South Western Railway: ಜನರಲ್‌ ಬೋಗಿಗಳಲ್ಲಿ ಪ್ರಯಾಣಿಸುವವರಿಗೆ ಗುಡ್‌ ನ್ಯೂಸ್‌

South Western Railway: ನೈರುತ್ಯ ರೈಲ್ವೆ ಪ್ರಯಾಣಿಕರ ಅನುಕೂಲತೆಗೆ ತಕ್ಕಂತೆ ಯೋಜನೆಗಳನ್ನು ಜಾರಿ ಮಾಡುತ್ತಲೇ ಇರುತ್ತದೆ. ಇದೀಗ ಜನರಲ್‌ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಕರಿಗೆ ಗುಡ್‌ನ್ಯೂಸ್‌ವೊಂದನ್ನು ನೀಡಿದೆ. ಹಾಗಾದರೆ ಅದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಈ ಹಿಂದೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು ಟಿಕೆಟ್‌ ಖರೀದಿಸಲು ವ್ಯವಸ್ಥೆ ಮಾಡುವ ಉದ್ದೇಶದಿಂದ ಕ್ಯೂ ಆರ್‌ ಕೋಡ್‌ ಆಧಾರಿತ ಡಿಜಿಟಲ್‌ ಪಾವತಿಯನ್ನು ಆರಂಭಿಸಿದ್ದು, ಈ ವ್ಯವಸ್ಥೆಯು ಟಿಕೆಟ್‌ ಕೌಂಟರ್‌ಗಳಲ್ಲಿ ಉಂಟಾಗುತ್ತಿದ್ದ ಚಿಲ್ಲರೆ ಸಮಸ್ಯೆಯನ್ನು ನಿಯಂತ್ರಸುತ್ತಿದೆ.

South Western Railway Good news for passengers Traveling in general coaches Know details

ಬಹುತೇಕ ರೈಲ್ವೆ ನಿಲ್ದಾಣಗಳಲ್ಲಿ ಪ್ರತಿನಿತ್ಯ ರೈಲಿನ ಹವಾನಿಯಂತ್ರಣ ರಹಿತ ಸ್ಲೀಪರ್‌, ಹವಾನಿಯಂತ್ರಿತ ಸ್ಲೀಪರ್‌ ಹಾಗೂ ಐಷಾರಾಮಿ ಕೋಚ್‌ಗಳಲ್ಲಿ ಸಂಚಾರ ಮಾಡುವ ಪ್ರಯಾಣಿಕರು ಆನ್‌ಲೈನ್‌ ಟಿಕೆಟ್‌ಗಳನ್ನು ಕಾಯ್ದಿರಿಸಿ, ಡಿಜಿಟಲ್‌ ಮೂಲಕ ಹಣ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಇದೀಗ ಜನರಲ್‌ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೂ ಅನ್ವಯಿಸುವಂತೆ ಬೆಂಗಳೂರು ರೈಲ್ವೆ ವಿಭಾಗವು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಯುಪಿಐ ಸೇವೆ ಒದಗಿಸಿದ್ದು, ಇದರಿಂದ ಪ್ರಯಾಣಿಕರಿಗೆ ತುಂಬಾ ಸಹಕಾರಿಯಾದಂತಾಗಿದೆ.

ಸದ್ಯ ಇದೀಗ ಪ್ರಯತಿನಿತ್ಯ ಸುಮಾರು 300ಕ್ಕೂ ಹೆಚ್ಚು ಪ್ರಯಾಣಿಕರು ಕೆಎಸ್‌ಆರ್‌ ನಿಲ್ದಾಣದ ಕೌಂಟರ್‌ನಲ್ಲಿ ಯುಪಿಐ ಮೂಲಕ ಹಣ ಪಾವತಿಸಿ ಟಿಕೆಟ್‌ ಖರೀದಿ ಮಾಡುಸತ್ತಿದ್ದಾರೆ ಎನ್ನಿವ ಮಾಹಿತಿ ಲಭ್ಯವಾಗಿದೆ. ಪ್ರಯಾಣಿಕರು ಹೋಗಬೇಕಾದ ಸ್ಥಳದ ಹೆಸರು ಹೇಳಿದ ತಕ್ಷಣ ಕೌಂಟರ್‌ನಲ್ಲಿ ಟಿಕೆಟ್‌ ನೀಡಲಾಗುತ್ತದೆ. ಬಳಿಕ ನಂತರ ಅಲ್ಲಿ ಅಳವಡಿಸಲಾದ ಕ್ಯೂ ಆರ್‌ ಕೋಡ್‌ ಸ್ಕ್ಯಾ‌ನ್‌ ಮಾಡಿ ವಿವಿಧ ಡಿಜಿಟಲ್‌ ಪಾವತಿ ವ್ಯವಸ್ಥೆ ಮೂಲಕ ಹಣ ಪಾವತಿಸ ಮಾಡಬಹುದಾಗಿದೆ.

