SWR: ಹುಬ್ಬಳ್ಳಿ-ವಿಜಯಪುರ- ಬೆಂಗಳೂರು ರೈಲು ಸಂಚಾರ ರದ್ದು; ಎಲ್ಲಿಂದ ಎಲ್ಲಿವರೆಗೆ ಹಾಗೂ ಕಾರಣ ತಿಳಿಯಿರಿ

South Western Railway: ರೈಲ್ವೆಗೆ ಸಂಬಂಧಿಸಿದಂತಹ ಕಾಮಗಾರಿ ನಡೆಯುವ ಮಾರ್ಗಗಳಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗುತ್ತದೆ. ಹಾಗೆಯೇ ಇದೀಗ ಈ ಮಾರ್ಗಳಲ್ಲಿ ಫೆಬ್ರವರಿ 16ರಿಂದ 26ರ ವರೆಗೆ ರೈಲು ಸಂಚಾರದಲ್ಲಿ ಬದಲಾವಣೆಗಳಾಗಲಿವೆ. ಹಾಗಾದರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಹುಬ್ಬಳ್ಳಿ-ವಿಜಯಪುರ ರೈಲು ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ನೈಋತ್ಯ ರೈಲ್ವೆ ವಲಯವು ಹಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಿದೆ. ಫೆಬ್ರವರಿ 16ರಿಂದ 26ರ ವರೆಗೆ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆಗಳು ಆಗಲಿವೆ. ಕೆಲವು ರೈಲುಗಳು ಸಂಪೂರ್ಣವಾಗಿ ರದ್ದಾಗಿದ್ದರೆ, ಇನ್ನೂ ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ಪ್ರಯಾಣದ ಮುನ್ನ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಬಹುದು.

South Western Railway These Route Train Service will Cancelled till February 26

ವಿಜಯಪುರದ ಮುಗಳೊಳ್ಳಿ-ಜಡ್ರಾಮಕುಂಟಿ-ಆಲಮಟ್ಟಿ ನಿಲ್ದಾಣಗಳ ನಡುವೆ ಜೋಡಿ ರೈಲು ಮಾರ್ಗದ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನೆಲೆ ಈ ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಂಚಾರವನ್ನು ರದ್ದು ಮತ್ತು ಭಾಗಶಃ ರದ್ದುಪಡಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ತಿಳಿಸಿದೆ.

ಯಾವ್ಯಾವ ರೈಲು ಎಲ್ಲಿವರೆಗೆ ಸಂಚಾರ ತಾತ್ಕಾಲಿಕ ರದ್ದು?

* ಹುಬ್ಬಳ್ಳಿ-ಸೋಲಾಪುರ ಡೈಲಿ ಪ್ಯಾಸೆಂಜರ್ (56906) ರೈಲು- ಫೆಬ್ರವರಿ 17ರಿಂದ 25ರ ವರೆಗೆ
* ಸೋಲಾಪುರ-ಧಾರವಾಡ ಡೈಲಿ ಪ್ಲಾಸೆಂಜರ್ ಸ್ಪೆಷಲ್ ಫೆಬ್ರವರಿ 18ರಿಂದ 26ರ ವರೆಗೆ
* ಸೋಲಾಪುರ-ಹೊಸಪೇಟೆ ಡೈಲಿ ಎಕ್ಸ್‌ಪ್ರೆಸ್ (11415) ರೈಲು - ಫೆಬ್ರವರಿ 25 ರಂದು
* ಹೊಸಪೇಟೆ-ಸೋಲಾಪುರ ಡೈಲಿ ಎಕ್ಸ್ ಪ್ರೆಸ್ (11416) ರೈಲು- ಫೆಬ್ರವರಿ 26 ರಂದು

ಈ ರೈಲುಗಳ ಸಂಚಾರ ಭಾಗಶಃ ರದ್ದು

* ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 06545: ಯಶವಂತಪುರ-ವಿಜಯಪುರ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಗದಗ-ವಿಜಯಪುರ ನಿಲ್ದಾಣಗಳ ನಡುವೆ ಫೆಬ್ರವರಿ 16ರಿಂದ 24ರ ವರೆಗೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ವಿಜಯಪುರ ನಿಲ್ದಾಣದ ಬದಲಾಗಿ ಗದಗದಲ್ಲಿ ಕೊನೆಗೊಳ್ಳಲಿದೆ.

