ಶಿವರಾತ್ರಿ: ಕೆಕೆಆರ್‌ಟಿಸಿಯಿಂದ 450 ಹೆಚ್ಚುವರಿ ಬಸ್
ಕಲಬುರಗಿ, ಮಾರ್ಚ್ 06: ಶಿವರಾತ್ರಿಯ ಸಂದರ್ಭದಲ್ಲಿ ಆಂಧ್ರ ಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ಮಹಾ ಕ್ಷೇತ್ರಕ್ಕೆ ತೆರಳು ಭಕ್ತರ ಅನುಕೂಲಕ್ಕಾಗಿ ಕೆಕೆಆರ್‌ಟಿಸಿ 450 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.
ಮಹಾಶಿವರಾತ್ರಿ ಬ್ರಹ್ಮರಥೋತ್ಸವಕ್ಕೆ ತೆರಳುವ ಭಕ್ತರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) 450 ಹೆಚ್ಚುವರಿ ಬಸ್‌ಗಳನ್ನು ಓಡಿಸುತ್ತಿದೆ. ದೇವಾಲಯಕ್ಕೆ ಕರ್ನಾಟಕದಿಂದ ಸಾಗುವ ಭಕ್ತರ ಅನುಕೂಲಕ್ಕಾಗಿ ವಿಶೇಷ ಬಸ್ ಓಡಿಸಲಾಗುತ್ತಿದೆ ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆ.

ಬಸ್‌ಗಳ ವಿವರಗಳು: 2024ನೇ ಸಾಲಿನ ಮಹಾಶಿವರಾತ್ರಿ ಹಾಗೂ ಶ್ರೀ ಶ್ರೀಶೈಲ ಮಲ್ಲಿಕಾರ್ಜನ ದೇವರ ರಥೋತ್ಸವ ನಿಮಿತ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ತಾಲೂಕು/ ಜಿಲ್ಲಾ ಕೇಂದ್ರಗಳಿಂದ ಬೆಂಗಳೂರು, ಶ್ರೀಶೈಲಂ ಮತ್ತು ಇತರೆ ಪ್ರಮುಖ ಸ್ಥಳಗಳಿಗೆ ಒಟ್ಟು 450 ಹೆಚ್ಚುವರಿ ಬಸ್ ಕಾರ್ಯಾಚರಣೆ ನಡೆಸಲಾಗುತ್ತದೆ.
ಹಬ್ಬ ಮುಗಿದ ನಂತರ ಮರಳಿ ಹೋಗುವವರಿಗೆ ಬೆಂಗಳೂರು ಮತ್ತು ಇತರೆ ಸ್ಥಳಗಳಿಗೆ ಸಂಚಾರ ದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ದಿನಾಂಕ 01/03/2024 ರಿಂದ 10/03/2024ರ ವರೆಗೆ ಶ್ರೀ ಶ್ರೀಶೈಲ ಮಲ್ಲಿಕಾರ್ಜುನ ದೇವರ ಜಾತ್ರೆಗೆ ರಾಯಚೂರು ವಿಭಾಗದ ವ್ಯಾಪ್ತಿಯ ವಿವಿಧ ತಾಲ್ಲೂಕು ಸ್ಥಳಗಳಿಂದ ಹಾಗೂ ದಿನಾಂಕ 06/03/2024 ರಿಂದ 11/03/2024ರ ವರೆಗೆ ನಿಗಮದ ವ್ಯಾಪ್ತಿಯ ಇತರೆ ತಾಲ್ಲೂಕು/ ಜಿಲ್ಲಾ ಸ್ಥಳಗಳಿಂದ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.
ದಿನಾಂಕ 07/03/2024 ರಿಂದ 09/03/2024ರ ವರೆಗೆ ಬೆಂಗಳೂರಿನಿಂದ ಇತರೆ ಸ್ಥಳಗಳಿಗೆ ಹೆಚ್ಚುವರಿ ವಾಹನಗಳ ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ. ಹಬ್ಬದ ನಂತರ ದಿನಾಂಕ 10/03/2023 ರಿಂದ 12/03/2024ರ ವರೆಗೆ ನಿಗಮದ ವ್ಯಾಪ್ತಿಯ ವಿವಿಧ ವಿಭಾಗಗಳಿಂದ ಬೆಂಗಳೂರು ಮತ್ತು ಇತರೆ ಸ್ಥಳಗಳಿಗೆ ಸಂಚಾರ ದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಕರ್ನಾಟಕ ಹಾಗೂ ಅಂತರ ರಾಜ್ಯದಲ್ಲಿ ಇರುವ 16 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮುಖಾಂತರ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗುವ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
4 ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ 10 ರಿಯಾಯತಿ ನೀಡಲಾಗುವುದು.
ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು ಪ್ರಯಾಣಿಕರು ಸದರಿ ಸಾರಿಗೆ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಕೆಕೆಆರ್‌ಟಿಸಿಯ ಬಳ್ಳಾರಿ ವಿಭಾಗ ಸಹ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ತೆರಳುವ ಭಕ್ತಾದಿಗಳಿಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಬಳ್ಳಾರಿ, ಮೋಕಾ, ಕುರುಗೋಡು, ಸಿರುಗುಪ್ಪ, ತೆಕ್ಕಲಕೋಟ, ಹಳೇಕೋಟೆ ಮತ್ತು ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀಶೈಲಂಗೆ ಹೋಗಲಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ಮಾರ್ಚ್ 4 ರಿಂದ 10ರ ತನಕ ವಿಶೇಷ ಬಸ್ ಸಂಚಾರ ನಡೆಸಲಿದೆ.












Click it and Unblock the Notifications