಳ ಆಶಯದಂತೆ ಸಾಗರಮಾಲಾ ಯೋಜನೆಯಡಿ ಏಳು ಬಂದರುಗಳ ಅಭಿವೃದ್ಧಿಯನ್ನು ಕೈಗೊಳ್ಳಲಾಗಿದೆ.
ಕಳೆದ 5 ವರ್ಷಗಳಲ್ಲಿ ಆರು ಸಾವಿರ ಕಿಮೀ ರಾಷ್ಟ್ರೀಯ ಹೆದ್ದಾರಿ ಮಂಜೂರಾತಿಯಾಗಿದೆ. ಈ ಕಾರ್ಯಕ್ಕಾಗಿ 64 ಸಾವಿರ ಕೋಟಿ ಮಂಜೂರಾಗಿದ್ದು, ಈ ಪೈಕಿ 34 ಕೋಟಿ ರೂಪಾಯಿಗಳು ಕರ್ನಾಟಕಕ್ಕೆ ಪ್ರಧಾನಿಗಳು ಬಿಡುಗಡೆ ಮಾಡಿದ್ದಾರೆ. ವಾಣಿಜ್ಯೋದ್ಯಮ, ವ್ಯಾಪಾರ, ವಹಿವಾಟು, ಕೃಷಿ, ಕೈಗಾರಿಕೆ, ಔದ್ಯೋಗೀಕರಣ ಇವೆಲ್ಲದಕ್ಕೂ ಮಲೆನಾಡಿನ ಶಿವಮೊಗ್ಗ ವಿಮಾನ ನಿಲ್ದಾಣ ಹೆಬ್ಬಾಗಿಲಾಗಲಿದೆ. ಇಡೀ ಭಾರತದ ಮೂಲೆ ಮೂಲೆಗೆ ಈ ವಿಮಾನ ನಿಲ್ದಾಣ ಸಂಪರ್ಕ ಕಲ್ಪಿಸಲಿದೆ ಎಂದು ಹೇಳಿದ್ದರು.
ನರೇಂದ್ರ ಮೋದಿಯವರು ದೇಶ ಸೇರಿದಂತೆ ಕರ್ನಾಟಕಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಭಾರತ 2014 ರಿಂದ ಈಚೆಗೆ 30ಕ್ಕಿಂತ ಹೆಚ್ಚು ವಿಮಾನ ನಿಲ್ದಾಣಗಳು ಈ ದೇಶದಲ್ಲಿ ಉದ್ಘಾಟನೆಗೊಂಡಿವೆ. ಇನ್ನು 10-15 ವಿಮಾನ ನಿಲ್ದಾಣಗಳು ಉದ್ಘಾಟನೆ ಆಗಲಿವೆ. ಅತ್ಯಧಿಕ ವೈದ್ಯಕೀಯ ಕಾಲೇಜುಗಳು ಕೂಡ ಸ್ಥಾಪನೆ ತಲೆಎತ್ತಿವೆ ಎಂದಿದ್ದರು.
ಕಳೆದ ವರ್ಷ ರಾಜ್ಯಕ್ಕೆ ನಾಲ್ಕು ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಲಾಗಿದೆ. ಸ್ವಾತಂತ್ರ್ಯಾ ನಂತರ ಮೂರು ಪಟ್ಟು ಹೆಚ್ಚು ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸಲಾಗಿದೆ. ಮನೆಮನೆಗೆ ಜಲ್ ಜೀವನ್ ಮಿಷನ್ ಅಡಿಯಲ್ಲಿ ಈ ಸೌಲಭ್ಯವನ್ನು ನೀಡಲಾಗಿದೆ ಎಂದಿದ್ದರು. 2014ರ ನಂತರ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಪ್ರಧಾನಿಗಳು ದುಪ್ಪಟ್ಟು ಮನೆಗಳನ್ನು ಕಟ್ಟಿದ್ದಾರೆ ಎಂದಿದ್ದರು.












Click it and Unblock the Notifications