* ರೈಲು ಸಂಖ್ಯೆ 06546 ವಿಜಯಪುರ-ಯಶವಂತಪುರ ಡೈಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಫೆಬ್ರವರಿ17ರಿಂದ 25ರ ವರೆಗೆ ವಿಜಯಪುರದ ಬದಲಿಗೆ ಗದಗ ನಿಲ್ದಾಣದಿಂದ ಹೊರಡಲಿದೆ. ವಿಜಯಪುರ-ಗದಗ ನಿಲ್ದಾಣಗಳ ನಡುವಿನ ಪ್ರಯಾಣ ಭಾಗಶಃ ರದ್ದುಗೊಂಡಿದೆ.

* ಮೈಸೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 17307 ಮೈಸೂರು-ಬಾಗಲಕೋಟೆ ಬಸವ ಎಕ್ಸ್ ಪ್ರೆಸ್ ರೈಲು ವಿಜಯಪುರ ಮತ್ತು ಬಾಗಲಕೋಟಿ ನಿಲ್ದಾಣಗಳ ನಡುವೆ ಫೆಬ್ರವರಿ 16ರಿಂದ 24ರ ವರೆಗೆ ಭಾಗಶಃ ರದ್ದಾಗಿದೆ. ಇದು ವಿಜಯಪುರದಲ್ಲಿ ಕೊನೆಗೊಳ್ಳುತ್ತದೆ.

* ರೈಲು ಸಂಖ್ಯೆ 17308 ಬಾಗಲಕೋಟೆ-ಮೈಸೂರು ಬಸವ ಎಕ್ಸ್ ಪ್ರೆಸ್ ರೈಲು ಫೆಬ್ರವರಿ 17 ರಿಂದ 25 ರವರೆಗೆ ಬಾಗಲಕೋಟೆ ನಿಲ್ದಾಣದ ಬದಲು ವಿಜಯವುರದಿಂದ ಹೊರಡಲಿದೆ. ಬಾಗಲಕೋಟಿ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.

* ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಫೆಬ್ರವರಿ 16ರಿಂದ 24ರ ವರೆಗೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಬಾಗಲಕೋಟೆಯಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ.

* ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ಫೆಬ್ರವರಿ 17ರಿಂದ 25ರ ವರೆಗೆ ವಿಜಯಪುರದ ಬದಲಿಗೆ ಬಾಗಲಕೋಟೆಯಿಂದ ತನ್ನ ಪ್ರಯಾಣ ಆರಂಭಿಸಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.

* ರೈಲು ಸಂಖ್ಯೆ 06919 ಎಸ್‌ಎಸ್ಎಸ್ ಹುಬ್ಬಳ್ಳಿ-ವಿಜಯಪುರ ಪ್ಯಾಸೆಂಜ‌ರ್ ವಿಶೇಷ ರೈಲು ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಫೆಬ್ರವರಿ 17ರಿಂದ 25ರ ವರೆಗೆ ಭಾಗಶಃ ರದ್ದಾಗಿದೆ. ರೈಲು ಬಾಗಲಕೋಟೆಯಲ್ಲಿ ಕೊನೆಗೊಳ್ಳುತ್ತದೆ.

* ರೈಲು ಸಂಖ್ಯೆ 06920 ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜ‌ರ್ ವಿಶೇಷ ರೈಲು ವಿಜಯಪುರದ ಬದಲು ಬಾಗಲಕೋಟೆಯಿಂದ ಪ್ರಾರಂಭವಾಗಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+