ಭಾರತದಲ್ಲಿ ಮೊದಲ ಬಾರಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು ಕೆಎಸ್‌ಆರ್‌ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಕ್ಯೂ ಆರ್‌ ಕೋಡ್‌ ಆಧಾರಿತ ಯುಪಿಐ ಮೂಲಕ ಹಣ ಪಾವತಿಸಿ, ಟಿಕೆಟ್‌ ಖರೀದಿಸುವ ಸೇವೆ ಪ್ರಾರಂಭ ಮಾಡಿದೆ. ಕೆಎಸ್‌ಆರ್‌ ನಿಲ್ದಾಣದಲ್ಲಿ ಎರಡು, ದಂಡು ರೈಲು ನಿಲ್ದಾಣದಲ್ಲಿ ಒಂದು ಡಿಜಿಟಲ್‌ ಹಣ ಪಾವತಿಯ ಕೌಂಟರ್‌ಗಳ ಸೇವೆಯನ್ನು ಕಲ್ಪಿಸಲಾಗಿದೆ.

ಆದರೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ದಂಡು ರೈಲು ನಿಲ್ದಾಣಗಳಲ್ಲಿ ಕಲ್ಪಿಸಲಾಗಿರುವ ಈ ವ್ಯವಸ್ಥೆ ಬಗ್ಗೆ ಬಹುತೇಕ ಪ್ರಯಾಣಿಕರಿಗೆ ಮಾಹಿತಿ ಇಲ್ಲ. ಆದ್ದರೀದಮ ತುಂಬಾ ಜನ ಪ್ರಯಾಣಿಕರು ಈ ಎರಡು ನಿಲ್ದಾಣಗಳಲ್ಲಿರುವ ನಗದು ಪಾವತಿ ಕೌಂಟರ್‌ಗಳಲ್ಲಿಯೇ ಟಿಕೆಟ್‌ ಪಡೆಯಲು ಮುಂದಾಗುತ್ತಿದ್ದಾರೆ. ಚಿಲ್ಲರೆ ಸಮಸ್ಯೆ ಉಂಟಾದಾಗ ಮಾತ್ರ ರೈಲ್ವೆ ಸಿಬ್ಬಂದಿ, ಡಿಜಿಟಲ್‌ ಪಾವತಿ ಕೌಂಟರ್‌ನಲ್ಲಿ ಟಿಕೆಟ್‌ ಖರೀದಿ ಮಾಡುವಂತೆ ತಿಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಈ ಡಿಜಿಟಲ್‌ ಪಾವತಿಯಿಂದ ಪ್ರಯಾಣಿಕರು ಸರದಿ ಸಾಲಿನಲ್ಲಿ ಗಂಟೆಗಟ್ಟಲೇ ನಿಲ್ಲುವುದು ತಪ್ಪಿದಂತಾಗಿದೆ. ಆದರೆ ಈ ವ್ಯವಸ್ಥೆ ಬಗ್ಗೆ ತುಂಬಾ ಜನ ಪ್ರಯಾಣಿಕರಿಗೆ ಗೊತ್ತಿಲ್ಲ ಎನ್ನುವುದೇ ಅಸಮಾಧನದ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಎಲ್ಲಾ ಪ್ರಯಾಣಿಕರಿಗೂ ತಿಳಿಸಲಾಗುವುದು ಎಂದು ಬೆಂಗಳೂರು ವಿಭಾಗದ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+